ರಾಜ್ಯ ಮಟ್ಟದ ಟೇಬಲ್ ಟೆನಿಸ್: ದ್ವಿತೀಯ ಸ್ಥಾನ ಪಡೆದ ಉಡುಪಿ ತಂಡ

ಉಡುಪಿ: ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಮೈಸೂರು ಇದರ ಜಂಟಿ ಆಶ್ರಯದಲ್ಲಿ ನಡೆದ 2022 – 2023ನೇ ಸಾಲಿನ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಉಡುಪಿ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ಮೈಸೂರಿನ ಸಂತ ಫಿಲೋಮಿನಾ ಕಾಲೇಜಿನ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಪಂದ್ಯಾಕೂಟದಲ್ಲಿ ರಾಜ್ಯದ 28 ಜಿಲ್ಲೆಗಳಿಂದ ಆಯ್ಕೆಯಾದ ಕ್ರೀಡಾಳುಗಳ ತಂಡ ಭಾಗವಹಿಸಿದ್ದು, ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವಿಯಾನ್, ಅಮರ್, ಮುಹಮ್ಮದ್ ಹುನೈನ್ ಮತ್ತು ಎಂಜಿಎಂ ಪದವಿ ಪೂರ್ವ ಕಾಲೇಜಿನ ಆದಿತ್ಯ, ವಿದ್ಯೋದಯ ಪದವಿಪೂರ್ವ ಕಾಲೇಜಿನ ಜೆರೋಮ್ ರವರ ತಂಡ ಫೈನಲ್ ಪ್ರವೇಶಿಸಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ತಂಡದ ಸದಸ್ಯರು ಅತ್ಯುತ್ತಮವಾಗಿ ಆಟವಾಡಿ ಉಡುಪಿ ಜಿಲ್ಲೆಗೆ ಕ್ರೀಡಾ ಕ್ಷೇತ್ರದಲ್ಲಿ ಕೀರ್ತಿ ತಂದಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.
ಅಶ್ವಿನ್, ಮಂಜುನಾಥ್ ಜೋಗಿ ಅವರು ಈ ತಂಡಕ್ಕೆ ತರಬೇತಿಯನ್ನು ನೀಡಿದ್ದಾರೆ.
ತಂಡದ ಸದಸ್ಯರಾದ ವಿಯಾನ್ ಮತ್ತು ಆದಿತ್ಯ ಅವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರತಿಮ ಬಾಳಿಗ ಮತ್ತು ಆಡಳಿತ ಮಂಡಳಿಯವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
