ಪುಣೆ: 15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; 6 ಮಂದಿ ಬಂಧನ
![ಪುಣೆ: 15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; 6 ಮಂದಿ ಬಂಧನ ಪುಣೆ: 15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; 6 ಮಂದಿ ಬಂಧನ](https://www.varthabharati.in/sites/default/files/images/articles/2022/12/29/361695-1672288626.jpg)
ಪುಣೆ: ಮಹಾರಾಷ್ಟ್ರದ ಪುಣೆ ನಗರದಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿದ ಆರು ಮಂದಿ ದುರುಳರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸಂತ್ರಸ್ತೆಯ ತಾಯಿಯ ದೂರಿನ ಮೇರೆಗೆ ಆರು ಆರೋಪಿಗಳನ್ನು ಮಂಗಳವಾರ ಬಂಧಿಸಲಾಗಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆ ಹಾಗೂ ಆರೋಪಿಗಳ ಪೈಕಿ ಒಬ್ಬಾತ ಪರಿಚಿತರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಬಾಲಕಿಯನ್ನು ಚಾಕು ತೋರಿಸಿ ಅಪಹರಿಸಿದ್ದಾರೆ. ಅವರು ಈ ವರ್ಷದ ಜೂನ್ ಮತ್ತು ಡಿಸೆಂಬರ್ ನಡುವೆ ಇಲ್ಲಿನ ಲಾಡ್ಜ್ನಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಘಟನೆಯ ಬಗ್ಗೆ ಯಾರಿಗೂ ತಿಳಿಸಬಾರದು ಎಂದು ಹೇಳಿದ್ದ ಆರೋಪಿಗಳು ಬಾಲಕಿಯ ನಗ್ನ ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದಾಗಿ ಬೆದರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.