Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಅಂಜುಮನ್ ಶತಮಾನೋತ್ಸವ ಸಮಾರೋಪ...

ಭಟ್ಕಳ: ಅಂಜುಮನ್ ಶತಮಾನೋತ್ಸವ ಸಮಾರೋಪ ಸಮಾರಂಭ

29 Dec 2022 8:20 PM IST
share
ಭಟ್ಕಳ: ಅಂಜುಮನ್ ಶತಮಾನೋತ್ಸವ ಸಮಾರೋಪ ಸಮಾರಂಭ

ಭಟ್ಕಳ: ಉ.ಕ.ಜಿಲ್ಲೆಯ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾಗಿರುವ ಅಂಜುಮನ್ ಹಾಮಿಯೇ ಮುಸ್ಲಿಮೀನ್,  ಇದರ ಶತಮಾನೋತ್ಸವ ಸಮಾರೋಪ ಸಮಾರಂಭವು ಜ.1 ಮತ್ತು 2 ರಂದು ಅಂಜುಮನಾಬಾದ್ ನಲ್ಲಿ ನಡೆಯಲಿದೆ ಎಂದು ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಮುಝಮ್ಮಿಲ್ ಕಾಝೀಯಾ ತಿಳಿಸಿದ್ದಾರೆ. 

ಅವರು ಗುರುವಾರ ಅಂಜುಮನ್ ಕಾರ್ಯಾಲಯದಲ್ಲಿ ಈ ಕುರಿತು ಮಾಹಿತಿ ನೀಡಿ ಮಾತನಾಡಿದರು.

 ಸಮಾರೋಪ ಸಮಾರಂಭವು ಎರಡು ದಿನಗಳ ಕಾಲ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸುಪ್ರಿಂ ಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು,  ಭಾರತದ ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ.ಕುರೇಶಿ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಜಮೀಯತುಲ್  ಉಲೇಮಾ ಹಿಂದ್ ಉತ್ತರಪ್ರದೇಶದ ಅಧ್ಯಕ್ಷ ಮೌಲಾನ ಅಶ್ಹದ್ ರಷಾದಿ ಭಾಗವಹಿಸಲಿದ್ದಾರೆ ಎಂದು ಮುಹಮ್ಮದ್ ಮುಝಮ್ಮಿಲ್ ಕಾಝೀಯಾ ತಿಳಿಸಿದ್ದಾರೆ

ಗೌರವ ಅತಿಥಿಗಳಾಗಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ್, ಅಂತರಾಷ್ಟ್ರೀಯ ಖ್ಯಾತಿಯ ಪ್ರೇರಕ ಭಾಷಣಗಾರ ರಾಷಿದ್ ಗಝಾಲಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಂ ಉಪಸ್ಥಿತರಿರುವರು ಎಂದು ಅವರು ಮಾಹಿತಿ ನೀಡಿದರು. 

ಜ 2 ರಂದು ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮುಖ್ಯ ಅತಿಥಿಯಾಗಿ ಸುಪ್ರಿಂ ಕೋರ್ಟ್‍ನ ನಿವೃತ್ತ ನ್ಯಾಯದೀಶ ಜಸ್ಟಿಸ್ ಮಾರ್ಕಂಡೇಯ ಕಾಟ್ಜು,  ಭಾರತದ ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ.ಕುರೇಶಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಭಾಗವಹಿಸುತ್ತಿದ್ದು, ಗೌರವ ಅತಿಥಿಯಾಗಿ ರಾಜ್ಯಸಭಾ ಸದಸ್ಯ ಡಾ.ಸೈಯ್ಯದ್ ನಾಸಿರ್ ಹುಸೇನ್, ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಖ್ ಭಾಗವಹಿಸಲಿದ್ದಾರೆ. 

ಎರಡು ದಿನಗಳ ಸಮಾರಂಭದ ಅಧ್ಯಕ್ಷತೆಯನ್ನು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಮುಝಮ್ಮಿಲ್ ಕಾಝೀಯಾ ವಹಿಸಲಿದ್ದಾರೆ. 

ಮದ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಅಂಜುಮನ್ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಮುಝಮ್ಮಿಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು. 

ಈ ಸಂದರ್ಭದಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಿದ್ದೀಖ್ ಇಸ್ಮಾಯಿಲ್, ಶತಮಾನೋತ್ಸವ ಸಮಾರಂಭದ ಸಂಚಾಲಕ ಮುಹಮ್ಮದ್ ತನ್ವೀರ್ ಕಾಸರಗೋಡ್, ಅಂಜುಮನ್ ಅಲುಮ್ನಿ ಕಮಿಟಿಯ ಸಂಚಾಲಕ ಮುಹಮ್ಮದ್ ಅಶ್ಫಾಖ್ ಸಾದಾ, ಅಫ್ತಾಬ್ ಹುಸೇನ್ ಕೋಲಾ, ಹೆಚ್ಚುವರಿ ಪ್ರ.ಕಾ ಇಸ್ಹಾಖ್ ಶಾಬಂದ್ರಿ, ಮುಬಶ್ವಿರ್ ಹಲ್ಲಾರೆ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
Next Story
X