Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ: ಗಾಡ್ಗಿಳ್, ಕಸ್ತೂರಿರಂಗನ್ ವರದಿ...

ಕಾರ್ಕಳ: ಗಾಡ್ಗಿಳ್, ಕಸ್ತೂರಿರಂಗನ್ ವರದಿ ಅನುಷ್ಠಾನಗೊಳ್ಳಲಿ: ಕಿಶೋರ್ ಕೊಡ್ಗಿ

ಮಾಳದಲ್ಲಿ ಪಶ್ಚಿಮ ಘಟ್ಟ ತಪ್ಪಲಲ್ಲಿ ಔಷಧಿ ಸಸ್ಯಗಳ ಕ್ಷೇತ್ರೋತ್ಸವ

29 Dec 2022 8:38 PM IST
share
ಕಾರ್ಕಳ: ಗಾಡ್ಗಿಳ್, ಕಸ್ತೂರಿರಂಗನ್ ವರದಿ ಅನುಷ್ಠಾನಗೊಳ್ಳಲಿ: ಕಿಶೋರ್ ಕೊಡ್ಗಿ
ಮಾಳದಲ್ಲಿ ಪಶ್ಚಿಮ ಘಟ್ಟ ತಪ್ಪಲಲ್ಲಿ ಔಷಧಿ ಸಸ್ಯಗಳ ಕ್ಷೇತ್ರೋತ್ಸವ

ಮಾಳ (ಕಾರ್ಕಳ): ಪಶ್ಚಿಮ ಘಟ್ಟದ ಜೀವ ವೈವಿಧ್ಯತೆ ಸೇರಿದಂತೆ ಅರಣ್ಯವನ್ನು ಉಳಿಸಿ ಬೆಳೆಸುವುದು ಅರಣ್ಯ ಇಲಾಖೆ ಮಾತ್ರವಲ್ಲದೆ ಪ್ರತಿ ಯೊಬ್ಬ ಸಾರ್ವಜನಿಕರ ಜವಾಬ್ದಾರಿ. ಇದರೊಂದಿಗೆ ಅರಣ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕಾಗಿದೆ. ಇದಕ್ಕಾಗಿ ಮಾಧವ ಗಾಡ್ಗಿಲ್ ಹಾಗೂ ಕಸ್ತೂರಿರಂಗನ್ ವರದಿ  ಜಾರಿಗೊಳ್ಳಬೇಕಾದ ಅಗತ್ಯವಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎ.ಕಿಶೋರ್ ಕೊಡ್ಗಿ  ಅಭಿಪ್ರಾಯ ಪಟ್ಟಿದ್ದಾರೆ.

ಗುರುವಾರ ಕಾರ್ಕಳ ತಾಲೂಕು ಬಜಗೋಳಿಯ ಮಾಳದ ತ್ರಿಭುವನ ಮಾಳದಲ್ಲಿ ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ, ಕರ್ನಾಟಕ ಜೀವವೈವಿಧ್ಯ ಮಂಡಳಿ ಹಾಗೂ ಕಾಂಪ್ಕೋ ಮಂಗಳೂರು ಇವರ ಸಹಯೋಗ ದಲ್ಲಿ ರಾಷ್ಟ್ರೀಯ ಔಷಧಿ ಗಿಡಮೂಲಿಕಾ ಮಂಡಳಿಯ ಪ್ರಾಯೋಜಿತ ಯೋಜನೆ ಅಡಿಯಲ್ಲಿ ನಡೆದ ‘ಪಶ್ಚಿಮ ಘಟ್ಟದ ತಪ್ಪಲಿನ ಔಷಧಿ ಸಸ್ಯಗಳ ಕ್ಷೇತ್ರೋತ್ಸವ’ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಇವುಗಳೊಂದಿಗೆ ಅರಣ್ಯ ಪ್ರದೇಶದ ಅತಿಕ್ರಮಣ ಮತ್ತು ರೈತರ ಬೆಳೆಗಳಿಗೆ ಕಾಡುಪ್ರಾಣಿಗಳ ಹಾವಳಿ ತಡೆಯಲು ಸೂಕ್ತ ಯೋಜನೆ ರೂಪಿಸುವ ಅಗತ್ಯವಿದೆ ಎಂದ ಅವರು, ಕರಾವಳಿ ಜಿಲ್ಲೆಗಳು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿರುವ ಕ್ಯಾಂಪ್ಕೋ ಸದಸ್ಯರ ಮೂಲಕ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಔಷಧೀಯ ಸಸ್ಯ ಬೆಳೆಸಲು ಅಗತ್ಯ ಪ್ರೋತ್ಸಾಹ ನೀಡುವುದಾಗಿ ಭರವಸೆ ನೀಡಿದರು.

ಭಾರತೀಯ ಆಯುರ್ವೇದದಲ್ಲೂ ಸ್ಥಾನಪಡೆದಿರುವ ಅಡಿಕೆ ಈಗ ಮತ್ತೆ ಸುದ್ಧಿಯಲ್ಲಿದೆ. ಅಡಿಕೆ ಕ್ಯಾನ್ಸರ್ ಕಾರಕ ಎಂದು ಗುಲ್ಲೆಬ್ಬಿಸಿ, ಅದಕ್ಕೆ ಡಬ್ಲ್ಯುಎಚ್ಓದಲ್ಲೂ ಮಾನ್ಯತೆ ಸಿಕ್ಕಿದ್ದು, ಅದರ ವಿಚಾರಣೆ ಈಗ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದೆ. ನಮ್ಮ ಆಯುರ್ವೇದ ತಜ್ಞರು, ನಾಟಿ ವೈದ್ಯರು ಈ ಬಗ್ಗೆ ಗಮನ ಹರಿಸಬೇಕಿದೆ. ಕ್ಯಾಂಪ್ಕೋ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಅಡಿಕೆ ಪರವಾಗಿ ನ್ಯಾಯಾಲಯದಲ್ಲಿ ಹೋರಾಡುತ್ತಿದೆ. ನಮ್ಮ ರಾಜಕಾರಣಿಗಳಿಗೆ ಈ ಬಗ್ಗೆ ಜ್ಞಾನೋದಯವಾಗ ಬೇಕಿದ್ದು, ಬರ್ಮಾ, ಭೂತಾನ್ ಗಳಿಂದ ಅಕ್ರಮವಾಗಿ ಆಗುತ್ತಿರುವ ಅಡಿಕೆ ಆಮದಿಗೆ ಕಡಿವಾಣ ಬೀಳಬೇಕಿದೆ ಎಂದರು.

ಅಡಿಕೆ ಜೊತೆಗೆ ತೋಟಗಳಲ್ಲಿ ಔಷಧೀಯ ಸಸ್ಯಗಳನ್ನು ಬೆಳೆಸಿ, ಅವುಗಳ ಮಾರಾಟದಿಂದ ಹೆಚ್ಚಿನ ಲಾಭ ಗಳಿಸಲು ಸಾಧ್ಯವಿದ್ದು, ಈ ಬಗ್ಗೆ ಕ್ಯಾಂಪ್ಕೋದ 1.30 ಲಕ್ಷಕ್ಕೂ ಅಧಿಕ ಸದಸ್ಯರಿಗೆ ಮಾಹಿತಿ ನೀಡಲಾಗುವುದು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾ ಧಿಕಾರಿ ಮತ್ತು ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧಿಕಾರಿ ಸುದರ್ಶನ್ ಜಿ.ಎ., ಔಷಧೀಯ ಸಸ್ಯಗಳು ಮತ್ತು ಆಯುರ್ವೇದದಲ್ಲಿ ಮನುಕುಲದ ಆರೋಗ್ಯವಿದೆ. ಗಿಡಮೂಲಿಕಾ ಸಸ್ಯಗಳನ್ನು ಲ್ಯಾಬ್ ಗಳಲ್ಲಿ ಸಂಸ್ಕರಿಸಿ ಆಯುರ್ವೇದ, ಯುನಾನಿ ಮತ್ತು ಹೋಮಿಯೋಪಥಿ ಚಿಕಿತ್ಸೆಯಲ್ಲಿ ಔಷಧಿಯಾಗಿ ಬಳಸುವುದು ಪ್ರಮುಖ ಆರ್ಥಿಕ ಚಟುವಟಿಕೆಯಾಗಿದ್ದು, ಈ ಔಷಧಗಳು ಮತ್ತು ಔಷಧಗಿಡದ ವಿವಿಧ ಭಾಗಗಳು ಹೊರ ದೇಶಗಳಿಗೆ ರಫ್ತುಆಗುತ್ತಿದೆ. ಗಿಡಮೂಲಿಕೆ ಸಸ್ಯಗಳನ್ನು ರೈತರು ತಮ್ಮ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುವ ಮೂಲಕ ಹೆಚ್ಚಿನ ಆರ್ಥಿಕ ಲಾಭ ಪಡೆಯಲು ಸಾಧ್ಯವಿದೆ ಎಂದರು.

ಅಪರ ಪ್ರಧಾನ ಮುಖ್ಯಅರಣ್ಯ ಸಂರಕ್ಷಣಾಧಿಕಾರಿ ಮತ್ತು ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಸದಸ್ಯ ಕಾರ್ಯದರ್ಶಿ ಅನಿತ ಎಸ್. ಅರೇಕಲ್ ಮಾತನಾಡಿ, ಯಾವುದೇ ಅಡ್ಡ ಪರಿಣಾಮಗಳಿಲ್ಲದ, ಪ್ರಕೃತಿಗೆ ಪೂರಕವಾದ ಚಿಕಿತ್ಸೆ ನೀಡುವ ಆಯುರ್ವೇದದಲ್ಲಿ ಔಷಧ ಗಿಡಮೂಲಿಕೆಗಳಿಗೆ ಅತ್ಯಂತ ಮಹತ್ವದ ಸ್ಥಾನ ಮತ್ತು ಬೇಡಿಕೆ ಇದೆ. ಔಷಧ ಗಿಡಮೂಲಿಕೆ ಸಸ್ಯಗಳನ್ನು ಬೆಳೆಸುವ ಮೂಲಕ ಜೀವ ವೈವಿಧ್ಯತೆಯ ಬೆಳವಣಿಗೆಗೆ ಎಲ್ಲರೂ ಸಹಕಾರ ನೀಡಬೇಕು. ಪ್ರಕೃತಿಯ ಜೀವ ವೈವಿಧ್ಯತೆ ನಾಶವಾದರೆ ಮಾನವ ಸಂಕುಲದ ಮೇಲೆ ಅದರ ದುಷ್ಪರಿಣಾಮ ಬೀರಲಿದೆ ಎಂದರು.

ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ. ಮಾತನಾಡಿ, ಅರಣ್ಯ ಇಲಾಖೆಯಲ್ಲಿ ಇತ್ತೀಚೆಗೆ ನೇಮಕಗೊಂಡ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ ಬಗ್ಗೆ ಹೆಚ್ಚಿನ ಪರಿಚಯ ಮೂಡಿಸುವುದು ಅಗತ್ಯವಾಗಿದೆ. ಅರಣ್ಯದಲ್ಲಿ ಗಸ್ತು ಸಂದರ್ಭದಲ್ಲಿ ಇಂತಹ ಸಸ್ಯಗಳ ಬೆಳವಣಿಗೆ ಮತ್ತು ರಕ್ಷಣೆಗೆ ಕಾರ್ಯಪ್ರವೃತ್ತರಾಗಬೇಕು. ಅರಣ್ಯ ಇಲಾಖೆಯ ನರ್ಸರಿಗಳಲ್ಲೂ ಅಧಿಕ ಸಂಖ್ಯೆಯ ಗಿಡಮೂಲಿಕಾ ಸಸ್ಯಗಳನ್ನು ಬೆಳೆಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಬೈಲೂರು ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ವಿನಾಯಕಾನಂದಜಿ ಮಹಾರಾಜ ಆಶೀರ್ವಚನ ನೀಡಿ ತಾನು 12 ವರ್ಷಗಳ ಕಾಲ ನರ್ಮದಾ ನದಿ ತಟದ ದಟ್ಟ ಅರಣ್ಯದಲ್ಲಿದ್ದಾಗ ಅಲ್ಲಿನ ಆದಿವಾಸಿಗಳು ಪ್ರಕೃತಿಯ ನೆರವಿನಿಂದಲೇ ಆರೋಗ್ಯವಂತರಾಗಿರುವುದನ್ನು, ತಮ್ಮೆಲ್ಲಾ ಅನಾರೋಗ್ಯಕ್ಕೂ ಪ್ರಕೃತಿಯಲ್ಲಿರುವ ಔಷಧೀಯ ಸಸ್ಯಗಳನ್ನೇ ಆಶ್ರಯಿಸಿರುವುದನ್ನು ಗಮನಿಸಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಮಾಳ ಗ್ರಾಪಂ ಅಧ್ಯಕ್ಷೆ ರಕ್ಷಿತಾ ಶೆಟ್ಟಿ, ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಎಂ ನಾಯಕ್, ನಿಟ್ಟೆ ವಿದ್ಯಾ ಸಂಸ್ಥೆಯ ಅಶೋಕ್ ಅಡ್ಯಂತಾಯ, ಕಾರ್ಯಕ್ರಮದ ಸಂಚಾಲಕ ಡಾ.ಸತ್ಯನಾರಾಯಣ ಭಟ್ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ಔಷಧ ವಿತರಣೆ ಕಾರ್ಯಕ್ರಮವೂ ನಡೆಯಿತು. ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರದ ಡಾ.ಪ್ರಭು ಸ್ವಾಗತಿಸಿದರು. ಭವನ್ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

share
Next Story
X