ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತಕ್ಕೆ ನಿರ್ಧಾರ

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.29: ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿಗ್ರಾಹಕರಿಗೆ ಲಭಿಸಲಿದೆ ಎಂದು ಬೆಸ್ಕಾಂ ಪ್ರಕಟನೆ ತಿಳಿಸಿದೆ.
'ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ' ಎಂದು ಇಂಧನ ಸಚಿವ ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ.
— Sunil Kumar Karkala (@karkalasunil) December 29, 2022
ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ.@CMofKarnataka