ಬಿಐಟಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಚಟುವಟಿಕೆಗಳ ಕಾರ್ಯಾಗಾರ

ಮಂಗಳೂರು: ಬ್ಯಾರೀಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಬಿಐಟಿ)ಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದೃಗ್ವಿಜ್ಞಾನದ (Optics) ಹಲವು ವಿಷಯಗಳ ಪ್ರಾಯೋಗಿಕ ಚಟುವಟಿಕೆ ಕಾರ್ಯಾಗಾರ ಬುಧವಾರ ನಡೆಯಿತು.
ಬಿಐಟಿಯು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕಲಿಕೆಗೆ ಅನುಕೂಲವಾಗುವಂತಹ ಚಟುವಟಿಕೆಗಳನ್ನು ಕಳೆದ ಹತ್ತು ವರ್ಷಗಳಿಂದ ನಡೆಸುತ್ತಾ ಬಂದಿದ್ದು, ಹತ್ತನೇ ತರಗತಿಯ ಸುಮಾರು 100 ವಿದ್ಯಾರ್ಥಿಗಳು ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡಿದ್ದಾರೆ.
ಕಾರ್ಯಕ್ರಮವನ್ನು ಪ್ರೊ. ಪೃಥ್ವಿರಾಜ್ ಸಂಯೋಜಿಸಿದರು. ಪ್ರೊ. ಮಾಲಾಶ್ರೀ ವಂದಿಸಿದರು

Next Story





