Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಕಡೆಗಣನೆ,...

ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಕಡೆಗಣನೆ, ಪ್ರಾದೇಶಿಕ ಪಕ್ಷದಿಂದ ಮಾತ್ರ ಅಭಿವೃದ್ಧಿ: ಕುಮಾರಸ್ವಾಮಿ

29 Dec 2022 9:18 PM IST
share
ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಕಡೆಗಣನೆ, ಪ್ರಾದೇಶಿಕ ಪಕ್ಷದಿಂದ ಮಾತ್ರ ಅಭಿವೃದ್ಧಿ: ಕುಮಾರಸ್ವಾಮಿ

ತುಮಕೂರು, ಡಿ.29:ರಾಷ್ಟ್ರೀಯ ಪಕ್ಷಗಳು ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿದ್ದು,ರಾಜ್ಯದ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷಗಳು ಅನಿವಾರ್ಯವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೆಬ್ಬೂರಿನಲ್ಲಿ ಪ್ರಾರಂಭಗೊಂಡ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ಪಂಚರತ್ನ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ರಾಜ್ಯವನ್ನು ಅಭಿವೃದ್ಧಿಪಡಿಸಬೇಕೆಂಬ ಉದ್ದೇಶದಿಂದ ಜೆಡಿಎಸ್ ಈ ಯಾತ್ರೆಯನ್ನು ಆರಂಭಿಲಾಗಿದೆ ಎಂದರು.

ನಮ್ಮ ರಾಜ್ಯದಲ್ಲಿ ಶೇ.57ರಷ್ಟು ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಆಗಿಲ್ಲವೆಂದು ಕೇಂದ್ರ ಸರಕಾರದ ವರದಿ ಹೇಳಿದೆ. ಸರಕಾರಿ ಶಾಲೆಗಳಲ್ಲಿ ಇಂತಹ ಪರಿಸ್ಥಿತಿಯಲ್ಲಿ ಎಂತಹ ಶಿಕ್ಷಣ ದೊರೆಯುತ್ತಿದೆ ಎನ್ನುವುದನ್ನು ಜನರು ಅರಿಯಬೇಕಿದೆ, 2006ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ಒಂದೇ ವರ್ಷದಲ್ಲಿ 170 ಕಾಲೇಜು ಪ್ರಾರಂಭಿಸಿದ್ದೆ,1400  ಪ್ರೌಢಶಾಲೆ, 400 ಜೂನಿಯರ್ ಕಾಲೇಜು ತೆರೆದಿದ್ದೆ.ಒಂದು ಕಾಲೇಜಿಗೆ ತಲಾ 2 ಕೋಟಿ ಅನುದಾನ ಕೊಟ್ಟಿದ್ದೆ.ಆನಂತರದಲ್ಲಿ ಬಂದ ಸರಕಾರಗಳು ಅದನ್ನು ಮುಂದುವರೆಸದೆ ನಮ್ಮ ಯುವಜನತೆಗೆ ಗುಣಮಟ್ಟದ ಶಿಕ್ಷಣ ದೊರೆಯದಂತೆ ಮಾಡಿವೆ ಎಂದರು.

ಸರಕಾರಿ ಶಾಲೆಗಳನ್ನು ಬ್ರೀಷರ ಕಾಲದಿಂದ ಕಟ್ಟಿದ್ದಾರೆ. ಶಾಲೆಗಳ ಛಾವಣಿ, ಸೋರುತ್ತಿವೆ,. ಶೌಚಾಲಯ, ಶಿಕ್ಷಕರ ಕೊರತೆ. ಇದೆ. ಮಕ್ಕಳ ಶಿಕ್ಷಣವನ್ನು ಒಳ್ಳೆ ಶಿಕ್ಷಣ ಪಡೆಯಲು ಖಾಸಗೀ ಶಾಲೆಗಳಿಗೆ ಸೇರಿಸುತ್ತಿದ್ದಾರೆ.ಸಾಲ ಮಾಡುತ್ತಿದ್ದಾರೆ. ಉತ್ತಮ ಆರೋಗ್ಯ ಸೇವೆ ಪಡೆಯಲು ಹಣ ಖರ್ಚು ಮಾಡಬೇಕಾದ ಸ್ಥಿತಿ ಇದೆ ರಾಜ್ಯದ ಜನಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪಂಚರತ್ನ ಯೋಜನೆಯನ್ನು ರೂಪಿಸಲಾಗಿದೆ.ಮಾ.20ರವರೆಗೆ ಉತ್ತರ ಕರ್ನಾಟಕದ ವರೆಗೆ ಪ್ರವಾಸ ಮಾಡಲಿದ್ದೇನೆ.ಯಾವುದೇ ಕಾರಣಕ್ಕೂ ಜೆಡಿಎಸ್,ಕಾಂಗ್ರೆಸ್-ಬಿಜೆಪಿ ಜೊತೆ ಸೇರಿ ಸರಕಾರವನ್ನು ರಚಿಸುವುದಿಲ್ಲ, 2023ರಲ್ಲಿ ಜನರ ಆರ್ಶೀವಾದದಿಂದ ಜನತಾ ಸರಕಾರವನ್ನು ರಚನೆ ಮಾಡುವ ಮೂಲಕ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ನೀಡಿರುವ ಭರವಸೆಯನ್ನು ಈಡೇರಿಸುತ್ತೇನೆ ಎಂದು ಹೇಳಿದರು.

ಪ್ರತಿಭೆ ಇದ್ದರೂ ಗ್ರಾಮೀಣ ಮಕ್ಕಳಿಗೆ ಉದ್ಯೋಗ ದೊರಕುತ್ತಿಲ್ಲ, ನಾಡಿನ ಬಡ, ಗ್ರಾಮೀಣ ವಿದ್ಯಾರ್ಥಿಗಳ ಶೇಯೋಭಿವೃದ್ಧಿಗೆ ಪಂಚರತ್ನ ಯೋಜನೆ ಜಾರಿಗೆ, ಯಾದಗಿರಿಯಿಂದ ಚಾಮರಾಜನಗರದವರೆಗೆ ಜನರು ಕಷ್ಟಹೇಳುತ್ತಾರೆ, ಬೇರೆ ಮುಖ್ಯಮಂತ್ರಿಗಳ ಬಳಿಗೆ ಹೋಗುವುದಿಲ್ಲ, ಅವರ್ಯಾರು ಸೇರಿಸುವುದಿಲ್ಲ ಜನರ ಕಷ್ಟಗಳನ್ನು ಅರಿತು ಜನರ ಬಳಿಗೆ ಬಂದಿದ್ದೇನೆ ಆರ್ಶೀವಾದ ಮಾಡಿ ಎಂದು ಮನವಿ ಮಾಡಿದರು.

ಗ್ರಾಮಾಂತರ ಶಾಸಕ ಗೌರಿಶಂಕರ್,ನಿಮ್ಮ ಮನೆಯ ಹುಡುಗ, ನನ್ನ ತಮ್ಮ, ಅವರ ತಂದೆಯ ಕಾಲದಿಂದಲೂ ನಮ್ಮ ಕುಟುಂಬದೊಂದಿಗೆ ಬೆಳೆದಿರುವ ಹೃದಯವಂತ,ಬಡ ಕುಟುಂಬಗಳ ಬಗ್ಗೆ ಕಾಳಜಿ ಇರುವ ಗೌರಿಶಂಕರ್ ಕೋವಿಡ್ ಸಂಕಷ್ಟದಲ್ಲಿ ಒಂದೂವರೆ ಲಕ್ಷ ಕುಟುಂಬಗಳಿಗೆ ಕೋಟ್ಯಂತರ ರೂ ಖರ್ಚು ಮಾಡಿ ನೆರವು ನೀಡಿದ್ದಾರೆ, ಇಂತಹ ಹೃದಯವಂತನನ್ನು ಮತ್ತೆ ಆಯ್ಕೆ ಮಾಡಬೇಕು ಎಂದು ಗ್ರಾಮಾಂತರ ಮತದಾರರಲ್ಲಿ ವಿನಂತಿಸಿಕೊಂಡರು.

ಯಾತ್ರೆಯಲ್ಲಿ ಶಾಸಕ ಡಿ.ಸಿ.ಗೌರಿಶಂಕರ್,ವಿಧಾನ ಪರಿಷತ್ ಸದಸ್ಯ ಬೋಜೇಗೌಡ, ಜಿಲ್ಲಾಧ್ಯಕ್ಷ ಆರ್.ಸಿ.ಆಂಜಿನಪ್ಪ, ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು,ಪಾಲಿಕೆ ಸದಸ್ಯರಾದ ಹೆಚ್.ಡಿ.ಕೆ.ಮಂಜುನಾಥ್,ಧರಣೇಂದ್ರಕುಮಾರ್ ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು.

share
Next Story
X