Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಧಾನ ಸಭೆ ಚುನಾವಣೆ | ‘ಕಾಂಗ್ರೆಸ್...

ವಿಧಾನ ಸಭೆ ಚುನಾವಣೆ | ‘ಕಾಂಗ್ರೆಸ್ ವಿಷನ್ 2023’ ವೆಬ್‍ಸೈಟ್ ಬಿಡುಗಡೆ

ಜನರ ಭಾವನೆಗಳಿಗೆ ಸ್ಪಂದಿಸಿ ಪರಿಹರಿಸಲು ವಿನೂತನ ಮಾರ್ಗ: ಡಾ.ಜಿ.ಪರಮೇಶ್ವರ್

29 Dec 2022 9:24 PM IST
share
ವಿಧಾನ ಸಭೆ ಚುನಾವಣೆ | ‘ಕಾಂಗ್ರೆಸ್ ವಿಷನ್ 2023’ ವೆಬ್‍ಸೈಟ್ ಬಿಡುಗಡೆ
ಜನರ ಭಾವನೆಗಳಿಗೆ ಸ್ಪಂದಿಸಿ ಪರಿಹರಿಸಲು ವಿನೂತನ ಮಾರ್ಗ: ಡಾ.ಜಿ.ಪರಮೇಶ್ವರ್

ಬೆಂಗಳೂರು, ಡಿ.29: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ‘ಕಾಂಗ್ರೆಸ್ ವಿಷನ್ 2023’ ವೆಬ್ ಸೈಟ್ ಅನ್ನು ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಅನಾವರಣ ಮಾಡಲಾಯಿತು.

ಗುರುವಾರ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರಿಗೆ ಏನೆಲ್ಲಾ ಸೌಲಭ್ಯಗಳನ್ನು ನೀಡುತ್ತೇವೆ ಎಂಬ ಭರವಸೆಗಳನ್ನು ತಿಳಿಸುವುದು ಮುಖ್ಯ. ಆ ದೃಷ್ಟಿಯಲ್ಲಿ ಕಾಂಗ್ರೆಸ್ ಪಕ್ಷ ಪ್ರತಿ ಬಾರಿ ಚುನಾವಣೆಗೆ ಹೋಗುವ ಸಂದರ್ಭದಲ್ಲಿ ಪಕ್ಷದ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ತಿಳಿಸುತ್ತದೆ. ಕಾಂಗ್ರೆಸ್ ಭರವಸೆಗಳನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸುವ ಮೂಲಕ ಇತರೆ ಪಕ್ಷಗಳಿಗಿಂತ ವಿಭಿನ್ನವಾಗಿ ನಡೆದುಕೊಳ್ಳುತ್ತದೆ ಎಂದು ತಿಳಿಸಿದರು.

2013ರಲ್ಲಿ ಕಾಂಗ್ರೆಸ್ ಚುನಾವಣೆ ಎದುರಿಸುವ ಮುನ್ನ ರಾಜ್ಯದ ಜನತೆಗೆ 160 ಭರವಸೆಗಳನ್ನು ನೀಡಿದ್ದೆವು. ಆ ಭರವಸೆಗಳು 2-3 ಹಂತದಲ್ಲಿ ಈಡೇರಿದವು. ಇದರಲ್ಲಿ ಕೆಲವು ಭರವಸೆಗಳು ಅಧಿಕಾರಕ್ಕೆ ಬಂದ ಮೊದಲ ವರ್ಷಗಳಲ್ಲೆ ಕಾರ್ಯರೂಪಗೊಳಿಸಲಾಯಿತು. ಅನ್ನಭಾಗ್ಯ ಯೋಜನೆ ಅವುಗಳಲ್ಲಿ ಒಂದಾಗಿದೆ. ಇನ್ನು ದೀರ್ಘಾವಧಿ ಭರವಸೆಗಳಾದ ಕೈಗಾರಿಕೆ ಅಭಿವೃದ್ಧಿ, ವಿವಿಧ ಕ್ಷೇತ್ರಗಳ ಭರವಸೆಗಳನ್ನು ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಈ ಪ್ರಣಾಳಿಕೆ ಎಂಬುದು ಕಾಂಗ್ರೆಸ್ ಪಾಲಿಗೆ ಬಹಳ ಪ್ರಮುಖವಾದುದು. ಯುವಕರ ಆಶೋತ್ತರಗಳು ಪ್ರಣಾಳಿಕೆಯಲ್ಲಿ ಇರಬೇಕು ಎಂದು ಮಧುಬಂಗಾರಪ್ಪ ಅವರನ್ನು ಸಮಿತಿಯಲ್ಲಿ ಅವಕಾಶ ನೀಡಲಾಗಿದೆ ಎಂದರು.

ಕಾಂಗ್ರೆಸ್ ವಿಷನ್-2023 ವೆಬ್ ಸೈಟ್‍ನಿಂದ ಜನಸಮುದಾಯದ ಭಾವನೆ, ಸಮಸ್ಯೆಗಳನ್ನು ಅವರಿಂದಲೇ ತಿಳಿದುಕೊಂಡು ಅವುಗಳಿಗೆ ಪರಿಣಾಮಕಾರಿ ಪರಿಹಾರ ನೀಡುವ ಕಾರ್ಯಕ್ರಮ ರೂಪಿಸಲು ಅವಕಾಶ ಕಲ್ಪಿಸಲಾಗುತ್ತದೆ. ಜನರನ್ನು ಬೇರೆ ಬೇರೆ ರೀತಿಯಲ್ಲಿ ಸಂಪರ್ಕಿಸಲು ನಾವು ಉದ್ದೇಶಿಸಿದ್ದು, ಅದರಲ್ಲಿ ಈ ವೆಬ್ ಸೈಟ್ ಕೂಡ ಒಂದಾಗಿದೆ. ಈ ವೆಬ್ ಸೈಟ್ ನಲ್ಲಿ ಯಾರು ಬೇಕಾದರೂ ತಮ್ಮ ಸಲಹೆ ಸೂಚನೆ ನೀಡಬಹುದು. ಇನ್ನು ನಮಗೆ ಪತ್ರ ಬರೆಯಬಹುದು ಎಂದು ತಿಳಿಸಿದರು.

ಎಐಸಿಸಿಯು ಉದಯಪುರದಲ್ಲಿ ಚಿಂತನ ಶಿಬಿರವನ್ನು ರೂಪಿಸಿ ಎಲ್ಲ ರಾಜ್ಯಗಳ ಸಮಸ್ಯೆಗಳನ್ನು ಚರ್ಚೆ ಮಾಡಲಾಗಿತ್ತು. ಅದೇ ರೀತಿ ರಾಜ್ಯದಲ್ಲೂ ಚಿಂತನ ಶಿಬಿರ ಮಾಡಲಾಗಿದೆ. ಇದು ಕೇವಲ ಸಂಘಟನೆ ವಿಚಾರ ಮಾತ್ರವಲ್ಲದೇ, ಜನಸಮುದಾಯದ ಸಮಸ್ಯೆಗಳನ್ನು ಚರ್ಚೆ ಮಾಡಲು ಆರು ವಿಭಾಗ ಮಾಡಲಾಗಿದೆ. ಕೃಷಿ, ಶಿಕ್ಷಣ, ಆರೋಗ್ಯ, ಆರ್ಥಿಕ, ಸಂಘಟನೆ ಸೇರಿದಂತೆ ವಿವಿಧ ಸಮಿತಿ ಮಾಡಿ, ಆಯಾ ಕ್ಷೇತ್ರಗಳ ಬಗ್ಗೆ ಚರ್ಚೆ ಮಾಡಲಾಗಿದ್ದು, ಅದರ ಅಂಶಗಳನ್ನು ಪ್ರದೇಶ ಕಾಂಗ್ರೆಸ್ ಸಮಿತಿ ನಮಗೆ ನೀಡಿದ್ದು ಅದರಲ್ಲಿ ಯಾವುದು ಪ್ರಮುಖವಾಗಿದೆ ಎಂದು ಚರ್ಚಿಸಿ ಅವುಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಯುವಕರ ಸಮಸ್ಯೆಗಳು, ಮಹಿಳೆಯರ ಸಮಸ್ಯೆ, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸಂಘಗಳ ಸಮಸ್ಯೆಗಳ ಬಗ್ಗೆ ಗಮನಹರಿಸಲಾಗುತ್ತದೆ. ಅಲ್ಲದೆ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿನ ಸಮಸ್ಯೆ ಬಗ್ಗೆಯೂ ಹೆಚ್ಚಿನ ಗಮನಹರಿಸಲಾಗಿದೆ. ಇನ್ನು ಕೃಷಿ ಕ್ಷೇತ್ರಕ್ಕೆ ಅತ್ಯಂತ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು. ರೈತನ ಸಮಸ್ಯೆಯಿಂದ ಮಾರಾಟದ ಹಂತದವರೆಗೂ ಅನೇಕ ಸಮಸ್ಯೆಗಳಿವೆ. ಇವುಗಳನ್ನು ಬಗೆಹರಿಸುವುದು ಬಹಳ ಮುಖ್ಯ. ಗ್ರಾಮೀಣ ಮೂಲಸೌಕರ್ಯ ಪ್ರಮುಖ ಆದ್ಯತೆ ಆಗಿದೆ. ಇನ್ನು ಬಹಳ ಪ್ರಮುಖವಾಗಿ ಬೆಂಗಳೂರು ನಗರಕ್ಕೆ ಬೇಕಾಗಿರುವ ಕುಡಿಯುವ ನೀರು, ವಿದ್ಯುತ್ ಸಮಸ್ಯೆ, ಮೂಲಸೌಕರ್ಯ, ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿದ್ದೇವೆ. ಹೀಗಾಗಿ ಬೆಂಗೂರಿಗೆ ಪ್ರತ್ಯೇಕ ಪ್ರಣಾಳಿಕೆ ಭಾಗ ಮಾಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಪ್ರಚಾರ ಸಮಿತಿಯ ಉಪಾಧ್ಯಕ್ಷ  ಪ್ರೊ. ರಾಧಾಕೃಷ್ಣ, ಮಧು ಬಂಗಾರಪ್ಪ, ಸಮಿತಿಯ ಸದಸ್ಯ ಹುಸೇನ್ ಹಾಗೂ ರಾಜು ಗೌಡ ಉಪಸ್ಥಿತರಿದ್ದರು.

''ಒಂದೊಂದು ಕ್ಷೇತ್ರಕ್ಕೆ 10-15 ಅರ್ಜಿಗಳು ಬಂದಿವೆ''

ಹಳೇ ಮೈಸೂರು ಭಾಗ ಹಾಗೂ ಕರಾವಳಿಯಲ್ಲಿ ಅಭ್ಯರ್ಥಿಗಳಿಲ್ಲ ಎಂಬ ಮಾತಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್ ಅವರು, ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲೇ ಅಭ್ಯರ್ಥಿಗಳ ಕೊರತೆ ಎಂಬುದಿಲ್ಲ. ಒಂದೊಂದು ಕ್ಷೇತ್ರಕ್ಕೆ 10-15 ಟಿಕೆಟ್ ಅರ್ಜಿಗಳು ಬಂದಿವೆ. ಹಣವನ್ನು ನೀಡಿ ಇಷ್ಟು ಟಿಕೆಟ್ ಅರ್ಜಿಗಳು ಬಂದಿವೆ. ಕೆಲವು ಕ್ಷೇತ್ರಗಳಲ್ಲಿ ಅವರು ಬಲಿಷ್ಠವಾಗಿದ್ದರೆ, ಕೆಲವು ಕ್ಷೇತ್ರಗಳಲ್ಲಿ ನಾವು ಬಲಿಷ್ಠವಾಗಿದ್ದೇವೆ ಎಂದರು.

ಬಿಜೆಪಿಯವರು ಭಾವನಾತ್ಮಕ ವಿಚಾರ ತೆಗೆದುಕೊಂಡು ಚುನಾವಣೆಗೆ ಹೋಗುತ್ತಾರೆ. ಅಧಿಕಾರ ನಡೆಸುವಾಗಲೂ ಭಾವನೆ ಕೆರಳಿಸುವಂತೆ ಮಾಡುತ್ತಾರೆ. ಕಾಂಗ್ರೆಸ್ ಅಭಿವೃದ್ಧಿಯ ಅಂಶಗಳಿಂದ ಚುನಾವಣೆ ಎದುರಿಸುತ್ತದೆ.

-ಡಾ.ಜಿ.ಪರಮೇಶ್ವರ್, ಮಾಜಿ ಉಪಮುಖ್ಯಮಂತ್ರಿ

share
Next Story
X