Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಾರು ಅಪಘಾತದಲ್ಲಿ ಪಂತ್ ಗೆ ಗಾಯ; ಶೀಘ್ರ...

ಕಾರು ಅಪಘಾತದಲ್ಲಿ ಪಂತ್ ಗೆ ಗಾಯ; ಶೀಘ್ರ ಚೇತರಿಸಿಕೊಳ್ಳುವಂತೆ ಮಾಜಿ ಕ್ರಿಕೆಟಿಗರು ಸೇರಿದಂತೆ ಹಿತೈಷಿಗಳ ಹಾರೈಕೆ

30 Dec 2022 10:17 AM IST
share
ಕಾರು ಅಪಘಾತದಲ್ಲಿ ಪಂತ್ ಗೆ ಗಾಯ; ಶೀಘ್ರ ಚೇತರಿಸಿಕೊಳ್ಳುವಂತೆ ಮಾಜಿ ಕ್ರಿಕೆಟಿಗರು ಸೇರಿದಂತೆ ಹಿತೈಷಿಗಳ ಹಾರೈಕೆ

ಹೊಸದಿಲ್ಲಿ: ಭಾರತದ ವಿಕೆಟ್‌ಕೀಪರ್-ಬ್ಯಾಟರ್ ರಿಷಬ್ ಪಂತ್ ಶುಕ್ರವಾರ ದಿಲ್ಲಿಯಿಂದ ಉತ್ತರಾಖಂಡಕ್ಕೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದ್ದರಿಂದ ಗಾಯಗೊಂಡಿದ್ದಾರೆ.

ಪಂತ್  ಅವರು ತಮ್ಮ ಮರ್ಸಿಡಿಸ್ ಕಾರನ್ನು ಓಡಿಸುತ್ತಿದ್ದರು, ಉತ್ತರಾಖಂಡದ ರೂರ್ಕಿ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮವಾಗಿ ಪಂತ್ ಅವರ ತಲೆ,  ಮೊಣಕಾಲಿಗೆ ಗಾಯಗಳಾಗಿವೆ. ಅವರ ಕಾಲಿನಲ್ಲಿ ಮೂಳೆ ಮುರಿತ ಆಗಿರಬಹುದು ಎನ್ನಲಾಗಿದೆ.  ಪ್ರಸ್ತುತ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ರಸ್ತೆ ಅಪಘಾತದಲ್ಲಿ ಪಂತ್ ಗಾಯಗೊಂಡ ನಂತರ ಮಾಜಿ ಕ್ರಿಕೆಟಿಗರು, ಹಿತೈಷಿಗಳು ಟ್ವಿಟರ್‌ ಮೂಲಕ ಕ್ರಿಕೆಟಿಗ ಪಂತ್  ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

"ಪ್ರಿಯ ರಿಷಭ್ ಪಂತ್  ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಬಹುಬೇಗನೆ ಆರೋಗ್ಯವಂತನಾಗು" ಎಂದು ಭಾರತದ ಮಾಜಿ ಆರಂಭಿಕ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

''ರಿಷಬ್ ಪಂತ್ ಗಾಗಿ ಪ್ರಾರ್ಥನೆ. ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ. ಅವರು  ಬಹಳ ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಚಾಂಪ್ ಬೇಗ ಗುಣಮುಖರಾಗಿ" ಎಂದು ಭಾರತದ ಮಾಜಿ ಬ್ಯಾಟರ್ ವಿವಿಎಸ್ ಲಕ್ಷ್ಮಣ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.

"ಇಂದು ಬೆಳಿಗ್ಗೆ ರಿಷಬ್ ಪಂತ್ ಬಗ್ಗೆ ಯೋಚಿಸುತ್ತಿದ್ದೇನೆ ಮತ್ತು ಅವರು ಚೆನ್ನಾಗಿದ್ದಾರೆ ಮತ್ತು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಎಂದು ಆಶಿಸುತ್ತೇನೆ" ಎಂದು ಹಿರಿಯ ಕ್ರಿಕೆಟ್ ವಿಶ್ಲೇಷಕ ಮತ್ತು ವೀಕ್ಷಕ ವಿವರಣೆಗಾರ ಹರ್ಷಾ ಭೋಗ್ಲೆ ಟ್ವೀಟ್ ಮಾಡಿದ್ದಾರೆ.

Wishing dear @RishabhPant17 a super speedy recovery. Bahut hi Jald swasth ho jaao.

— Virender Sehwag (@virendersehwag) December 30, 2022

Praying for Rishabh Pant. Thankfully he is out of danger. Wishing @RishabhPant17 a very speedy recovery. Get well soon Champ.

— VVS Laxman (@VVSLaxman281) December 30, 2022

Thinking about Rishabh Pant this morning and desperately hoping he is fine and recovers soon.

— Harsha Bhogle (@bhogleharsha) December 30, 2022
share
Next Story
X