ಧರ್ಮಸ್ಥಳ | ಕನ್ಯಾಡಿಯಲ್ಲಿ ಕಾರು- ಬೈಕ್ ಅಪಘಾತ: ಬೈಕ್ ಸವಾರ ಗಂಭೀರ

ಬೆಳ್ತಂಗಡಿ: ಕಾರು-ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು. ಅಪಘಾತದ ರಭಸಕ್ಕೆ ಬೈಕ್ ನ ಮುಂಭಾಗದ ಚಕ್ರ ಕಳಚಿ ಹೋಗಿರುವ ಘಟನೆ ಧರ್ಮಸ್ಥಳದ ಕನ್ಯಾಡಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಬೈಕ್ ಸವಾರ ಧರ್ಮಸ್ಥಳ ನಿವಾಸಿ ನಿತೇಶ್(28) ಗಂಭೀರ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಅಗಿರುವ ಕಾರಣ ಕಾರಿನಲ್ಲಿದ್ದವರಿಗೆ ಯಾವುದೇ ಗಾಯವಾಗಿಲ್ಲ.
ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮಮಂದಿರದ ಬಳಿಯ ಕ್ರಾಸ್ ನಲ್ಲಿ ಅಪಘಾತ ನಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ನ ಮುಂಭಾಗದ ಚಕ್ರ ಕಳಚಿ ಹೋಗಿದ್ದು , ಕಾರಿಗೂ ಹಾನಿಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.