Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಏಷ್ಯಾ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ...

ಏಷ್ಯಾ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಪಂಚರತ್ನ ರಥಯಾತ್ರೆಯ ವಿವಿಧ ಬಗೆಯ ಹಾರಗಳು

►500ರ ಗಡಿ ದಾಟಿದ ಬೃಹತ್ ಹಾರಗಳ ಸಂಖ್ಯೆ ►ಗ್ರಾಮ ವಾಸ್ತವ್ಯದ ಜಾಗಕ್ಕೆ ಬಂದು ದಾಖಲೆ ಪತ್ರ, ಮೆಡಲ್ ಗಳನ್ನು ನೀಡಿದ ತೀರ್ಪುಗಾರರು

30 Dec 2022 12:49 PM IST
share
ಏಷ್ಯಾ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಪಂಚರತ್ನ ರಥಯಾತ್ರೆಯ ವಿವಿಧ ಬಗೆಯ ಹಾರಗಳು
►500ರ ಗಡಿ ದಾಟಿದ ಬೃಹತ್ ಹಾರಗಳ ಸಂಖ್ಯೆ ►ಗ್ರಾಮ ವಾಸ್ತವ್ಯದ ಜಾಗಕ್ಕೆ ಬಂದು ದಾಖಲೆ ಪತ್ರ, ಮೆಡಲ್ ಗಳನ್ನು ನೀಡಿದ ತೀರ್ಪುಗಾರರು

ತುಮಕೂರು: ನವೆಂಬರ್ 18ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ.

ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ಎಚ್.ಡಿ.ಕುಮಾರಸ್ವಾಮಿ ಅವರಿಗೆ ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ 'ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ' ಹಾಗೂ ' ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ' ದಾಖಲೆಗೆ ಪಾತ್ರರಾಗಿದ್ದಾರೆ.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ ಇಡೀ ದಿನ ಯಾತ್ರೆ ನಡೆಸಿ ಕಳೆದ ರಾತ್ರಿ ಕ್ಷೇತ್ರದ ಯಲ್ಲಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ಹೂಡಿದ್ದರು. ಆ ಗ್ರಾಮಕ್ಕೆ ಆಗಮಿಸಿದ 'ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ' ತೀರ್ಪುಗಾರರಾದ ಮೋಹಿತ್ ಕುಮಾರ್ ವತ್ಸ ಹಾಗೂ ' ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ' ತೀರ್ಪುಗಾರರಾದ ಆರ್.ಹರೀಶ್ ಅವರು ಮಾಜಿ ಮುಖ್ಯಮಂತ್ರಿ ಅವರಿಗೆ ಎರಡೂ ದಾಖಲೆಗಳ ಪತ್ರಗಳು ಮತ್ತು ಮೆಡಲ್ ಗಳನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ 'ತೀರ್ಪುಗಾರರಾದ ಮೋಹಿತ್ ಕುಮಾರ್, ಇದೊಂದು ವಿಶೇಷವಾದ ದಾಖಲೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಾಜಕಾರಣಿಯೊಬ್ಬರು ಗೌರವಕ್ಕೆ ಪಾತ್ರರಾಗಿರುವುದು ಹಾಗೂ ರೈತರೇ ಬೇಳೆಗಳನ್ನೇ ಬೃಹತ್  ಹಾರಗಳನ್ನಾಗಿ ತಯಾರಿಸಿ ಅವರಿಗೆ ಹಾಕಿ ಸ್ವಾಗತಿಸುತ್ತಿರುವುದು ಸೋಜಿಗ, ಮೊದಲ ದಾಖಲೆ ಎಂದರು.

ನಾವು ಸದಾ ದಾಖಲೆಗಳನ್ನು ಹುಡುಕುತ್ತಿರುತ್ತೇವೆ. ದೇವನಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಕೃಷಿ ಬೆಳೆಗಳಿಂದ ತಯಾರಿಸಿದ ಭಾರೀ ಹಾರಗಳನ್ನು ಹಾಕಿ ಬರಮಾಡಿಕೊಂಡ ಬಗ್ಗೆ ಮಾಹಿತಿ ಸಿಕ್ಕಿತು. ಅಂದಿನಿಂದಲೇ ನಾವು ಖುದ್ದು ಪರಿಶೀಲನೆ ಮಾಡಿದೆವು. ನಿನ್ನೆಯೂ ನಾವು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ರಥಯಾತ್ರೆಯ ಜತೆಗೆ ಪ್ರವಾಸ ಮಾಡಿದೆವು. ಬೃಹತ್ ಹಾರಗಳ ಗೌರವಕ್ಕೆ ಭಾಜನರಾದ ಏಕೈಕ ವ್ಯಕ್ತಿ ಕುಮಾರಸ್ವಾಮಿ ಅವರು ಎಂದು ಮೋಹಿತ್ ಕುಮಾರ್ ಮಾಹಿತಿ ನೀಡಿದರು.

ರೈತರಿಗೆ, ಕಾರ್ಯಕರ್ತರಿಗೆ ಸಮರ್ಪಣೆ: ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಇದು ನನಗೆ ಅಚ್ಚರಿಯ ಗೌರವ. ಈ ದಾಖಲೆಗಳನ್ನು ನನ್ನ ನಾಡಿನ ರೈತರು ಹಾಗೂ ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಮರ್ಪಣೆ ಮಾಡುತ್ತೇನೆ ಎಂದರು.

ನಾನು ರಥಯಾತ್ರೆ ಮಾಡುತ್ತಿರುವ ಎಲ್ಲಾ ಕಡೆ ಜನರು ನನ್ನನ್ನು ಪ್ರೀತಿಯಿಂದ ಸ್ವಾಗತ ಮಾಡುತ್ತಿದ್ದಾರೆ. ದೊಡ್ಡ ದೊಡ್ಡ ಹಾರಗಳನ್ನು ಹಾಕಿ ಸ್ವಾಗತ ಮಾಡುತ್ತಿದ್ದಾರೆ. ಆ ಜನರ ಪ್ರೀತಿಯಿಂದ ಮಾತ್ರ ಈ ದಾಖಲೆ ನಿರ್ಮಾಣವಾಗಲು  ಸಾಧ್ಯವಾಗಿದೆ. ಹೀಗಾಗಿ ಈ ಎಲ್ಲಾ ದಾಖಲೆಯ ಹೆಗ್ಗಳಿಕೆ ಅವರಿಗೇ ಸಲ್ಲಬೇಕು ಎಂದು ಅವರು ತಿಳಿಸಿದರು.

ಪಂಚರತ್ನ ಯಾತ್ರೆ ಆರಂಭವಾಗಿ 33ನೇ ದಿನ ಪೂರೈಸಿದೆ. ಈ ಯಾತ್ರೆಯಲ್ಲಿ ಜನರು ಪ್ರೀತಿಯಿಂದ ಹಾಕಿದ ಹಾರಗಳು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಇಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿರುವುದು ಸಂತಸ ಉಂಟು ಮಾಡಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡರು, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆಂಜಿನಪ್ಪ ಮುಂತಾದವರು ಇದ್ದರು.

500ರ ಗಡಿ ದಾಟಿದ ಬೃಹತ್ ಹಾರಗಳ ಸಂಖ್ಯೆ:

ಪಂಚರತ್ನ ಯಾತ್ರೆ ಇದೀಗ 34ನೆ ದಿನಕ್ಕೆ ಕಾಲಿಟ್ಟಿದೆ. ಹಾರಗಳ ಸಂಖ್ಯೆ 500ರ ಗಡಿ ದಾಟಿದೆ. ನಿನ್ನೆ ತುಮಕೂರು ಗ್ರಾಮಾಂತರ ಕ್ಷೇತ್ರ ಒಂದರಲ್ಲೇ 30ಕ್ಕೂ ಹೆಚ್ಚು ಬೃಹತ್ ಹಾರಗಳನ್ನು ಮಾಜಿ ಮುಖ್ಯಮಂತ್ರಿ ಅವರಿಗೆ ಹಾಕಿ ಗೌರವಿಸಲಾಯಿತು. ಈ ಕ್ಷೇತ್ರದಲ್ಲಿ ಸೇಬು, ಸೌತೆಕಾಯಿ, ಕೊಬರಿ, ಕಬ್ಬಿನ ಹಾರಗಳ ಜತೆಗೆ ನಾಣ್ಯದ ಹಾರ, ಭತ್ತ ನೇಗಿಲು ಹಾರ, ಎತ್ತಿನ ಲಾಳದ ಹಾರ, ಜೆಡಿಎಸ್ ಚಿಹ್ನೆ ಹಾರ, ಮಣ್ಣಿನ ಹಾರ, ಕಿರೀಟದ ಹಾರ, ಮಹಿಳೆಯರು ಹಾಕಿದ ರಾಖಿ ಹಾರ ಗೂಳೂರು ಕರ್ಜಿಕಾಯಿ ಹಾರ, ವಿವಿಧ ತರಕಾರಿಗಳ ಹಾರ, ವಿವಿಧ ಹಣ್ಣುಗಳ ಹಾರ, ಎಲ್ಇಡಿ ಹಾರ ಸೇರಿದಂತೆ ಒಂದೇ ದಿನ 30ಕ್ಕೂ ಹೆಚ್ಚು ಹಾರಗಳನ್ನು ಕುಮಾರಸ್ವಾಮಿ ಅವರಿಗೆ ಹಾಕಿ ಸ್ವಾಗತ ಕೋರಲಾಗಿತ್ತು.

ಸಮಸ್ತ ಕನ್ನಡಿಗರ ಕೃಪೆ, ಆಶೀರ್ವಾದದಿಂದ ಪಂಚರತ್ನ ರಥಯಾತ್ರೆ ನೂತನ ಮೈಲುಗಲ್ಲು ಸ್ಥಾಪಿಸಿದೆ.
ಕಳೆದ ನ.18ಕ್ಕೆ ಆರಂಭವಾದ ಈ ಯಾತ್ರೆಯಲ್ಲಿ ನಾಡಿನ ರೈತಾಪಿ ಜನ, ಅಭಿಮಾನಿಗಳು ಅಕ್ಕರೆಯಿಂದ ತಾವು ಬೆಳೆದ ಕೃಷಿಬೆಳೆಗಳಿಂದ ತಯಾರಿಸಿ ಹಾಕಿದ ನೂರಾರು ಹಾರಗಳು ಹೊಸ ದಾಖಲೆಯನ್ನೇ ನಿರ್ಮಿಸಿವೆ.1/2#AsiaBookOfRecords#IndiaBookOfRecords pic.twitter.com/GdjRpbVn5V

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 30, 2022
share
Next Story
X