Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ ವರ್ಷ ರಸ್ತೆ ಅಪಘಾತಗಳಲ್ಲಿ...

ಕಳೆದ ವರ್ಷ ರಸ್ತೆ ಅಪಘಾತಗಳಲ್ಲಿ ಹೆಲ್ಮೆಟ್ ರಹಿತ ಚಾಲನೆಯಿಂದ 46,593 ಮಂದಿ ಮೃತ್ಯು: ವರದಿ

30 Dec 2022 2:30 PM IST
share
ಕಳೆದ ವರ್ಷ ರಸ್ತೆ ಅಪಘಾತಗಳಲ್ಲಿ ಹೆಲ್ಮೆಟ್ ರಹಿತ ಚಾಲನೆಯಿಂದ 46,593 ಮಂದಿ ಮೃತ್ಯು: ವರದಿ

ಹೊಸದಿಲ್ಲಿ: ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, 2021ರಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿದ್ದ ಒಟ್ಟು 46,593 ಮಂದಿ ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿದ್ದು, ಈ ಪೈಕಿ 32,877 ಮಂದಿ ಚಾಲಕರಾಗಿದ್ದರೆ, 13,716 ಮಂದಿ ಪ್ರಯಾಣಿಕರು ಸೇರಿದ್ದಾರೆ ಎಂದು ಹೇಳಲಾಗಿದೆ.

2021ರಲ್ಲಿ ಸಂಭವಿಸಿರುವ ರಸ್ತೆ ಅಪಘಾತಗಳಲ್ಲಿ ಸೀಟ್ ಬೆಲ್ಟ್ ಧರಿಸದೆ ಒಟ್ಟು 16,397 ಮಂದಿ ಮೃತಪಟ್ಟಿದ್ದು, ಈ ಪೈಕಿ 8,438 ಮಂದಿ ಚಾಲಕರು ಹಾಗೂ 7,959 ಮಂದಿ ಪ್ರಯಾಣಿಕರು ಸೇರಿದ್ದಾರೆ ಎಂದೂ ವರದಿಯಲ್ಲಿ ಹೇಳಲಾಗಿದೆ.

2021ರ ಅವಧಿಯಲ್ಲಿ ಒಟ್ಟು 4,12,432 ರಸ್ತೆ ಅಪಘಾತಗಳು ಸಂಭವಿಸಿದ್ದು, ಈ ಪೈಕಿ 1,28,825 ರಸ್ತೆ ಅಪಘಾತಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸಿವೆ. ಈ ದುರ್ಘಟನೆಗಳಲ್ಲಿ 56,007 ಮಂದಿ ಮೃತಪಟ್ಟಿದ್ದು, 1,17,765 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

2020ರ ಅವಧಿಗೆ ಹೋಲಿಸಿದರೆ 2021ರಲ್ಲಿ ರಸ್ತೆ ಅಪಘಾತಗಳ ಪ್ರಮಾಣ ಶೇ. 16.6ರಷ್ಟು ಏರಿಕೆಯಾಗಿದ್ದು, ಅಪಘಾತಗಳಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರ ಪ್ರಮಾಣ ಕ್ರಮವಾಗಿ ಶೇ. 16.9 ಮತ್ತು ಶೇ. 10.4ರಷ್ಟು ಏರಿಕೆಯಾಗಿದೆ.

ರಸ್ತೆ ಅಪಘಾತಗಳಲ್ಲಿನ ಬಲಿಪಶುಗಳ ಶ್ರೇಯಾಂಕದಲ್ಲಿ ಉತ್ತರ ಪ್ರದೇಶ ಅಗ್ರ ಸ್ಥಾನ ಪಡೆದಿದ್ದು, ಶೇ. 15.2 ಮಂದಿ ಸಾವನ್ನಪ್ಪಿದ್ದಾರೆ. ನಂತರದ ಸ್ಥಾನಗಳಲ್ಲಿ ಕ್ರಮವಾಗಿ ತಮಿಳುನಾಡು (9.4%), ಮಹಾರಾಷ್ಟ್ರ (9.4%) ಹಾಗೂ ರಾಜಸ್ತಾನ (6.8%) ಇವೆ.

"ರಸ್ತೆ ಅಪಘಾತಗಳಲ್ಲಿ ಹೆಚ್ಚು ಬಲಿಯಾಗುತ್ತಿರುವವರು 18-45 ವಯೋಮಾನದ ಗುಂಪಿಗೆ ಸೇರಿದವರಾಗಿದ್ದಾರೆ. ರಸ್ತೆ ಅಪಘಾತಗಳಲ್ಲಿ ಸಂಭವಿಸಿರುವ ಮೃತ್ಯುಗಳ ಪೈಕಿ ಈ ವಯೋಮಾನದ ಗುಂಪಿನ ಶೇ. 67 ಮಂದಿ ಸೇರಿದ್ದಾರೆ" ಎಂದೂ ವರದಿಯಲ್ಲಿ ಹೇಳಲಾಗಿದೆ.

2000 ಇಸವಿಯ ನಂತರ ರಸ್ತೆ ಅಪಘಾತಗಳ ತೀವ್ರತೆ ಏರುಗತಿಯಲ್ಲಿದ್ದು, ಸುಧಾರಿತ ತುರ್ತು ಅಪಘಾತ ಚಿಕಿತ್ಸಾ ಸೇವೆಗಳು ಮತ್ತು ಢಿಕ್ಕಿಯ ತೀವ್ರತೆ ತಗ್ಗಿಸುವ ಮಾನದಂಡಗಳನ್ನು ಹೊಂದಿರುವ ಸುಗಮ ಸಂಚಾರ  ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ವರದಿಯಲ್ಲಿ ಒತ್ತಿ ಹೇಳಲಾಗಿದೆ.

share
Next Story
X