ಮಂಗಳೂರು: ವಿವಿಯ ಪಿ.ಎಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಡಿ.30: ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಕುಶಾಲನಗರ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು, ಮಡಿಕೇರಿ, ಹಾಗೂ ಸಂಯೋಜಿತ ಕಾಲೇಜುಗಳಲ್ಲಿ ಪಿಎಚ್.ಡಿ ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ - 574199 ಅಥವಾ ಪ್ರಾಂಶುಪಾಲರು, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು, ಮಡಿಕೇರಿ,ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟ, ಮಂಗಳೂರು. ದ ಕ. ಇವರಿಂದ ರೂ. 1,100ನ್ನು ಎಸ್ಸಿ,ಎಸ್ಟಿ, ಪ್ರವರ್ಗ-1ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ 550 ರೂ. ಚಲನ್, ರಾಷ್ಟ್ರೀಕೃತ ಬ್ಯಾಂಕಿನಿಂದ ಹಣಕಾಸು ಅಧಿಕಾರಿ, ಮಂಗಳೂರು ವಿಶ್ವವಿದ್ಯಾನಿಲಯ ಇವರ ಹೆಸರಿನಲ್ಲಿ ಪಡೆದ ಡಿ. ಡಿ. ಮುಖಾಂತರ ಪಾವತಿ ಪಾವತಿಸದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು/ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರದ ಮುಖ್ಯಸ್ಥರಿಗೆ ಜನವರಿ 31, 2023ರೊಳಗೆ ಸಲ್ಲಿಸತಕ್ಕದ್ದು.
ಖಾಲಿ ಇರುವ ಸೀಟುಗಳು/ ಮೀಸಲಾತಿ ವಿವರ ಮತ್ತು ಪಿಎಚ್.ಡಿ ಕಾರ್ಯಕ್ರಮಗಳನ್ನು ನಿಯಂತ್ರಿಸುವ ನಿಯಮಾವಳಿ ಹಾಗೂ ಮಾರ್ಗಸೂಚಿಯ ವಿವರಗಳು ಮತ್ತು ಅರ್ಜಿ ನಮೂನೆಗಳಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್ ಸೈಟ್ www.mangaloreuniversity.ac.in ನಿಂದ ಪಡೆದುಕೊಳ್ಳಬಹುದು ಎಂದು ಕುಲಸಚಿವರ ಪ್ರಕಟನೆ ತಿಳಿಸಿದೆ.