Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮುದಾಯವನ್ನು ದೂರವಿಟ್ಟ ಸಮ್ಮೇಳನದ...

ಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕವಿದ್ದಂತೆ: ಕವಿ ಚಾಂದ್‍ ಪಾಷಾ

ಹಾವೇರಿ ಸಮ್ಮೇಳನದ ಕವಿಗೋಷ್ಠಿ ತಿರಸ್ಕರಿಸಿದ ಯುವ ಬರಹಗಾರ

30 Dec 2022 8:05 PM IST
share
ಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕವಿದ್ದಂತೆ: ಕವಿ ಚಾಂದ್‍ ಪಾಷಾ
ಹಾವೇರಿ ಸಮ್ಮೇಳನದ ಕವಿಗೋಷ್ಠಿ ತಿರಸ್ಕರಿಸಿದ ಯುವ ಬರಹಗಾರ

ಬೆಂಗಳೂರು, ಡಿ.30: ಹಾವೇರಿಯಲ್ಲಿ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಮ್ ಸಾಹಿತಿಗಳನ್ನು ಕನ್ನಡ ಸಾಹಿತ್ಯ ಪರಿಷತ್ ಕಡೆಗಣಿಸಿರುವುದನ್ನು ಖಂಡಿಸಿ ಸಮ್ಮೇಳನದ ಕವಿಗೋಷ್ಠಿಯಲ್ಲಿ ಭಾಗವಹಿಸುವುದಿಲ್ಲ ಎಂದು ಯುವ ಬರಹಗಾರ, ಕವಿ ಚಾಂದ್ ಪಾಷಾ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ಮೂರನೇ ಕವಿಗೋಷ್ಟಿಯಲ್ಲಿ ಕವನ ವಾಚಿಸಲು ನನ್ನನ್ನು ಆಯ್ಕೆ ಮಾಡಲಾಗಿತ್ತು. ಆದರೆ ಸಮ್ಮೇಳನದ ರೀತಿ ನೀತಿ, ಸಮ್ಮೇಳನಾಧ್ಯಕ್ಷರ ಹಿಂದಿ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳು ಖಂಡನೀಯವಾದುದು. ಅಲ್ಲದೆ ಸಮ್ಮೇಳನ ರಾಜಕೀಯ, ಧಾರ್ಮಿಕ ನೆಲೆಗಟ್ಟನ್ನು ಒಳಗೊಂಡಿರುವ ಕಾರಣ ಕವಿ ಗೋಷ್ಠಿಯಿಂದ ಹಿಂದೆ ಸರಿಯುತ್ತೇನೆ. ಜ.8ರ ಜನಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಪ್ರತಿರೋಧ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

'ಕನ್ನಡ ಸಾಹಿತ್ಯ ಪರಿಷತ್ ಸಮಸ್ತ ಕನ್ನಡಿಗರನ್ನು ಪ್ರತಿನಿಧಿಸುವ ಪ್ರಜ್ಞೆ. ಅದೊಂದು ಜಾತಿ, ಧರ್ಮವನ್ನು ಪ್ರತಿನಿಧಿಸುವ ಮತ್ತು ಧರ್ಮದ ವಿಶೇಷಣವನ್ನು ಹೊತ್ತು ಮೆರೆಸುವ ಧಾರ್ಮಿಕ ಕೇಂದ್ರವಲ್ಲ. ಆದರೆ, ಇತ್ತೀಚಿನ ವರ್ಷಗಳಲ್ಲಿ ಸಾಹಿತ್ಯ ಪರಿಷತ್ ಸಂಪೂರ್ಣವಾಗಿ ಜಾತಿ ಮತ್ತು ಧರ್ಮ ಕೇಂದ್ರಿತ ಹಾಗೂ ಪುರುಷ ಪ್ರಧಾನತೆಯನ್ನೆ ಪ್ರತಿಪಾದಿಸುವ ಮನುಸಂಸ್ಕೃತಿಯನ್ನು ಚಲಾವಣೆಗೆ ತರಲು ಹಾತೊರೆಯುತ್ತಿರುವುದು ದುರಂತವೇ ಸರಿ. ಮನುಷ್ಯ ಕೇಂದ್ರಿತ ಪ್ರಜ್ಞೆಯನ್ನು ಇಲ್ಲವಾಗಿಸಿ, ಸಮುದಾಯವೊಂದರ ಮೇಲಿನ ರಾಜಕೀಯ ಪ್ರೇರಿತ ದ್ವೇಷವನ್ನು ಇಮ್ಮಡಿಗೊಳಿಸುವ ಹಿಡನ್ ಅಜೆಂಡಾವನ್ನು ಇಟ್ಟುಕೊಂಡು ಸಾಹಿತ್ಯ ಸಮ್ಮೇಳನ ನಡೆಸುತ್ತಿರುವುದು, “ಸರ್ವ ಜನಾಂಗದ ಶಾಂತಿಯ ತೋಟ”ಕ್ಕೆ ಬೆಂಕಿ ಹಚ್ಚಿದ ಹಾಗಿದೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಹಾವೇರಿಯಂತಹ ಸಾಮರಸ್ಯ ಉಳ್ಳ ಸ್ಥಳದಲ್ಲಿ ನಡೆಯುವ ಸಮ್ಮೇಳನವು ದಲಿತ ಮತ್ತು ಮುಸ್ಲಿಂ ಸಮುದಾಯದ ಬರಹಗಾರನ್ನು ವ್ಯವಸ್ಥತವಾಗಿ ಹೊರಗಿಟ್ಟಿದ್ದು, ಉಡುಪಿ ಮಠದಿಂದ ಕನಕದಾಸನನ್ನು ಹೊರಗಿಟ್ಟ ಹಾಗೆಯೇ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಇಂಥ ದುರಿತ ಕಾಲದಲ್ಲಿ ಸಾಮರಸ್ಯವನ್ನು ಹಬ್ಬಿಸಬೇಕೆ ಹೊರತು, ಅದನ್ನು ಇಲ್ಲವಾಗಿಸುವ ಸಾಹಿತ್ಯ ಸಮ್ಮೇಳವನ್ನು ಬಹಿಷ್ಕರಿಸಿಸುವುದು ಸಾಮಾಜಿಕ ಜವಾಬ್ದಾರಿ ಇರುವ ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ನಾನು ನಂಬುತ್ತೇನೆ. “ಹಿಂದಿ ಭಾರತದ ರಾಷ್ಟ್ರೀಯ ಭಾಷೆ” ಎಂದು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ದೊಡ್ಡರಂಗೇಗೌಡರು ಸಂದರ್ಶನದಲ್ಲಿ ಹೇಳಿದ ಮಾತಿದು. ಇಂಥ ಕನ್ನಡ ಭಾಷಾ ವಿರೋಧಿಯನ್ನು ಅಧ್ಯಕ್ಷ ಸ್ಥಾನದಲ್ಲಿರಿಸುವ ಸಮ್ಮೇಳನದಲ್ಲಿ ಆಹ್ವಾನಿತ ಕವಿಯಾಗಿರುವ ನಾನು ಖಂಡಿತವಾಗಿಯು ಕವಿತೆ ಓದಲಾರೆ, ಭಾಗವಹಿಸಿಲಾರೆ. ಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕದ ಹಾಗೆಯೇ ಇದೆ. ಅಷ್ಟಕ್ಕೂ ಷರೀಫನನ್ನು ಹೊರಗಿಟ್ಟಿದ್ದನ್ನೆ ಗುರು ಗೋವಿಂದ? ಎಂದು ಪ್ರಶ್ನಿಸಿದ್ದಾರೆ. 

share
Next Story
X