Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಡಿಕೆ ಬೆಳೆಗಾರರ ಪಾಲಿಗೆ ಬಿಜೆಪಿ...

ಅಡಿಕೆ ಬೆಳೆಗಾರರ ಪಾಲಿಗೆ ಬಿಜೆಪಿ ಸರ್ಕಾರದಿಂದ ಮರಣ ಶಾಸನ: ಡಾ. ರಾಜಾರಾಮ್ ಕಿಡಿ

30 Dec 2022 8:45 PM IST
share

ಉಪ್ಪಿನಂಗಡಿ: ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾದ ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು  ಅಡಿಕೆಯನ್ನು ಬೆಳೆಯಬೇಡಿ, ಅದಕ್ಕೆ ಭವಿಷ್ಯ ಇಲ್ಲ ಎಂದು ಆತಂಕದ ಹೇಳಿಕೆ ನೀಡುವ ಮೂಲಕ ಅಡಿಕೆ ಬೆಳೆಗಾರರ ಪಾಲಿಗೆ ಮರಣ ಶಾಸನ ಬರೆಯಲು ಹೊರಟಿದ್ದಾರೆ ಎಂದು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ. ಕಿಡಿಕಾರಿದ್ದಾರೆ. 

ಅವರು ಡಿ. 30ರಂದು ಸಂಜೆ ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕರಾವಳಿ ಸೇರಿದಂತೆ ರಾಜ್ಯದ ಸುಮಾರು 12 ಜಿಲ್ಲೆಗಳಲ್ಲಿ ಅಡಿಕೆ ಬೆಳೆಗಾರರಿದ್ದು, ಅಂದಾಜು 2 ಕೋಟಿ ಜನರ ಆರ್ಥಿಕತೆ ಅಡಿಕೆ ಬೆಳೆಯ ಮೇಲೆ ನಿಂತಿದೆ. ಇದೀಗ ಯಾವುದೇ ನಿರ್ಬಂಧಗಳಿಲ್ಲದೆ ಭೂತಾನ್‍ನಿಂದ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಮೂಲಕ ಸ್ವದೇಶಿ ಅಡಿಕೆಯ ಧಾರಣೆ ಕುಸಿತಕ್ಕೆ ಕಾರಣವಾಗಿದೆ. ಇದನ್ನು ಮರೆ ಮಾಚುವ ಸಲುವಾಗಿ ಸಚಿವ ಅರಗ ಜ್ಞಾನೇಂದ್ರರವರು ಆತಂಕದ ಹೇಳಿಕೆ ನೀಡುವ ಮೂಲಕ ಅಡಿಕೆ ಬೆಳೆಗಾರರಿಗೆ ಕೊಡಲಿ ಏಟು ನೀಡಿದ್ದು, ಇದು ಖಂಡನೀಯವಾಗಿದೆ ಎಂದರು.

ರಾಜ್ಯ ಅಡಿಕೆ ಮಂಡಳಿ ಸ್ಥಾಪಿಸುವ ಭರವಸೆ ಏನಾಯಿತು?

ಬಿಜೆಪಿ ಸರಕಾರ 2018ರ ಪ್ರಣಾಳಿಕೆಯಲ್ಲಿ "ರಾಜ್ಯ ಅಡಿಕೆ ಮಂಡಳಿ" ಸ್ಥಾಪಿಸುವ ಭರವಸೆ ನೀಡಿತ್ತು ಮತ್ತು ಕಳಪೆ ದರ್ಜೆಯ ಅಡಿಕೆ ಆಮದು ನಿಲ್ಲಿಸಲು ಮನವಿ ಮಾಡುತ್ತೇವೆ ಎಂದು ಹೇಳಿಕೊಂಡಿತ್ತು. ಆದರೆ ಇದೀಗ ಅಡಿಕೆ ಬೆಳೆಗೆ ಭವಿಷ್ಯವಿಲ್ಲ ಹಾಗಾಗಿ ಈ ಬೆಳೆಗೆ ಪ್ರೋತ್ಸಾಹ ನೀಡಬಾರದು ಎಂದ ಅರಗ ಜ್ಞಾನೇಂದ್ರ ಅವರು ಅಡಿಕೆ ಬೆಳೆಗಾರರ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಡಾ. ರಾಜಾರಾಮ್ ಆರೋಪಿಸಿದರು.

 ಹಳದಿ, ಎಲೆಚುಕ್ಕಿ ರೋಗದಿಂದಾಗಿ ಬೆಳೆಗಾರ ತತ್ತರ: ಅರಗ ಜ್ಞಾನೇಂದ್ರರವರು ಅಡಿಕೆ ಬೆಳೆಗಾರರು ಮತ್ತು ಅಡಿಕೆ ಕಾರ್ಯಪಡೆ ಅಧ್ಯಕ್ಷರೂ ಆಗಿರುತ್ತಾರೆ. ಅಡಿಕೆ ಬೆಳೆಗಾರರ ಸಂಕಷ್ಠ ಅವರಿಗೆ ಗೊತ್ತಿದೆ. ಅಷ್ಟಾಗಿಯೂ ಅಡಿಕೆ ಬೆಳೆಗೆ ಹಳದಿ ರೋಗ ಮತ್ತು ಎಲೆಚುಕ್ಕಿ ರೋಗ ಬಂದಿದ್ದು, ಬೆಳೆಗಾರರು ಇದರಿಂದಾಗಿ ತತ್ತರಿಸಿ ಹೋಗಿದ್ದಾರೆ. ಇದಕ್ಕೆ ಔಷಧಿ ವ್ಯವಸ್ಥೆ ಮಾಡಬೇಕಾದ ಮತ್ತು ಬೆಂಬಲ ಬೆಲೆ ಕೊಡಿಸಬೇಕಾದ ಇವರು ಅಡಿಕೆ ಬೆಳೆಗೆ ಭವಿಷ್ಯ ಇಲ್ಲ, ಅದಕ್ಕೆ ಪ್ರೋತ್ಸಾಹ ಕೊಡಬಾರದು ಎನ್ನುವ ಇವರ ಹೇಳಿಕೆ ಅವರ ನಿರ್ಲಜ್ಜತನದ ಪರಮಾವಧಿ ಎಂದು ಪಕ್ಷದ ಹಿರಿಯ ಮುಖಂಡ, ಅಡಿಕೆ ಬೆಳೆಗಾರ ಎ. ಕೃಷ್ಣ ರಾವ್ ಅರ್ತಿಲ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸದಸ್ಯ ಸೋಮನಾಥ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಯುನಿಕ್, ಯುವ ಕಾಂಗ್ರೆಸ್‍ನ ಮಹಮ್ಮದ್ ಫಾರೂಕ್ ಪೆರ್ನೆ, ಅನಸ್ ಉಪ್ಪಿನಂಗಡಿ ಉಪಸ್ಥಿತರಿದ್ದರು.


ಬಸ್ ಪಾಸ್ ಇದೆ, ಬಸ್ ಇಲ್ಲ!

ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಲಾಗಿದೆ. ಆದರೆ ಬಸ್ ಕೊರತೆ ಎದುರಾಗಿದೆ. ಉಪ್ಪಿನಂಗಡಿಯಿಂದ ನೂರಾರು ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್ ಮೊದಲಾದ  ಉನ್ನತ ಶಿಕ್ಷಣಕ್ಕಾಗಿ ಪುತ್ತೂರು, ಮಂಗಳೂರು, ಉಜಿರೆಗೆ ಹೋಗುವವರಿದ್ದಾರೆ. ಆದರೆ ಬಸ್ ವ್ಯವಸ್ಥೆ ಇಲ್ಲದಂತಾಗಿದೆ. ಹೀಗಾಗಿ ವಿದ್ಯಾರ್ಥಿಗಳ ವಿದ್ಯಾರ್ಜನೆ ಕುಂಟಿತವಾಗಿದೆ. ಪೋಷಕರು ಆತಂಕಿತರಾಗಿದ್ದಾರೆ. ಬಸ್ ವ್ಯವಸ್ಥೆ ಶೀಘ್ರ ಸರಿ ಆಗದಿದ್ದಲ್ಲಿ ವಿದ್ಯಾರ್ಥಿ ಸಂಘಟನೆಗಳ ಸಹಕಾರ ಪಡೆದುಕೊಂಡು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಡಾ. ರಾಜಾರಾಮ್ಎಚ್ಚರಿಸಿದರು. 

share
Next Story
X