ಬಂಟ್ವಾಳ | ತಂಡದಿಂದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ: ಪ್ರಕರಣ ದಾಖಲು

ಬಂಟ್ವಾಳ: ತಂಡದಿಂದ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುಮ್ಡೇಲು ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಘಟನೆಯು ಗುರುವಾರ ತಡರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಇಲ್ಲಿನ ನಿವಾಸಿ ನಿತೇಶ್ ಮಡಿವಾಳ ಹಲ್ಲೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಗುರುವಾರ ತಡರಾತ್ರಿ ಪರಿಚಿತ ಲೋಕೇಶ್, ರೋಷನ್, ಸುಜಿತ್, ಸುಮಂತ್ ಅವರನ್ನೊಳಗೊಂಡ ತಂಡ ಹಲ್ಲೆ ನಡೆಸಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಸದ್ಯ ಗಂಭೀರವಾಗಿ ಗಾಯಗೊಂಡಿರುವ ನಿತೇಶ್ ಮಡಿವಾಳರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸಾ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಈ ಸಂಬಂಧ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





