ಮಂಗಳೂರು | ಜ.2ರಂದು ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಪುಷ್ಪಯಾಗ, ಅಷ್ಟಾವಧಾನ ಸೇವೆ
ಮಂಗಳೂರು: ವೈಕುಂಠ ಏಕಾದಶಿಯ ಪ್ರಯುಕ್ತ ಜ.2ರಂದು ನಗರದ ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಚೈತನ್ಯಾಭಿವೃದ್ಧಿ ಹಾಗೂ ಲೋಕಕಲ್ಯಾಣ ಪ್ರಾಪ್ತಿಯ ಸಂಕಲ್ಪದೊಂದಿಗೆ ನಾಮತಯ ಮಹಾಮಂತ್ರ ಜಪಯಜ್ಞ ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆಯನ್ನು ನಡೆಸಲಾಗುವುದು ಎಂದು ದೇವಳದ ಆಡಳಿತ ಮೊಕ್ತೇಸರ ವರದರಾಜ್ ನಾಗ್ವೇಕರ್ ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಸಂಜೆ 4ಕ್ಕೆ ಡೊಂಗರಕೇರಿ ಕಟ್ಟೆಯಿಂದ ಪುಷ್ಪಯಾಗದ ಹೂವಿನ ವಿಶೇಷ ಮೆರವಣಿಗೆ ನಡೆಯಲಿದೆ. ಬೆಳಗ್ಗೆ ಸುಪ್ರಭಾತ ಸೇವೆ, ಸಾಮೂಹಿಕ ಪ್ರಾರ್ಥನೆ, ಅಷ್ಟಾಕ್ಷರೀ ಮಂತ್ರ ಜಪ, ಪ್ರಾತಃ ಪೂಜೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ ಇತ್ಯಾದಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಸಹ ಮೊಕ್ತೇಸರ ವಿನಾಯಕ ಶೇಟ್, ಗಣೇಶ್ ನಾಗ್ವೇಕರ್ ಉಪಸ್ಥಿತರಿದ್ದರು.
Next Story