ಮಂಗಳೂರು: ಜ.2-12ರವರೆಗೆ ಬಿಜೆಪಿ ಬೂತ್ ವಿಜಯ ಅಭಿಯಾನ
ಮಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೂತ್‌ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸುವ ಸಲುವಾಗಿ ಜನವರಿ 2ರಿಂದ 12ರವರೆಗೆ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ತಿಳಿಸಿದ್ದಾರೆ.
ನಗರದ ಅಟಲ್ ಸೇವಾ ಕೇಂದ್ರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಅಭಿಯಾನದ ವೇಳೆ ಜಿಲ್ಲೆಯ 1861 ಬೂತ್‌ಗಳಲ್ಲಿ ಸಭೆ ನಡೆಸಲಾಗುವುದು. ಜ.2ರಂದು ಬೆಳಗ್ಗೆ 10ಕ್ಕೆ ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ಅಭಿಯಾನವನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಉದ್ಘಾಟಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ವೇದವ್ಯಾಸ ಕಾಮತ್, ಮುಖಂಡರಾದ ಕಸ್ತೂರಿ ಪಂಜ, ಜಗದೀಶ ಶೇಣವ, ರವಿಶಂಕರ ಮಿಜಾರು, ವಿಜಯ ಕುಮಾರ್ ಶೆಟ್ಟಿ, ರಣದೀಪ್ ಕಾಂಚನ್ ಉಪಸ್ಥಿತರಿದ್ದರು.
Next Story





