Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಬೀದರ್...

ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಬೀದರ್ ನ ಶಾ ರಶೀದ್‌ ಅಹ್ಮದ್‌ ಖಾದ್ರಿ ಯಾರು? ಅವರ ಸಾಧನೆ ಏನು?

Ashwani25 Jan 2023 11:37 PM IST
share
ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಬೀದರ್ ನ ಶಾ ರಶೀದ್‌ ಅಹ್ಮದ್‌ ಖಾದ್ರಿ ಯಾರು? ಅವರ ಸಾಧನೆ ಏನು?

ಬೀದರ್: ಕೇಂದ್ರ ಸರ್ಕಾರ ಕೊಡ ಮಾಡುವ ಪದ್ಮ ಪ್ರಶಸ್ತಿಗೆ ಈ ಬಾರಿ ಬೀದರಿನ ಬಿದ್ರಿ ಕರಕುಶಲ ಕಲಾವಿದ ಶಾ ರಶೀದ್‌ ಅಹ್ಮದ್‌ ಖಾದ್ರಿ ಅವರೂ ಭಾಜನರಾಗಿದ್ದಾರೆ.

1955 ರ ಜೂನ್‌ ನಲ್ಲಿ ಪ್ರತಿಷ್ಠಿತ ಬಿದ್ರಿ ಕಲೆಗಾರರ ಕುಟುಂಬದಲ್ಲಿ ಜನಿಸಿರುವ ಇವರು ತಮ್ಮ ತಂದೆಯಿಂದಲೇ ಬಿದ್ರಿ ಕರಕುಶಲವನ್ನು ಕಲಿತಿದ್ದಾರೆ.

ತಮ್ಮ ಪೂರ್ವಜರ ಕಾಲದಿಂದಲೂ ಬಿದ್ರಿ ಕರಕುಶಲದಲ್ಲಿ ತೊಡಗಿಸಿಕೊಂಡಿರುವ ಕುಟುಂಬದಿಂದ ಬಂದಿದ್ದರೂ, ಕಲೆಯಲ್ಲಿ ಅಲ್ಪ ಪ್ರಮಾಣದ ದುಡಿಮೆಯಷ್ಟೇ ಬರುತ್ತಿದ್ದರಿಂದ ಕುಟುಂಬದ ಸಾಂಪ್ರದಾಯಿಕ ಕಸುಬಿನಲ್ಲಿ ಮುಂದುವರಿಯುವುದು ಅವರ ತಂದೆಗೆ ಇಷ್ಟವಿರಲಿಲ್ಲ. ಅದಾಗ್ಯೂ ಪರಿಸ್ಥಿತಿಯ ಕಾರಣದಿಂದ ಕೊನೆಗೆ ಖಾದ್ರಿ ಅವರು ತಮ್ಮ ತಂದೆಯ ಮೇಲ್ವಿಚಾರಣೆಯಲ್ಲೇ ಈ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ.

'ಈ ಕರಕುಶಲತೆಯಲ್ಲಿ ತಾನು ತೊಡಗಿಸಿಕೊಂಡ ನಂತರ ತನಗೆ ಸಾಕಷ್ಟು ಪ್ರೋತ್ಸಾಹ ಸಿಕ್ಕಿತು. ಈ ಪ್ರಾಚೀನ ಹಳೆಯ ಕರಕುಶಲತೆಯ ಸುಧಾರಣೆ ಮತ್ತು ಅಭಿವೃದ್ಧಿಗಾಗಿ ಹೊಸ ಮಾದರಿ, ವಿನ್ಯಾಸ ಕಂಡುಹಿಡಿಯಲು ಪ್ರಾರಂಭಿಸಿದೆ' ಎಂದು ಖಾದ್ರಿ ಅವರು ಹೇಳುತ್ತಾರೆ.

ತಂದೆಯಿಂದ ತರಬೇತಿ ಪಡೆದ ನಂತರ, 1970 ರಿಂದ ಸ್ವತಂತ್ರವಾಗಿ ಕೆಲಸ ಮಾಡಲು ಪ್ರಾರಂಭಿಸಿದ ಅವರು ಈ ಕಲೆಗೆ ಹೊಸ ವಿನ್ಯಾಸದ ಮಾದರಿಗಳನ್ನು ಪರಿಚಯಿಸಿದ್ದು, ಕಠಿಣ ಪ್ರಯತ್ನಗಳೊಂದಿಗೆ ಕರಕುಶಲತೆಯನ್ನು ಅಭಿವೃದ್ಧಿಪಡಿಸಲು ಪ್ರಮುಖ ಪಾತ್ರ ವಹಿಸಿದರು.ಬಿದ್ರಿ ಕಲೆಯಲ್ಲಿ ಸಾಕಷ್ಟು ಪ್ರಸಿದ್ಧಿ ಹೊಂದಿರುವ ಖಾದ್ರಿ ಅವರನ್ನು ಅರಸಿ ಇದುವರೆಗೆ ಹಲವು ಪ್ರಶಸ್ತಿಗಳು ಒಲಿದು ಬಂದಿದೆ.

2012 ರಲ್ಲಿ ಶಿಲ್ಪ ಗುರು ಪ್ರಶಸ್ತಿ, 1988 ರಲ್ಲಿ ರಾಷ್ಟ್ರೀಯ ಪ್ರಶಸ್ತಿ, 1984 ರಲ್ಲಿ ರಾಜ್ಯ ಪ್ರಶಸ್ತಿ, 2006 ರಲ್ಲಿ ಸುವರ್ಣ ಕರ್ನಾಟಕ ಉತ್ಸವ ಪ್ರಶಸ್ತಿ, 2004 ರಲ್ಲಿ ಗ್ರೇಟ್ ಇಂಡಿಯನ್ ಅಚೀವರ್ಸ್ ಅವಾರ್ಡ್, 1996 ರಲ್ಲಿ ಕರ್ನಾಟಕ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಮೊದಲಾದವು ಅವುಗಳಲ್ಲಿ ಪ್ರಮುಖವಾದವು.

ಅಮೇರಿಕ (ಯುಎಸ್ಎ), ಇಟಲಿ, ಸಿಂಗಾಪುರ, ಹಾಲೆಂಡ್, ಸ್ಪೇನ್, ಕಿಂಗ್‌ಡಮ್ ಆಫ್ ಬಹ್ರೇನ್, ಮಸ್ಕತ್ , ಸ್ವಿಝರ್‌ಲ್ಯಾಂಡ್‌ ಸೇರಿದಂತೆ ವಿದೇಶಗಳಲ್ಲೂ ಕರಕುಶಲ ಪ್ರದರ್ಶನ ನಡೆಸಿ ತಮ್ಮ ಛಾಪನ್ನು ಅವರು ಮೂಡಿಸಿದ್ದಾರೆ.

ಇದನ್ನೂ ಓದಿ: ಎಸ್ಸೆಂ ಕೃಷ್ಣಗೆ ಪದ್ಮ ವಿಭೂಷಣ, ಸುಧಾ ಮೂರ್ತಿ, ಎಸ್. ಎಲ್ ಭೈರಪ್ಪಗೆ ಪದ್ಮ ಭೂಷಣ,ರಶೀದ್ ಅಹ್ಮದ್ ಖಾದ್ರಿ ಸಹಿತ ನಾಲ್ವರಿಗೆ ಪದ್ಮಶ್ರೀ

share
Ashwani
Ashwani
Next Story
X