ಉಡುಪಿ: ತ್ಯಾಜ್ಯ ನಿರ್ವಹಣೆ ಕುರಿತ ಕಿರುಚಿತ್ರಕ್ಕೆ ಅವಕಾಶ; ಜಿಪಂನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ
ಉಡುಪಿ: ಜಿಲ್ಲಾ ಪಂಚಾಯತ್‌ನ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಜಿಲ್ಲೆಯಲ್ಲಿ ಸಮಗ್ರ ತ್ಯಾಜ್ಯ ನಿರ್ವಹಣೆ ಚಟುವಟಿಕೆ ಅನುಷ್ಠಾನವಾಗುತ್ತಿದ್ದು, ಒಣಕಸ ಹಾಗೂ ಹಸಿಕಸ ನಿರ್ವಹಣೆಯನ್ನು ಮಾಡಲಾಗುತ್ತಿದೆ. ಈ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ತಲಾ 5 ನಿಮಿಷಗಳ ಅವಧಿಯ 3 ಕಿರುಚಿತ್ರಗಳನ್ನು ತಯಾರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಪಂನ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ತಿಳಿಸಿದ್ದಾರೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಕಚೇರಿ ಅಥವಾ ಮೊ.ನಂ:9964443064ನ್ನು ಸಂಪರ್ಕಿಸಬಹುದು ಎಂದು ಜಿಪಂನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story