ಉಡುಪಿ: ಕೆರೆಗೆ ಬಿದ್ದು ವ್ಯಕ್ತಿ ಸಾವು

ಅಜೆಕಾರು: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಹೋಗುವುದಾಗಿ ಮನೆಯಿಂದ ತೆರಳಿದ ವ್ಯಕ್ತಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳದ ಅಂಡಾರು ಎಂಬಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಉಮೇಶ್ ರಾವ್(45) ಮೃತರು. ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಮೃತಪಟ್ಟ ಬಗ್ಗೆ ಸಂಶಯಿಸಲಾಗಿದೆ.
ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story