ಕಾಬೂಲ್: ವಿಮಾನ ನಿಲ್ದಾಣದ ಹೊರಗಡೆ ಸ್ಫೋಟ; 10 ಮಂದಿ ಮೃತ್ಯು

ಕಾಬೂಲ್, ಜ.1: ಅಫ್ಘಾನ್ ರಾಜಧಾನಿ ಕಾಬೂಲ್ ನ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ರವಿವಾರ ಸಂಭವಿಸಿದ ಪ್ರಭಲ ಸ್ಫೋಟದಲ್ಲಿ ಕನಿಷ್ಟ 10 ಮಂದಿ ಮೃತಪಟ್ಟಿದ್ದು ಇತರ 8 ಮಂದಿ ಗಾಯಗೊಂಡಿರುವುದಾಗಿ ತಾಲಿಬಾನ್ ನ ಆಂತರಿಕ ಸಚಿವಾಲಯವನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
ಇಂದು ಬೆಳಿಗ್ಗೆ ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಸ್ಫೋಟ ಸಂಭವಿಸಿದ್ದು ನಮ್ಮ ಹಲವು ನಾಗರಿಕರು ಮೃತಪಟ್ಟಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ಆಂತರಿಕ ಇಲಾಖೆಯ ವಕ್ತಾರ ಅಬ್ದುಲ್ ನಫಿ ಹೇಳಿದ್ದಾರೆ. ಭಾರೀ ಭದ್ರತೆಯ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಬೆಳಿಗ್ಗೆ 8 ಗಂಟೆಗೆ ಸ್ಫೋಟ ಸಂಭವಿಸಿದೆ. ಈ ಪ್ರದೇಶವನ್ನು ಸೀಲ್ ಮಾಡಲಾಗಿದ್ದು ಸಮೀಪದ ರಸ್ತೆಯನ್ನು ಬಂದ್ ಮಾಡಲಾಗಿದೆ. ಸ್ಫೋಟದ ಹೊಣೆಯನ್ನು ಯಾವುದೇ ಸಂಘಟನೆ ವಹಿಸಿಲ್ಲ ಎಂದವರು ಮಾಹಿತಿ ನೀಡಿದ್ದಾರೆ.
Next Story