ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ 150 ಸ್ಥಾನ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ (BJP) 150 ಸ್ಥಾನಗಳನ್ನು ಮತ್ತು ದ.ಕ. ಜಿಲ್ಲೆಯ ಎಲ್ಲ 8 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿದ್ದಾರೆ.
ಇಲ್ಲಿನ ಕೊಡಿಯಾಲ್ ಬೈಲ್‌ನ ಟಿ ವಿ ರಮಣ್ ಪೈ ಸಭಾಂಗಣದಲ್ಲಿ ಸೋಮವಾರ ಬಿಜೆಪಿಯ ಜಿಲ್ಲಾ ಮಟ್ಟದ ಬೂತ್ ವಿಜಯ ಅಭಿಯಾನದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಜನವರಿ2ರಿಂದ 12 ತನಕ ರಾಜ್ಯಾದ್ಯಂತ ಈ ಅಭಿಯಾನ ಮುಂದುವರಿಯಲಿದೆ ಎಂದರು.
ಜ.21ರಿಂದ 29ರ ತನಕ ವಿಜಯ ಸಂಕಲ್ಪ ಅಭಿಯಾನ ನಡೆಯಲಿದೆ. ಒಂದು ಲಕ್ಷ ಹೊಸ ಸದಸ್ಯರ ನೋಂದಾವಣೆಯ ಗುರಿ ಹಾಕಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ನವಭಾರತವನ್ನು ಕಟ್ಟುವ ಕೆಲಸ ನವಕರ್ನಾಟಕ ನಿರ್ಮಾಣದ ಮೂಲಕ ನಡೆಯಬೇಕಿದೆ.
ಚುನಾವಣೆಗೆ ಇನ್ನೂ 100 ದಿನ ಇದೆ. ಮನೆಮನೆಗೆ ಭೇಟಿ, ಸ್ಟಿಕ್ಕರ್ ಹಂಚಿಕೆ, ಗೋಡೆಬರಹ , ಸದಸ್ಯತ್ವ ಅಭಿಯಾನ, ಫಲಾನುಭವಿಗಳ ಭೇಟಿ ಮೂಲಕ ಪಕ್ಷವನ್ನು ಮುಂದಿನ ಚುನಾವಣೆಗೆ ಅಣಿಗೊಳಿಸುವಂತೆ ಕರೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಕ್ಷೇತ್ರದ ಪ್ರಭಾರಿ ಉದಯಕುಮಾರ್ ಶೆಟ್ಟಿ, ಉಪ ಪ್ರಭಾರಿ ರಾಜೇಶ್ ಕಾವೇರಿ ಉಪಸ್ಥಿತರಿದ್ದರು.
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಸ್ವಾಗತಿಸಿದರು.
ಇದನ್ನೂ ಓದಿ: ಬೆಂಗಳೂರು: ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ ಯುವಕ







