Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೂತ್ ವಿಜಯ ಸಂಕಲ್ಪದೊಂದಿಗೆ ಕ್ಷೇತ್ರ,...

ಬೂತ್ ವಿಜಯ ಸಂಕಲ್ಪದೊಂದಿಗೆ ಕ್ಷೇತ್ರ, ರಾಜ್ಯವನ್ನು ಗೆಲ್ಲಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಕರೆ

2 Jan 2023 2:34 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೂತ್ ವಿಜಯ ಸಂಕಲ್ಪದೊಂದಿಗೆ ಕ್ಷೇತ್ರ, ರಾಜ್ಯವನ್ನು ಗೆಲ್ಲಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಕರೆ

ಹಿರಿಯಡ್ಕ: ಜಿಲ್ಲೆಯ 1,111 ಬೂತ್‌ಗಳಲ್ಲೂ ಜ.2ರಿಂದ ಜ.12ರ ವರೆಗೆ ನಡೆಯಲಿರುವ ಬೂತ್ ವಿಜಯ ಅಭಿಯಾನದಲ್ಲಿ ಪಕ್ಷದ ಎಲ್ಲ ಸ್ಥರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಣ್ಣ ಪುಟ್ಟ ವಿಚಾರಗಳನ್ನು ಬದಿಗಿಟ್ಟು ಬೂತ್ ವಿಜಯದ ಸಂಕಲ್ಪದೊಂದಿಗೆ ಕ್ಷೇತ್ರ ಮತ್ತು ರಾಜ್ಯವನ್ನು ಗೆಲ್ಲಲು ಸನ್ನದ್ಧರಾಗಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಬಿಜೆಪಿ ವತಿಯಿಂದ ನಡೆದಿರುವ ‘ಬೂತ್ ವಿಜಯ ಅಭಿಯಾನ’ವನ್ನು ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೊಮ್ಮರಬೆಟ್ಟು ಗ್ರಾಮದ ಹಿರಿಯಡ್ಕ ಕೋಟ್ನಕಟ್ಟೆಯ ಹೋಟೆಲ್ ಸುರಭಿ ಸಭಾಂಗಣದಲ್ಲಿ ಸೋಮವಾರ  ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಬೂತ್ ಗೆಲ್ಲುವ ಮೂಲಕ ರಾಜ್ಯವನ್ನು ಗೆಲ್ಲುವ  ಬಿಜೆಪಿ ರಾಷ್ಟ್ರೀಯ ನಿಕಟ ಪೂರ್ವ ಅಧ್ಯಕ್ಷ  ಅಮಿತ್ ಶಾ ಕನಸು ನನಸಾಗಬೇಕು. ಕಾಪು ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿ ಕಾರ್ಯಗಳಾಗಿವೆ. ಈ ನಿಟ್ಟಿನಲ್ಲಿ ಪ್ರಚಾರದ ಅಗತ್ಯವಿದೆ. ಕಾಪು ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲುವು ಮುಂದುವರಿಸಲು ರೂಪುರೇಷೆ ರೂಪಿಸಬೇಕು ಎಂದವರು ಹೇಳಿದರು.

ಪ್ರತಿ ಬೂತಿನಲ್ಲೂ ಫಲಾನುಭವಿಗಳ ಸಮಾವೇಶ, ಪ್ರತಿ ಮಂಡಲದಲ್ಲೂ ವಿವಿಧ ಮೋರ್ಚಾಗಳ ಸಮಾವೇಶ ನಡೆಸಬೇಕು. ಪ್ರತಿ ಬೂತಿನಲ್ಲೂ ಬೂತ್ ಸಮಿತಿಗಳ ಪರಿಶೀಲನೆ, ಪೇಜ್ ಪ್ರಮುಖರ ನಿಯುಕ್ತಿ, ಮತಗಟ್ಟೆಗಳ ವಾಟ್ಸಾಪ್ ಗ್ರೂಪ್ ರಚನೆ, ಕಾರ್ಯಕರ್ತರ ಮನೆಗಳ ಮೇಲೆ ಧ್ವಜಾರೋಹಣ, ಪ್ರಧಾನಿಯವರ ಮನ್ ಕೀ ಬಾತ್ ವೀಕ್ಷಣೆ ಮುಂತಾದ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವವನ್ನು ನೀಡಬೇಕು ಎಂದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಸಂಘಟನಾತ್ಮಕ, ಅಲ್ಪಸಂಖ್ಯಾತರ ಪ್ರಾಬಲ್ಯವುಳ್ಳ ಕಾಪು ಕ್ಷೇತ್ರದಲ್ಲಿ ಎಸ್‌ಡಿಪಿಐ ರಾಜಕೀಯವಾಗಿ ಬೆಳವಣಿಗೆ ಕಾಣುತ್ತಿದ್ದು ಸಕಾರಾತ್ಮಕ ನೆಲೆಯಲ್ಲಿ ಬೂತ್ ಬಲವರ್ಧನೆಯಾಗಬೇಕು. 3,000 ಕೋಟಿ ರೂ. ಅಭಿವೃದ್ಧಿ ಕಾಮಗಾರಿ  ಕ್ಷೇತ್ರದಲ್ಲಿ ಪ್ರಗತಿಯಲ್ಲಿದೆ ಎಂದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಾಂಬೆಟ್ಟು ಉಪಸ್ಥಿತರಿದ್ದರು.

ಕಾಪು ಮಂಡಲಾಧ್ಯಕ್ಷ ಶ್ರೀಕಾಂತ್ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಕಾರ್ಯಕ್ರಮ ನಿರೂಪಿಸಿದರು.ಬಳಿಕ ಬೊಮ್ಮರಬೆಟ್ಟು ಬೂತ್ 2ರ ಅಧ್ಯಕ್ಷ ಶಿಶಿರ್ ಮನೆಯಲ್ಲಿ ಬಿಜೆಪಿ ಧ್ವಜವನ್ನು ಹಾರಿಸಲಾಯಿತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X