Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನ್ನ ನಾಟಕವನ್ನು ತಿರುಚಿದವರ ವಿರುದ್ಧ...

ನನ್ನ ನಾಟಕವನ್ನು ತಿರುಚಿದವರ ವಿರುದ್ಧ ಕ್ರಮ ಕೈಗೊಳ್ಳಿ: ಮೈಸೂರು ಕಮಿಷನರ್ ಗೆ ಡಾ.ಚಂದ್ರಶೇಖರ ಕಂಬಾರ ದೂರು

ರಂಗಾಯಣದಲ್ಲಿ ಪ್ರದರ್ಶಗೊಂಡಿದ್ದ ''ಸಾಂಬಶಿವ ಪ್ರಹಸನ''

2 Jan 2023 9:19 PM IST
share
ನನ್ನ ನಾಟಕವನ್ನು ತಿರುಚಿದವರ ವಿರುದ್ಧ ಕ್ರಮ ಕೈಗೊಳ್ಳಿ: ಮೈಸೂರು ಕಮಿಷನರ್ ಗೆ ಡಾ.ಚಂದ್ರಶೇಖರ ಕಂಬಾರ ದೂರು
ರಂಗಾಯಣದಲ್ಲಿ ಪ್ರದರ್ಶಗೊಂಡಿದ್ದ ''ಸಾಂಬಶಿವ ಪ್ರಹಸನ''

ಮೈಸೂರು,ಜ.2: ಮೈಸೂರಿನ ರಂಗಾಯಣದಲ್ಲಿ  ನನ್ನ ನಾಟಕ ''ಸಾಂಬಶಿವ ಪ್ರಹಸನ'' ವನ್ನು  ನನ್ನ ಅನುಮತಿ ಇಲ್ಲದೆ ಪ್ರದರ್ಶಿಸಿದ್ದಲ್ಲದೆ, ಅಸಹ್ಯಕರವಾಗಿ ಪ್ರದರ್ಶ ಮಾಡಿದ್ದು, ಇದಕ್ಕೆ ಕಾರಣರಾದ ಎಲ್ಲರ ಮೇಲೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ಇ- ಮೇಲ್ ಮೂಲಕ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಖುದ್ದು ದೂರವಾಣಿ ಮೂಲಕ ಮಾತನಾಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಮೈಸೂರಿನ  ರಂಗಾಯಣದಲ್ಲಿ ನನ್ನ ನಾಟಕ ಸಾಂಬಶಿವ ಪ್ರಹಸನವನ್ನು ಅಸಹ್ಯವಾಗಿ ತಿರುಚಿ ಪ್ರದರ್ಶಿಸಿರುವ ಬಗ್ಗೆ ನನಗೆ ತುಂಬ ವಿಷಾದವಾಗಿದೆ. ಮೊದಲನೆಯದಾಗಿ ನನ್ನ ನಾಟಕ ಪ್ರದರ್ಶಿಸುವುದಕ್ಕೆ ನನ್ನ  ಅನುಮತಿ ಕೇಳಲೇ  ಬೇಕಾಗಿತ್ತು. ಆದರೆ ಇವರು ಕೇಳಿಲ್ಲ. ರಂಗಾಯಣವಾದರೂ ನನ್ನ ಅನುಮತಿ ಇಲ್ಲದ ನಾಟಕ ಪ್ರದರ್ಶನಕ್ಕೆ  ಅವಕಾಶ ಕೊಟ್ಟಿರುವುದು ವಿಷಾದಕರ ಎಂದು ತಿಳಿಸಿದ್ದಾರೆ.

ಎರಡನೆಯದಾಗಿ ನನ್ನ ಯಾವುದೇ ನಾಟಕಗಳಲ್ಲಿ ವ್ಯಕ್ತಿಗತ ನಿಂದನೆ ಇರುವುದು ಸಾಧ್ಯವಿಲ್ಲ. ಅನುಮತಿ ಇಲ್ಲದೆ ನಾಟಕವನ್ನು ಪ್ರದರ್ಶಿಸಿದ್ದಕ್ಕೆ ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟವರಿಗೂ ಮತ್ತು ಇಲ್ಲದ ಸಾಹಿತ್ಯವನ್ನು ಸೇರಿಸಿದ್ದಕ್ಕೆ ನಿರ್ದೇಶಕರ ಮೇಲೂ ಹಾಗೂ ಈ ಅಹಿತಕರ ವಾತಾವರಣಕ್ಕೆ ಕಾರಣರಾದ ಸಂಬಂಧಪಟ್ಟ ಎಲ್ಲರ ಮೇಲೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ

ಕಾನೂನು ಕ್ರಮ - ಪೊಲಿಸ್ ಆಯುಕ್ತ

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಅವರು ಅವರ ನಾಟಕ ಸಾಂಬಶಿವ ಪ್ರಹಸನ ವನ್ನು ಅನುಮತಿ ಇಲ್ಲದೆ ತಿರುಚಿ ಅಸಹ್ಯಕರ ರೀತಿಯಾಗಿ ಪ್ರದರ್ಶನ ಮಾಡಲಾಗಿದೆ ಎಂಬ ದೂರನ್ನು ಇ ಮೇಲ್ ಮೂಲಕ ಕಳುಹಿಸಿಕೊಟ್ಟಿದ್ದಾರೆ ಎಂದು ಮೈಸೂರು ನಗರ ಪೊಲಿಸ್ ಆಯುಕ್ತ ರಮೇಶ್ ಭಾನೋತ್ ಸ್ಪಷ್ಟಪಡಿಸಿದರು.

ಈ ಸಂಬಂಧ ಸೋಮವಾರ ವಾರ್ತಾಭಾರತಿ ಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಸಾಂಬಶಿವ  ಪ್ರಹಸನ ನಾಟಕವನ್ನು ತಿರುಚಿ ಅಸಹ್ಯಕರ ರೀತಿಯಲ್ಲ ಪ್ರದರ್ಶನ ಮಾಡಲಾಗಿದೆ ಎಂಬ ದೂರನ್ನು ನೀಡಿದ್ದಾರೆ. ಜೊತೆಗೆ ದೂರವಾಣಿ ಮೂಲಕ ಸಹ ಮಾತನಾಡಿದ್ದಾರೆ. ಈ ಸಂಬಂಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

share
Next Story
X