ಮೋಂಟುಗೋಳಿ: ರಕ್ತದಾನ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

ಮೋಂಟುಗೋಳಿ: ಸುಲ್ತಾನ್ ಫ್ರೆಂಡ್ಸ್ ಮೋಂಟುಗೋಳಿ ಇದರ 10ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರ ಹಾಗೂ ನೇತ್ರ ತಪಾಸಣಾ ಶಿಬಿರವನ್ನು ಯೆನೆಪೋಯ ಆಸ್ಪತ್ರೆಯ ಸಹಯೋಗದೊಂದಿಗೆ ನಡೆಸಲಾಯಿತು.
ಈ ಕಾರ್ಯಕ್ರಮವನ್ನು ಸ್ಥಳೀಯ ಗೌಸಿಯಾ ಜುಮಾ ಮಸೀದಿಯ ಖತೀಬರಾದ ಅಬೂಬಕರ್ ಸಅದಿ ಉಸ್ತಾದರು ಉದ್ಘಾಟಿಸಿದರು.
ಅಬ್ದುಲ್ ಜಲೀಲ್ ಮೋಂಟುಗೋಳಿ, ಅಶ್ರಫ್ ಪದಿಂಜಾರ್, ಬ್ಲಡ್ ಡೋನರ್ಸ್ ಮಂಗಳೂರು ಇದರ ಅಧ್ಯಕ್ಷರಾದ ಸಿದ್ದೀಕ್ ಮಂಜೇಶ್ವರ, ಅಬ್ಬಾಸ್ ಎರ್ಮಾಡಿ, ಬಾಳೆಪುಣಿ ಗ್ರಾಮ ಪಂಚಾಯಿತಿಯ ಸದಸ್ಯರಾದ ಸಿ.ಮ್.ಶರೀಫ್, ಅನ್ಸಾರ್ ಗರಡಿ, ಆಸೀಫ್ ಬಾಕಿಮಾರ್, ಯೆನೆಪೋಯ ಆಸ್ಪತ್ರೆಯ ವೈದ್ಯರಾದ ಡಾ.ಕೀರ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಂಸ್ಥೆಯ ಕಾರ್ಯದರ್ಶಿ ನೌಶಾದ್ ಮೋಂಟುಗೋಳಿ ಕಾರ್ಯಕ್ರಮವನ್ನು ನಿರೂಪಿಸಿದರು. ಸಂಸ್ಥೆಯ ಅಧ್ಯಕ್ಷ ಅಬ್ದುಲ್ ನಾಸಿರ್ ಮುಖ್ಯ ಅಥಿತಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.
Next Story