ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಪ್ರದೀಪ್ ನಿವಾಸಕ್ಕೆ ಕಾಂಗ್ರೆಸ್ ನಾಯಕರ ಭೇಟಿ
ಸಿದ್ದರಾಮಯ್ಯ ಹಂಚಿಕೊಂಡ ವಿಡಿಯೋದಲ್ಲಿ ಕುಟುಂಬಸ್ಥರು ಹೇಳಿದ್ದೇನು?

ಬೆಂಗಳೂರು, ಜ.3: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಸೇರಿ 6 ಮಂದಿಯ ಹೆಸರನ್ನು ಡೆತ್‍ನೋಟ್ ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಪ್ರದೀಪ್ ಅವರ ಕಗ್ಗಲೀಪುರದ ನಿವಾಸಕ್ಕೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದೆ.
ಇಂದು ಬೆಳಿಗ್ಗೆ ಕಾಂಗ್ರೆಸ್ ಪಕ್ಷದ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ಅವರು ಪ್ರದೀಪ್ ಮನೆಗೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕುಟುಂಬ ಸದಸ್ಯರಿಗೆ ನ್ಯಾಯ ಒದಗಿಸುವ ಭರವಸೆ ನೀಡಿದರು.
ಈ ಕುರಿತು ಟ್ವೀಟ್ ಮಾಡಿರುವ ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, 'ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಪ್ರದೀಪ್ ಅವರ ಕಗ್ಗಲೀಪುರದ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರ ಜೊತೆಗೂಡಿ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಸೇರಿದಂತೆ ಇನ್ನಿತರರು ನನ್ನೊಂದಿಗಿದ್ದರು' ಎಂದು ತಿಳಿಸಿದ್ದಾರೆ.
FIR ದಾಖಲು: ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಪ್ರಕರಣ ದಾಖಲಾಗಿದೆ. ಲಿಂಬಾವಳಿ ಸೇರಿದಂತೆ 6 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಕಗ್ಗಲೀಪುರದ ಪ್ರದೀಪ್ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ @rssurjewala ಅವರ ಜೊತೆಗೂಡಿ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ @RLR_BTM ಸೇರಿದಂತೆ ಇನ್ನಿತರರು ನನ್ನೊಂದಿಗಿದ್ದರು. pic.twitter.com/wMalfFvYey
— Siddaramaiah (@siddaramaiah) January 3, 2023







