Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಧಾನಸಭೆ ಚುನಾವಣೆ: ಪೂರ್ವ...

ವಿಧಾನಸಭೆ ಚುನಾವಣೆ: ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದ ಚು.ಆಯೋಗದ ಅಧಿಕಾರಿಗಳು

3 Jan 2023 5:27 PM IST
share
ವಿಧಾನಸಭೆ ಚುನಾವಣೆ: ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದ ಚು.ಆಯೋಗದ ಅಧಿಕಾರಿಗಳು

ಬೆಂಗಳೂರು, ಜ.3: ಪ್ರಸಕ್ತ ಸಾಲಿನಲ್ಲಿ ಜರುಗಲಿರುವ ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಹಮ್ಮಿಕೊಳ್ಳಲಾಗಿರುವ ಪೂರ್ವತಯಾರಿ ಕಾರ್ಯಗಳನ್ನು ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತ ಅಜಯ್ ಭಾದೂ ಹಾಗೂ ಕಾರ್ಯದರ್ಶಿ ಬಿ.ಸಿ.ಪಾತ್ರ ಪರಿವೀಕ್ಷಣೆ ನಡೆಸಿದರು.

ಚುನಾವಣೆಯ ಪೂರ್ವ ತಯಾರಿ ಕಾರ್ಯಗಳನ್ನು ಪರಿವೀಕ್ಷಿಸಲು ಎರಡು ದಿನಗಳ ಭೇಟಿಗಾಗಿ ಸೋಮವಾರ ಬೆಂಗಳೂರಿಗೆ ಆಗಮಿಸಿದ ಅವರು, ಮೊದಲ ದಿನ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಎರಡನೇ ದಿನ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳ ತಂಡಗಳ ಜೊತೆ ವಚ್ರ್ಯುಯಲ್ ಮೂಲಕ ಸಭೆ ನಡೆಸಿ ಸಂಪೂರ್ಣ ಮಾಹಿತಿ ಪಡೆದರು.

ಸಭೆಯಲ್ಲಿ ಮುಖ್ಯವಾಗಿ ಇದೇ ತಿಂಗಳು ಪ್ರಕಟವಾಗಲಿರುವ ಪರಿಷ್ಕøತ ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಚರ್ಚಿಲಾಯಿತು. ಅದರಲ್ಲೂ ಮುಖ್ಯವಾಗಿ ಅಂತಿಮ ಮತದಾರರ ಪಟ್ಟಿ ತಯಾರಿಕೆಯಲ್ಲಿ ಮೃತ ಪಟ್ಟವರ ಹೆಸರುಗಳನ್ನು ತೆಗೆದು ಹಾಕುವುದು, ವಿಳಾಸ ಬದಲಾದವರ ಹೆಸರುಗಳ ವರ್ಗಾವಣೆ ಮತ್ತು ಹೊಸ ಯುವ ಮತದಾರರ ಹೆಸರುಗಳ ಸೇರ್ಪಡೆ ಕುರಿತಂತೆ ಅನುಸರಿಸಬೇಕಾದ ವಿಧಾನಗಳ ಕುರಿತು ಹೆಚ್ಚು ಒತ್ತು ನೀಡುವಂತೆ ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಯಿತು.

ಅಂತಿಮ ಮತದಾರರ ಪಟ್ಟಿಯಲ್ಲಿ ಮುಖ್ಯವಾಗಿ ಸಾರ್ವಜನಿಕರ ಮಾಹಿತಿ ಸರಿಯಾಗಿರಬೇಕು ಜೊತೆಗೆ ಯಾವುದೇ ಕಾರಣದಿಂದ ಅರ್ಹ ಮತದಾರರ ಹೆಸರುಗಳು ಕೈ ಬಿಡದಂತೆ ಜಾಗೃತಿವಹಿಸಬೇಕು, ಜಿಲ್ಲಾ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಜಿಲ್ಲೆಗಳಲ್ಲಿ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಪ್ರತಿ ಮನೆ-ಮನೆಗೆ ಭೇಟಿ ನೀಡಿ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸಿರುವ ಬಗ್ಗೆ ನಿಗಾವಹಿಸಬೇಕು ಎಂದು ಅವರು ಹೇಳಿದರು.

ಅಂತಿಮ ಮತದಾರರ ಪಟ್ಟಿಯ ತಯಾರಿಯಲ್ಲಿ ತಮ್ಮ ಜಿಲ್ಲಾ ವ್ಯಾಪ್ತಿಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಸೇರ್ಪಡೆಗೊಂಡಿರುವ (Addition) ಮತ್ತು ತೆಗೆದುಹಾಕಿರುವ (Addition) 10 ಮತಕೇಂದ್ರಗಳನ್ನು ಗುರುತಿಸಿ ಅವುಗಳಿಗೆ ಸಕಾರಣಗಳನ್ನು ಗುರುತಿಸಿ ಸರಿಮಾಡುವಂತೆ ಸೂಚಿಸಿದರು. 

ಕಳೆದ ಸಾರ್ವತ್ರಿಕ ಚುನಾವಣಾ ಸಂದರ್ಭದಲ್ಲಿ ಅತ್ಯಂತ ಕಡಿಮೆ ಮತದಾನವಾಗಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಶೇಕಡಾವಾರು ಮತದಾನವನ್ನು ಹೆಚ್ಚಿಸಲು ಸೂಕ್ತ ಕ್ರಮಕೈಗೊಳ್ಳುವುದು ಹಾಗೂ ಮತದಾರರ ಜಾಗೃತಿಗಾಗಿ ಹೆಚ್ಚಿನ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಜಯ್ ಭಾದೂ ಬಿ.ಸಿ.ಪಾತ್ರ ಸಲಹೆ ನೀಡಿದರು.

ಇದಲ್ಲದೇ, ಚುನಾವಣಾ ಕಾರ್ಯಕ್ಕಾಗಿ ಅವಶ್ಯವಿರುವ ಮಾನವ ಸಂಪನ್ಮೂಲ ಕುರಿತು ಚರ್ಚಿಸಿದ ಅವರು, ತಮಗೆ ಅವಶ್ಯವಿರುವ ಸ್ಥಾನಗಳ ಕುರಿತು ಕೂಡಲೇ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಗಮನಕ್ಕೆ ತರಲು ಸೂಚಿಸಿದರು. 

ಈ ಎರಡು ದಿನಗಳ ಸಭೆಯಲ್ಲಿ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್, ಪಿ. ರಾಜೇಂದ್ರ ಚೋಳನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
Next Story
X