Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಬಿಜೆಪಿಯಲ್ಲಿ ನಾಯಕತ್ವವಿಲ್ಲವೆಂದು...

ರಾಜ್ಯ ಬಿಜೆಪಿಯಲ್ಲಿ ನಾಯಕತ್ವವಿಲ್ಲವೆಂದು ಅಮಿತ್ ಶಾ ಅವರೇ ಒಪ್ಪಿಕೊಂಡಿದ್ದಾರೆ: ಡಿ.ಕೆ.ಶಿವಕುಮಾರ್

''ಜನ ಇನ್ನೂ 60 ದಿನ ಈ ಸರಕಾರದ ಅನ್ಯಾಯವನ್ನು ತಡೆದುಕೊಳ್ಳಬೇಕಿದೆ...''

3 Jan 2023 5:36 PM IST
share
ರಾಜ್ಯ ಬಿಜೆಪಿಯಲ್ಲಿ ನಾಯಕತ್ವವಿಲ್ಲವೆಂದು ಅಮಿತ್ ಶಾ ಅವರೇ ಒಪ್ಪಿಕೊಂಡಿದ್ದಾರೆ: ಡಿ.ಕೆ.ಶಿವಕುಮಾರ್
''ಜನ ಇನ್ನೂ 60 ದಿನ ಈ ಸರಕಾರದ ಅನ್ಯಾಯವನ್ನು ತಡೆದುಕೊಳ್ಳಬೇಕಿದೆ...''

ಬೆಂಗಳೂರು, ಜ.3: ಕೇಂದ್ರ ಗೃಹ ಸಚಿವ ಅಮಿತ್ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಇಲ್ಲ ಎಂದು ಒಪ್ಪಿಕೊಂಡಿರುವುದನ್ನು ನಾನು ಅಭಿನಂದಿಸುತ್ತೇನೆ. ಈ ಕಾರಣಕ್ಕೆ ರಾಜ್ಯಕ್ಕೆ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ವೈಫಲ್ಯ ಅನುಭವಿಸಿದೆ. ಹೀಗಾಗಿ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕತ್ವವನ್ನು ಬಳಸಿಕೊಳ್ಳುತ್ತಿದೆ. ರಾಜ್ಯದಲ್ಲಿನ ಆಡಳಿತ, ಅಭಿವೃದ್ಧಿಯ ವಿಚಾರ ಚುನಾವಣೆ ವೇಳೆ ಗಣನೆಗೆ ಬರುತ್ತದೆ ಎಂದರು.

ನಾವು ಜ.11 ರಿಂದ ರಾಜ್ಯ ಪ್ರವಾಸ ಆರಂಭಿಸುತ್ತಿದ್ದು, ಎಲ್ಲ ಮೂಲೆ, ಮೂಲೆಗಳನ್ನು ತಲುಪಿ ಎಲ್ಲ ವರ್ಗದ ಜನರನ್ನು ಭೇಟಿ ಮಾಡುತ್ತೇವೆ. ಬಿಜೆಪಿ ಸರಕಾರ ತನ್ನ ಕೊನೆಯ ದಿನಗಳಲ್ಲಿದ್ದು, ಈ ಸರಕಾರ ಮಾಡಿರುವ ಅನ್ಯಾಯವನ್ನು ಜನರಿಗೆ ತಿಳಿಸುತ್ತೇವೆ. ಬಿಜೆಪಿ ಸರಕಾರದ ಅಂತ್ಯವಾಗಿ ಕಾಂಗ್ರೆಸ್ ಸರಕಾರ ಬರಲಿದೆ ಎಂದು ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

 - ಡಿ.ಕೆ.ಶಿವಕುಮಾರ್ - ಕೆಪಿಸಿಸಿ ಅಧ್ಯಕ್ಷರು

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಯಾರಾದರೂ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಕಾರಣವಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಈ ದೇಶದಲ್ಲಿ ಕಾನೂನು ಇದೆ. ಈ ಪ್ರಕರಣದಲ್ಲಿ ಶಾಸಕರ ಹೆಸರು ಪ್ರಸ್ತಾಪವಾಗಿದ್ದು, ಸರಕಾರ ಯಾರನ್ನೂ ರಕ್ಷಣೆ ಮಾಡಬಾರದು’ ಎಂದರು.

ಕಾನೂನಿನ ಮುಂದೆ ಲಿಂಬಾವಳಿ ಬೇರೆಯಲ್ಲ, ಶಿವಕುಮಾರ್ ಬೇರೆಯಲ್ಲ. ಆದರೆ ಈ ಸರಕಾರ ಲಂಚ, ಮಂಚ, ಇಂತಹ ಕೊಲೆ ಪ್ರಕರಣಗಳಲ್ಲಿ ಆರೋಪಿಗಳ ರಕ್ಷಣೆ ಮಾಡಿಕೊಂಡು ಬಂದಿದೆ. ಜನ ಇನ್ನು 60 ದಿನ ಈ ಸರಕಾರದ ಅನ್ಯಾಯವನ್ನು ತಡೆದುಕೊಳ್ಳಬೇಕಿದೆ ಎಂದು ಅವರು ಹೇಳಿದರು.

ನಂದಿನಿ ಹಾಗೂ ಅಮೂಲ್ ವಿಲೀನವಿಲ್ಲ. ಕೇವಲ ತಂತ್ರಜ್ಞಾನ ವಿನಿಮಯ ಮಾತ್ರ ಎಂದು ಮುಖ್ಯಮಂತ್ರಿ ನೀಡಿರುವ ಸ್ಪಷ್ಟನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಅಮಿತ್ ಶಾ ಸಾರ್ವಜನಿಕ ವೇದಿಕೆಯಲ್ಲಿ ನೀಡಿರುವ ಹೇಳಿಕೆ ಬಹಿರಂಗವಾಗಿದೆ. ನಾವು ಇದನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಬೊಮ್ಮಾಯಿ ಈ ವಿಚಾರ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.

ಕನಕಪುರದಲ್ಲಿರುವ ಹಾಲು ಉತ್ಪಾದನೆ ಘಟಕವು ಅಮೂಲ್ ಸಂಸ್ಥೆಗಿಂತ ಹಾಗೂ ಏಷ್ಯಾದಲ್ಲೇ ಅತ್ಯುತ್ತಮ ಆಧುನಿಕ ತಂತ್ರಜ್ಞಾನವನ್ನು ಹೊಂದಿರುವ ಘಟಕ. ರಾಜ್ಯದಲ್ಲಿ ಇಂತಹ ತಂತ್ರಜ್ಞಾನ ಇರುವಾಗ ನಮಗೆ ಬೇರೆ ರಾಜ್ಯದ ತಂತ್ರಜ್ಞಾನದ ಅಗತ್ಯವಿಲ್ಲ. ನಮ್ಮ ರಾಜ್ಯದ ಮಾದರಿಯು ಗುಜರಾತ್ ಮಾದರಿಗಿಂತ ಉತ್ತಮವಾಗಿದೆ ಎಂದು ಅವರು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಭಿವೃದ್ಧಿ ವಿಚಾರಕ್ಕಿಂತ ಲವ್ ಜಿಹಾದ್ ವಿಚಾರವನ್ನು ಪ್ರಸ್ತಾಪಿಸಿ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಇದು ಅತ್ಯಂತ ಕೆಟ್ಟ ಸಂದೇಶವಾಗಿದೆ. ಇದು ಅವರು ಅಭಿವೃದ್ಧಿಗೆ ಆದ್ಯತೆ ನೀಡುವುದಕ್ಕಿಂತ, ದ್ವೇಷ ಪಸರಿಸಿ, ದೇಶವನ್ನು ಒಡೆಯುವ ಪ್ರಯತ್ನಕ್ಕೆ ಮುಂದಾಗಿರುವುದಕ್ಕೆ ಸಾಕ್ಷಿ ಎಂದರು. 

''ಇಂದಿರಾ ಕ್ಯಾಂಟೀನ್ ಉಳಿಸಲು ಹೋರಾಟ''

ಇಂದಿರಾ ಕ್ಯಾಂಟೀನ್ ಜನರ ಹೊಟ್ಟೆ ತುಂಬಿಸಲು ಕಡಿಮೆ ದರದಲ್ಲಿ ಊಟ ನೀಡುವ ಯೋಜನೆ. ಇದು ಜನರ ಹೃದಯದಲ್ಲಿ ಸ್ಥಾನ ಪಡೆದಿದೆ. ಚಾಲಕರು, ಕೂಲಿ ಕಾರ್ಮಿಕರು ಈ ಬೆಲೆ ಏರಿಕೆ ಸಮಯದಲ್ಲಿ ಕಡಿಮೆ ದರದಲ್ಲಿ ಊಟ ಪಡೆದು ನೆಮ್ಮದಿಯಾಗಿದ್ದಾರೆ. ಇದು ಕಾಂಗ್ರೆಸ್ ಕಾರ್ಯಕ್ರಮವಾಗಿರುವುದರಿಂದ ಬಿಜೆಪಿ ಸರಕಾರ ಇದನ್ನು ನಿಲ್ಲಿಸಲು ಪ್ರಯತ್ನಿಸುತ್ತಿದೆ. ಈ ವಿಚಾರವಾಗಿ ನಾವು ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

share
Next Story
X