Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಅದಾನಿ, ಅಂಬಾನಿ ನಾಯಕರನ್ನು,...

"ಅದಾನಿ, ಅಂಬಾನಿ ನಾಯಕರನ್ನು, ಮಾಧ್ಯಮವನ್ನು ಖರೀದಿಸಿದರು, ರಾಹುಲ್‌ ನನ್ನು ಖರೀದಿಸಲು ಸಾಧ್ಯವಾಗಲಿಲ್ಲ: ಪ್ರಿಯಾಂಕಾ

3 Jan 2023 6:10 PM IST
share
ಅದಾನಿ, ಅಂಬಾನಿ ನಾಯಕರನ್ನು, ಮಾಧ್ಯಮವನ್ನು ಖರೀದಿಸಿದರು, ರಾಹುಲ್‌ ನನ್ನು ಖರೀದಿಸಲು ಸಾಧ್ಯವಾಗಲಿಲ್ಲ: ಪ್ರಿಯಾಂಕಾ

ಘಾಝಿಯಾಬಾದ್,ಜ.3: ಕೈಗಾರಿಕೋದ್ಯಮಿಗಳಾದ ಗೌತಮ ಅದಾನಿ ಮತ್ತು ಮುಕೇಶ ಅಂಬಾನಿ ಅವರು ರಾಜಕಾರಣಿಗಳು ಮತ್ತು ಮಾಧ್ಯಮ ಸಂಸ್ಥೆಗಳನ್ನು ಖರೀದಿಸಿದ್ದಾರೆ,ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಖರೀದಿಸಲು ಅವರಿಗೆ ಸಾಧ್ಯವಾಗಲಿಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಂಗಳವಾರ ಇಲ್ಲಿ ಹೇಳಿದರು.

ದಿಲ್ಲಿಯಲ್ಲಿ ಒಂಭತ್ತು ದಿನಗಳ ವಿರಾಮದ ಬಳಿಕ ಮಂಗಳವಾರ ಪುನರಾರಂಭಗೊಂಡ ರಾಹುಲ್ ನೇತೃತ್ವದ ಭಾರತ ಜೋಡೊ ಯಾತ್ರೆಯು ಉತ್ತರ ಪ್ರದೇಶದ ಘಾಜಿಯಾಬಾದ್ ಪ್ರವೇಶಿಸಿದೆ. ಈ ಸಂದರ್ಭ ರ್ಯಾಲಿಯಲ್ಲಿ ಮಾತನಾಡಿದ ಪ್ರಿಯಾಂಕಾ,ರಾಹುಲ್ ಪ್ರತಿಷ್ಠೆಯನ್ನು ಹಾಳುಗೆಡವಲು ಸರಕಾರವು ಸಾವಿರಾರು ಕೋ.ರೂ.ಗಳನ್ನು ವ್ಯಯಿಸಿದೆ,ಆದರೆ ತನ್ನ ಸೋದರ ಸತ್ಯದ ಹಾದಿಯಿಂದ ಹಿಂದೆ ಸರಿದಿಲ್ಲ. ಅವರನ್ನು ಗುರಿಯಾಗಿಸಿಕೊಳ್ಳಲು ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳಲಾಗಿತ್ತು,ಆದರೆ ಅದರಿಂದ ಅವರು ಭೀತಿಗೊಳ್ಳಲಿಲ್ಲ. ಅವರೋರ್ವ ಯೋಧರಾಗಿದ್ದಾರೆ ಎಂದು ಹೇಳಿದರು.
‘ರಾಹುಲ್ ಸುರಕ್ಷತೆಯ ಬಗ್ಗೆ ಹೆದರಿಕೆಯಿದೆಯೇ ಎಂದು ಹಲವರು ನನ್ನನ್ನು ಪ್ರಶ್ನಿಸಿದ್ದಾರೆ. ರಾಹುಲ್ ಸತ್ಯದ ರಕ್ಷಾಕವಚವನ್ನು ಧರಿಸಿದ್ದಾರೆ ಎಂದು ನಾನು ಅವರಿಗೆ ಉತ್ತರಿಸಿದ್ದೇನೆ. ದೇವರು ನನ್ನ ಸೋದರನನ್ನು ಸುರಕ್ಷಿತವಾಗಿಡುತ್ತಾನೆ. ನೀವೆಲ್ಲ ಸತ್ಯವನ್ನು ಗುರುತಿಸುವವರೆಗೂ ದೇವರು ಈ ದೇಶದ ಸತ್ಯವನ್ನು ರಕ್ಷಿಸುತ್ತಾನೆ ’ ಎಂದ ಪ್ರಿಯಾಂಕಾ ಏಕತೆಯ ಮಾರ್ಗದಲ್ಲಿ ಮಾತ್ರ ತಮ್ಮ ಅಭಿವೃದ್ಧಿ ಅಡಗಿದೆ ಎನ್ನುವುದನ್ನು ತಿಳಿದುಕೊಳ್ಳುವಂತೆ ಜನರನ್ನು ಆಗ್ರಹಿಸಿದರು.

ಮಂಗಳವಾರ ಮಾಜಿ ‘ರಾ’ ಕಾರ್ಯದರ್ಶಿ ಎ.ಎಸ್.ದುಲತ್ ಮತ್ತು ಶಿವಸೇನೆ (ಉದ್ಧವ ಬಾಳಾಸಾಹೇಬ್ ಠಾಕ್ರೆ) ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಭಾರತ ಜೋಡೊ ಯಾತ್ರೆಯಲ್ಲಿ ಹೆಜ್ಜೆಗಳನ್ನು ಹಾಕಿದರು.ಈ ನಡುವೆ ಸುದ್ದಿಗೋಷ್ಠಿಯಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ ನೆಹರು ವಿರಚಿತ ‘ಡಿಸ್ಕವರಿ ಆಫ್ ಇಂಡಿಯಾ’ವನ್ನು ಪ್ರಸ್ತಾಪಿಸಿದ ಬಿಜೆಪಿ ಸಂಸದ ಸುಧಾಂಶು ತ್ರಿವೇದಿಯವರು,ಗಾಂಧಿ ಕುಟುಂಬವು ನಾಲ್ಕು ತಲೆಮಾರುಗಳಿಂದಲೂ ಭಾರತದ ಅನ್ವೇಷಣೆಯಲ್ಲಿ ತೊಡಗಿದೆ ಎಂದು ವ್ಯಂಗ್ಯವಾಡಿದರು. ‘ರಾಹುಲ್ಜಿ,ಭಾರತೀಯ ಸಂಸ್ಕೃತಿಯನ್ನು ಅದನ್ನು ಅರ್ಥೈಸಿಕೊಳ್ಳುವ ಮೂಲಕ ತಿಳಿದುಕೊಳ್ಳಬಹುದೇ ಹೊರತು ಭಾರತದಲ್ಲಿ ಪ್ರವಾಸ ಮಾಡುವ ಮೂಲಕ ಅಲ್ಲ ’ಎಂದು ಅವರು ಹೇಳಿದರು.

share
Next Story
X