Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯ ಜಾತ್ರೋತ್ಸವದಲ್ಲಿ ಸಂತೆ...

ಸುಳ್ಯ ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರಕ್ಕೆ ಮುಕ್ತ ಅವಕಾಶ: ಹಿಂಜಾವೇಗೆ ಮುಖಭಂಗ

3 Jan 2023 8:05 PM IST
share
ಸುಳ್ಯ ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರಕ್ಕೆ ಮುಕ್ತ ಅವಕಾಶ: ಹಿಂಜಾವೇಗೆ ಮುಖಭಂಗ

ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಜ.03 ರಿಂದ ಜ.12 ರವರೆಗೆ ನಡೆಯಲಿದ್ದು, ಈ ಹಿಂದೆ ಯಾವ ರೀತಿ ಸಂತೆ ಏಲಂ ಆಗುತ್ತಿತ್ತೋ ಹಾಗೆಯೇ ಮುಂದುವರಿಸಿ ಎಲ್ಲರಿಗೂ ಮುಕ್ತ ಅವಕಾಶ ನೀಡಲು ಜಾತ್ರೋತ್ಸವದ ಪೂರ್ವಬಾವಿ ಸಭೆಯಲ್ಲಿ ನಿರ್ಣಯಿಸಲಾಯಿತು. ಜಾತ್ರೋತ್ಸವದ ಬಗ್ಗೆ ಚರ್ಚಿಸಲು ಜ.2 ರಂದು ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಇದಕ್ಕೂ ಮೊದಲು ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರಕ್ಕೆ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಹಿಂದೂ ಜಾಗರಣಾ ವೇದಿಕೆ ಮನವಿ ದೇವಸ್ಥಾನ ಆಡಳಿತ ಸಮಿತಿಗೆ ಮನವಿ ಮಾಡಿತ್ತು. ಆದರೆ ಸಭೆಯಲ್ಲಿ ಸಂತೆ ವ್ಯಾಪಾರಕ್ಕೆ ಮುಕ್ತ ಅವಕಾಶ ನೀಡಿರುವುದರಿಂದ ಹಿಂಜಾವೇ  ಹಿಂಜಾವೇ ಗೆ ಮುಖಭಂಗವಾಗಿದೆ

ಅಂಗಡಿಗಳ ಏಲಂ ಬಗ್ಗೆ ದಾಮೋದರ ಮಂಚಿ ಮತ್ತು ರವಿ ಮತ್ತಿತರರು ವಿಷಯ ಪ್ರಸ್ತಾಪಿಸಿದರು.

ಅದಕ್ಕೆ ಉತ್ತರಿಸಿದ ಕೃಪಾಶಂಕರ ಅಂಗಡಿಗಳ ಏಲಂ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ನಿಯಮದಂತೆ ಮಾಡಿದ್ದೇವೆ ಎಂದು ಹೇಳಿದರು. ಆಗ ವೆಂಕಪ್ಪ ಗೌಡ, ಪಿ.ಎಸ್.ಗಂಗಾಧರ್, ಜಯಪ್ರಕಾಶ್ ರೈ, ಗೋಕುಲದಾಸ್ ಮತ್ತಿತರರು ಇಲಾಖೆಯ ನಿಯಮದಲ್ಲಿ ಏನೇನಿದೆ ಓದಿ ಹೇಳಿ ಎಂದು ಹೇಳಿದರು. ಧಾರ್ಮಿಕ ದತ್ತಿ ಇಲಾಖೆಯ ನಿಯಮವನ್ನು ಓದಿ ಅದರಲ್ಲಿ ದೇವಸ್ಥಾನಕ್ಕೆ ಸಂಬಂದಪಟ್ಟ ಕಟ್ಟಡದಲ್ಲಿ ಟೆಂಡರ್‌ನ್ನು ಇತರರಿಗೆ ನೀಡಬಾರದೆಂದು ಇತ್ತು. ಹೊರಗಿನ ಸಂತೆ ಏಲಂ ಬಗ್ಗೆ ಯಾವುದೇ ನಿಬಂಧನೆಗಳು ಇರಲಿಲ್ಲ.ಈ ಹಿನಲ್ಲೆಯಲ್ಲಿ ಹಿಂದೆ‌ ಇದ್ದ ರೀತಿಯಲ್ಲಿ ಏಲಂ ಮಾಡಲು ನಿರ್ಧರಿಸಲಾಯಿತು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಜಾತ್ರೋತ್ಸವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಕೊರೊನಾ ಮಾರ್ಗಸೂಚಿಗಳ ಬಗ್ಗೆ ತಿಳಿಸಿದರು. ಒಳಾಂಗಣದಲ್ಲಿ ಮಾಸ್ಕ್ ಹಾಕುವಂತೆ ಹಾಗೂ ಮಾರ್ಗಸೂಚಿಗಳನ್ನು ಅನುಸರಿಸುವಂತೆ ತಿಳಿಸಿದರು.

ಎಸ್.ಐ.ದಿಲೀಪ್ ಎಂ.ಆರ್. ವಾಹನ ಪಾರ್ಕಿಂಗ್ ಮತ್ತು ಜಾತ್ರೋತ್ಸವ ಸಂದರ್ಭದಲ್ಲಿ ಸಿಸಿಟಿವಿಗಳನ್ನು ಅಳವಡಿಸುವಂತೆ ಸೂಚಿಸಿದರು. ಎ.ಪಿ.ಎಂ.ಸಿ ಪ್ರಾಂಗಣ, ಪ್ರಭು ಗ್ರೌಂಡ್ ಬಳಿ ವಾಹನ ಪಾರ್ಕಿಂಗ್ ಮಾಡುವ ಬಗ್ಗೆ ನಿರ್ಣಯ ಮಾಡಲಾಯಿತು.

ಜಾತ್ರಾ ಸಮಯದಲ್ಲಿ ಹೆಚ್ಚುವರಿ ಕೆ.ಎಸ್.ಆರ್.ಟಿ.ಸಿ ಬಸ್ ಗಳನ್ನು ನಿಯೋಜಿಸುವಂತೆ ಮನವಿ ನೀಡುವ ಬಗ್ಗೆ ನಿರ್ಣಯಿಸಲಾಯಿತು. ಸ್ವಚ್ಛತೆಯ ಬಗ್ಗೆ ಅಲ್ಲಲ್ಲಿ ಡಸ್ಟ್ ಬಿನ್ ವ್ಯವಸ್ಥೆ ಮಾಡುವ ಬಗ್ಗೆ,ಅಂಗಡಿಯವರಿಗೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮನವರಿಗೆ ಮಾಡುವ ಬಗ್ಗೆ ಮತ್ತು ಬಟ್ಟೆ ಚೀಲಗಳ ಅಂಗಡಿ ಹಾಕುವ ಬಗ್ಗೆ ನಗರ ಪಂಚಾಯತ್ ಅಧ್ಯಕ್ಷ ವಿನಯ ಕಂದಡ್ಕ ಹೇಳಿದರು.

ವೇದಿಕೆಯಲ್ಲಿ ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಎನ್.ಜಯಪ್ರಕಾಶ್ ರೈ, ಲಿಂಗಪ್ಪ ಗೌಡ ಕೇರ್ಪಳ, ಎಂ.ಮೀನಾಕ್ಷಿ ಗೌಡ, ಎಸ್.ಐ.ದಿಲೀಪ್, ಡಾ.ನಂದಕುಮಾರ್,ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ,ಸದಸ್ಯೆ ಕಿಶೋರಿ ಶೇಟ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಸುಳ್ಯ ಜಾತ್ರೆಯ ಸಂತೆ ವ್ಯಾಪಾರ ಹಿಂದೂಗಳಿಗೆ ಮಾತ್ರ ಅವಕಾಶ: ದೇವಸ್ಥಾನದಲ್ಲಿ ನಡೆದ ತುರ್ತು ಸಭೆಯಲ್ಲಿ ನಿರ್ಧಾರ

share
Next Story
X