KPTCL ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು, ಜ.3: ಕರ್ನಾಟಕ ಪರೀಕ್ಷಾ ಪ್ರಾಧೀಕಾರವು ಪ್ರತಿ ಹುದ್ದೆಯ ಪ್ರಶ್ನೆ ಪತ್ರಿಕೆಗೆ ಸಂಬಂಧಿಸಿದ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಅಲ್ಲದೇ ಅಭ್ಯರ್ಥಿಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಬಿಡುಗಡೆ ಮಾಡಿದೆ.
ಫಲಿತಾಂಶವನ್ನು ತಿಳಿಯಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ: https://cetonline.karnataka.gov.in/kea/kptcl2022
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಇಂಧನ ಸಚಿವ ಸುನಿಲ್ ಕುಮಾರ್, ಕೆ.ಪಿ.ಟಿ.ಸಿ.ಎಲ್ ನಲ್ಲಿ ವಿವಿಧ ಹುದ್ದೆಗಳಿಗಾಗಿ ನಡೆದ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೂ ಹಾರ್ದಿಕ ಅಭಿನಂದನೆಗಳು. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಕೆ.ಪಿ.ಟಿ.ಸಿ.ಎಲ್ ನಲ್ಲಿ ವಿವಿಧ ಹುದ್ದೆಗಳಿಗಾಗಿ ನಡೆದ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೂ ಹಾರ್ದಿಕ ಅಭಿನಂದನೆಗಳು. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸುತ್ತೇನೆ. ಫಲಿತಾಂಶವನ್ನು ತಿಳಿಯಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ. https://t.co/cVX61TJ4m7
— Sunil Kumar Karkala (@karkalasunil) January 3, 2023