ಜ.5ರಂದು ಹರೇಕಳಕ್ಕೆ ಸಿದ್ದರಾಮಯ್ಯ ಆಗಮನ: ಯು.ಟಿ.ಖಾದರ್

ಮಂಗಳೂರು, ಜ.4: ರಾಜ್ಯದ ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಜ.5ರಂದು ಸಂಜೆ 5 ಗಂಟೆಗೆ ಮಂಗಳೂರು ವಿಧಾನ ಸಭಾ ಕ್ಷೇತ್ರದ ಹರೇಕಳಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್ ತಿಳಿಸಿದ್ದಾರೆ.
ಕದ್ರಿ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿಂದು ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಹರೇಕಳ ಗ್ರಾಮ ಪಂಚಾಯತ್ ನಲ್ಲಿ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಗ್ರಾಮ ಪಂಚಾಯತ್ ಸಭಾಂಗಣ, ಹೆಲ್ತ್ ಸೆಂಟರ್ ನ ಕಾಮಗಾರಿ, ಅಡ್ಯಾರ್ ಕಿಂಡಿ ಅಣೆಕಟ್ಟು ಕಾಮಗಾರಿಗಳನ್ನು ವೀಕ್ಷಣೆ ಮಾಡಲಿದ್ದಾರೆ. ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ ಎಂದು ಹೇಳಿದರು.

Next Story