Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾವೇರಿಯಲ್ಲಿ ಕನ್ನಡಿಗರ ಸಮ್ಮೇಳನವಲ್ಲ,...

ಹಾವೇರಿಯಲ್ಲಿ ಕನ್ನಡಿಗರ ಸಮ್ಮೇಳನವಲ್ಲ, ರಾಜಕೀಯ ಸಮ್ಮೇಳನ; ಅದನ್ನು ಬಹಿಷ್ಕರಿಸುತ್ತೇನೆ: ಎಚ್.ವಿಶ್ವನಾಥ್

4 Jan 2023 1:57 PM IST
share
ಹಾವೇರಿಯಲ್ಲಿ ಕನ್ನಡಿಗರ ಸಮ್ಮೇಳನವಲ್ಲ, ರಾಜಕೀಯ ಸಮ್ಮೇಳನ; ಅದನ್ನು ಬಹಿಷ್ಕರಿಸುತ್ತೇನೆ: ಎಚ್.ವಿಶ್ವನಾಥ್

ಮಡಿಕೇರಿ ಜ.4: ಹಾವೇರಿಯಲ್ಲಿ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಧಿಕ್ಕರಿಸಿದ್ದಾರೆ. "ಇದು ಕನ್ನಡಿಗರ ಸಮ್ಮೇಳನವಲ್ಲ, ಆಲ್ ಪಾರ್ಟಿ ಲೀಡರ್ಸ್ ಅಸೋಸಿಯೇಷನ್ ನ ರಾಜಕೀಯ ಸಮ್ಮೇಳನ" ಎಂದು ಅವರು ಕಿಡಿ ಕಾರಿದ್ದಾರೆ.

ಮಡಿಕೇರಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸಮ್ಮೇಳನಕ್ಕೆ ಸರಕಾರ 20 ಕೋಟಿ ರೂ.ಗಳ ಬೃಹತ್ ಮೊತ್ತದ ಅನುದಾನ ನೀಡಿದೆ. ಆದರೆ ಸಮ್ಮೇಳನದ ಕುರಿತು ಪೂರ್ವಭಾವಿ ಸಭೆ ನಡೆಸಿಲ್ಲ, ಮಾರ್ಗಸೂಚಿಯನ್ನು ನೀಡಿಲ್ಲ. ಊಟ, ತಿಂಡಿ, ಬಾಜ, ಬಜಂತ್ರಿ, ಏಲಕ್ಕಿ ಮಾಲೆ ಇಷ್ಟೇ ಸಮ್ಮೇಳನವೇ ಎಂದು ಪ್ರಶ್ನಿಸಿದರು.

ಸಮ್ಮೇಳನದಲ್ಲಿ ಸುಮಾರು 85 ಸಾಧಕರನ್ನು ಸನ್ಮಾನಿಸಲಾಗುತ್ತಿದೆ, ಆದರೆ ಈ ಪಟ್ಟಿಯಲ್ಲಿ ಒಬ್ಬರೇ ಒಬ್ಬರು ಮುಸ್ಲಿಮರಿಲ್ಲ. ಜಾನಪದ ವಿದ್ವಾಂಸ ಡಾ.ಕರೀಂ ಖಾನ್, ಅಖಿಲ ಭಾರತ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಉನ್ನತ ಪ್ರಶಸ್ತಿಗಳನ್ನು ಪಡೆದವರನ್ನು ಕೂಡ ಸನ್ಮಾನಿತರ ಪಟ್ಟಿಯಲ್ಲಿ ಸೇರಿಸಿಲ್ಲ. ಹಿಂದಿನ ಸಮ್ಮೇಳನಗಳಲ್ಲಿ ದಲಿತ ಸಮಾವೇಶ ನಡೆಯುತ್ತಿತ್ತು, ಆದರೆ ಈ ಬಾರಿ ದಮನಿತರ ಸಮಾವೇಶ ಎಂದು ಬದಲಾಯಿಸಲಾಗಿದೆ. ಅಧ್ಯಕ್ಷರಿಗೆ ದಲಿತ, ದಮನಿತರ ವ್ಯತ್ಯಾಸ ತಿಳಿದಿಲ್ಲವೇ ಎಂದು ಅಸಮಾಧಾನ ವ್ಯಕ್ತಪಡಿಸಿದ ವಿಶ್ವನಾಥ್, ಎಲ್ಲರನ್ನು ಒಗ್ಗೂಡಿಸಿ ಕನ್ನಡ ಸಮ್ಮೇಳನ ಮಾಡಬೇಕೆ ಹೊರತು ಜಾತಿ, ಧರ್ಮದ ಸಮ್ಮೇಳನವನ್ನಾಗಿ ಮಾಡುವುದು ಸರಿಯಲ್ಲ ಎಂದರು.

 ಶೇ.70ರಷ್ಟು ಮಂದಿ ಕನ್ನಡ ಮಾತನಾಡುವ ಮುಸ್ಲಿಮರಿದ್ದಾರೆ, 14 ಲಕ್ಷಕ್ಕೂ ಅಧಿಕ ಮಂದಿ ಬ್ಯಾರಿಗಳಿದ್ದಾರೆ, ಕೊಡವ, ತುಳು ಭಾಷಿಕರೂ ಇದ್ದಾರೆ. ಎಲ್ಲರನ್ನು ದೂರ ಇಟ್ಟು ಸಮ್ಮೇಳನ ಮಾಡುತ್ತಿದ್ದಾರೆ. ಪುಸ್ತಕ ಪ್ರಾಧಿಕಾರ ಪುಸ್ತಕಗಳನ್ನು ಖರೀದಿ ಮಾಡಿದೆ, ಆದರೆ ಲೇಖಕರಿಗೆ ಸರಕಾರ ಇಲ್ಲಿಯವರೆಗೆ ಹಣವನ್ನು ನೀಡಿಲ್ಲ ಎಂದು ಟೀಕಿಸಿದರು.

ಕನ್ನಡ ಶಾಲೆಗಳು ಮುಚ್ಚಲ್ಪಡುತ್ತಿವೆ, ರಾಜಕೀಯ ಕ್ಷೇತ್ರ ಮೈಲಿಗೆಯಾಗುತ್ತಿದೆ, ಈ ವಿಚಾರಗಳು ಸೇರಿದಂತೆ ಸಾಹಿತ್ಯ, ಶಿಕ್ಷಣ, ಅಕ್ಷರ, ಕನ್ನಡಿಗರ ಪರ ಗಂಭೀರ ಚರ್ಚೆಗೆ ಸಮ್ಮೇಳನ ಸಾಕ್ಷಿಯಾಗುವ ಬದಲು ದಿಕ್ಕು ದಿಸೆಯಿಲ್ಲದಂತ್ತಾಗಿದೆ. ಈ ಕಾರಣದಿಂದ ಹಲವರು ಸಮ್ಮೇಳನವನ್ನು ಬಹಿಷ್ಕರಿಸಿದ್ದಾರೆ, ನನಗೂ ತೀವ್ರ ಬೇಸರವಾಗಿರುವುದರಿಂದ ಸಮ್ಮೇಳನವನ್ನು ಧಿಕ್ಕರಿಸಿ ಹಾಜರಾಗದೆ ಇರಲು ನಿರ್ಧರಿಸಿರುವುದಾಗಿ ಹೇಳಿದರು.

ಜನತಂತ್ರ ವ್ಯವಸ್ಥೆಯಲ್ಲಿ ಮತದಾರ ಆತ್ಮವಿದ್ದಂತೆ, ಆದರೆ ಆತ್ಮವನ್ನೇ ಕಳವು ಮಾಡುವಂತಹ ಇಂದಿನ ಬೆಳವಣಿಗೆ ಅತ್ಯಂತ ವಿಷಾದಕರ ಎಂದು ಬೇಸರ ವ್ಯಕ್ತಪಡಿಸಿದರು.

ಮೀಸಲಾತಿ ಸಂವಿಧಾನ ವಿರೋಧಿ

ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದಲ್ಲಿ ದೇಶದಲ್ಲೇ ಕರ್ನಾಟಕ ಮಾದರಿ ರಾಜ್ಯವಾಗಿದೆ. ಆದರೆ ಇತ್ತೀಚೆಗೆ ಮೀಸಲಾತಿಯ ಹಂಚಿಕೆಯ ವಿಚಾರದಲ್ಲಿ ಸರಕಾರ ಸಂವಿಧಾನ ವಿರೋಧಿ ನಡೆಗಳನ್ನು ಅನುಸರಿಸುತ್ತಿದೆ. ಪಂಚಮಸಾಲಿ ಮಠಾಧೀಶರು ಇಟ್ಟ ಬೇಡಿಕೆಗೆ ವ್ಯತಿರಿಕ್ತವಾಗಿ ಭರವಸೆ ನೀಡಿರುವ ಸರ್ಕಾರ ಗೊಂದಲ ಸೃಷ್ಟಿ ಮಾಡಿದೆ, ಸಂವಿಧಾನದಲ್ಲಿ ಅವಕಾಶವಿಲ್ಲದ ಭರವಸೆಗಳನ್ನು ನೀಡಿ ಜನರಿಗೆ ಸುಳ್ಳು ಹೇಳಿ ಹಾದಿ ತಪ್ಪಿಸುತ್ತಿದೆ ಎಂದು ವಿಶ್ವನಾಥ್ ಗಂಭೀರ ಆರೋಪ ಮಾಡಿದರು.

ಮೀಸಲಾತಿ ಎನ್ನುವುದು ಬಡತನ ನಿರ್ಮೂಲನೆಯ ಕಾರ್ಯಕ್ರಮವಲ್ಲ, ಸರ್ಕಾರ ಮೀಸಲಾತಿ ನೀಡುವುದಾದರೆ ನೀಡುವುದಾಗಿ ದೃಢವಾಗಿ ಹೇಳಲಿ. ಮೀಸಲಾತಿ ಹೆಸರಿನಲ್ಲಿ ಜಾತಿ, ಜಾತಿಗಳ ನಡುವೆ ಕಲಹಕ್ಕೆ ದಾರಿ ಮಾಡಿಕೊಡಬಾರದು. ಸಾಮರಸ್ಯ ಮೂಡಿಸುವುದು ಸರ್ಕಾರದ ಜವಾಬ್ದಾರಿಯೇ ಹೊರತು ದಾರಿ ತಪ್ಪಿಸುವುದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಡಳಿತ ಕುಂಠಿತ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತ ಕುಂಠಿತವಾಗಿದೆ, ಬಜರಂಗದಳ, ಶ್ರೀರಾಮಸೇನೆಯಂತಹ ಎಕ್ಸ್‌ಟ್ರಾ ಫೋರ್ಸ್ ರೂಲ್ಸ್ ರಾಜ್ಯದಲ್ಲಿದೆ ಎಂದು ವಿಶ್ವನಾಥ್ ಟೀಕಿಸಿದರು.

share
Next Story
X