ಪುತ್ತೂರು: ಪ್ರಜ್ಞಾ ಆಶ್ರಮದಲ್ಲಿ ವಿಕಲ ಚೇತನರ ದಿನಾರಣೆ

ಪುತ್ತೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು, ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ತಾಲೂಕು ಪಂಚಾಯತ್ ಪುತ್ತೂರು, ಕಸಾಪ ಪುತ್ತೂರು ಘಟಕ, ರೋಟರಿ ಯುವ ಹಾಗೂ ಪ್ರಜ್ಞಾ ಆಶ್ರಮದ ಸಹಯೋಗದಲ್ಲಿ ವಿಕಲ ಚೇತನರ ದಿನಾಚರಣೆಯು ಸೋಮವಾರ ಪುತ್ತೂರಿನ ಪ್ರಜ್ಞಾ ಆಶ್ರಮದಲ್ಲಿ ನಡೆಯಿತು.
ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಕಾರ್ಯಕ್ರಮ ಉದ್ಘಾಟಿಸಿದ್ದು, ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸಿದ್ದರು.
ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಗಿರೀಶ್ ನಂದನ್, ತಹಸೀಲ್ದಾರ್ ನಿಸರ್ಗಪ್ರಿಯ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಕಸಾಪ ಪುತ್ತೂರು ಘಟಕದ ಅಧ್ಯಕ್ಷ ಉಮೇಶ್ ನಾಯಕ್, ತಾಲೂಕು ಪುನರ್ವಸತಿ ಕಾರ್ಯಕರ್ತ ನವೀನ್, ರೋಟರಿ ಯುವ ಸಂಸ್ಥೆಯ ರಾಜೇಶ್ವರಿ ಆಚಾರ್ಯ, ಹರ್ಷಕುಮಾರ್ ರೈ, ಜಗಜೀವನ್‍ದಾಸ್ ರೈ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರಜ್ಞಾ ಆಶ್ರಮದ ಅಣ್ಣಪ್ಪ ಮತ್ತು ಜ್ಯೋತಿ ದಂಪತಿ, ರೋಟರಿ ಯುವ ಸಂಸ್ಥೆ ಮತ್ತು ವಿಶೇಷ ಚೇತನ ಸುರೇಶ್ ನಾಯಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿಶೇಷ ಚೇತನರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ ಸ್ವಾಗತಿಸಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಾರತಿ ಜೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ವಿಕಲ ಚೇತನರ ದಿನಾಚರಣೆಯಲ್ಲಿ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.