Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಕರ್ನಾಟಕ ರಾಜ್ಯೋತ್ಸವ...

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಿನ್ನೆಲೆ, ಹಿರಿಯ ಕಲಾವಿದ ಸರಪಾಡಿ ಅಶೋಕ ಶೆಟ್ಟಿಗೆ ಸನ್ಮಾನ

4 Jan 2023 5:52 PM IST
share
ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಿನ್ನೆಲೆ, ಹಿರಿಯ ಕಲಾವಿದ ಸರಪಾಡಿ ಅಶೋಕ ಶೆಟ್ಟಿಗೆ ಸನ್ಮಾನ

ಬಂಟ್ವಾಳ: ಓರ್ವ ಸಾಧಕನಿಗೆ ಹುಟ್ಟೂರ ಅಭಿನಂದನೆಯು ಪ್ರೀತಿ ಹಂಚುವ ಕಾರ್ಯವಾಗಿದ್ದು, ರಾಜ್ಯೋತ್ಸವ ಪುರಸ್ಕೃತ ಅಶೋಕ ಶೆಟ್ಟಿಯವರಿಗೆ ಅಂತಹ ಪ್ರೀತಿ ಲಭಿಸಿದೆ. ಊರಿನ ದೇವಸ್ಥಾನದ ನಿರ್ಮಾಣ ಕಾರ್ಯದಲ್ಲಿ ಸರ್ವರೂ ಜತೆಯಾಗಿ ಕೆಲಸ ಮಾಡಬೇಕಿದೆ ಎಂದು ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ತಿಳಿಸಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರಿಗೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ವತಿಯಿಂದ ಸರಪಾಡಿಯ ನಾಗರಿಕರಿಂದ ಮಂಗಳವಾರ ಸರಪಾಡಿ ದೇವಸ್ಥಾನದ ವಠಾರದಲ್ಲಿ ನಡೆದ ಹುಟ್ಟೂರ ಅಭಿನಂದನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು. 

ಸಮಾರಂಭ ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಮಾತನಾಡಿ, ಊರಿನ ನಾಗರಿಕರ ಆಶೀರ್ವಾದದ ರೂಪದಲ್ಲಿ ಅಶೋಕ ಶೆಟ್ಟಿಯವರಿಗೆ ಸಮ್ಮಾನ ಲಭಿಸಿದ್ದು, ನಮ್ಮ ಕ್ಷೇತ್ರಕ್ಕೆ ಪ್ರಶಸ್ತಿ ಬಂದಿರುವುದು ಹೆಮ್ಮೆ ಪಡುವ ವಿಚಾರ. ಸರಪಾಡಿ ದೇವಸ್ಥಾನ ಹಾಗೂ ಊರಿನ ಅಭಿವೃದ್ಧಿ ವಿಶೇಷ ಗಮನ ಹರಿಸಲಾಗಿದ್ದು, ಕೋಟ್ಯಾಂತರ ರೂಪಾಯಿಗಳ ಅನುದಾನ ಒದಗಿಸಲಾಗಿದೆ ಎಂದರು. 

ಅಭಿನಂದನೆಗೆ ಕೃತಜ್ಞತೆ ಅರ್ಪಿಸಿದ ಅಶೋಕ ಶೆಟ್ಟಿಯವರು, ಹುಟ್ಟೂರ ಅಭಿನಂದನೆಯು ರಾಜ್ಯೋತ್ಸವ ಪ್ರಶಸ್ತಿಗಿಂತಲೂ ದೊಡ್ಡ ಗೌರವವಾಗಿದೆ ಎಂದರು. 

ಇದೇ ವೇಳೆ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಸೇಸಪ್ಪ ಕೋಟ್ಯಾನ್ ಹಾಗೂ ವೆಂಕಪ್ಪ ನಲಿಕೆ ಅವರನ್ನು ಅಭಿನಂದಿಸಲಾಯಿತು. 

ಸರಪಾಡಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎಂ.ಎಸ್.ಶೆಟ್ಟಿ ಸರಪಾಡಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಪ್ರಸ್ತಾವನೆಗೈದರು. ಯಕ್ಷಗಾನ ಸಂಘಟಕ ಕದ್ರಿ ನವನೀತ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು.

ವೇದಿಕೆಯಲ್ಲಿ ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ್ ಜೈನ್, ಯಕ್ಷಧೃವ ಪಟ್ಲ ಫೌಂಡೇಶನ್ ಸಂಸ್ಥಾಪಕ, ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸುದೇಶ್ ಕುಮಾರ್ ರೈ, ಮಣಿನಾಲ್ಕೂರು ಗ್ರಾ.ಪಂ.ಅಧ್ಯಕ್ಷೆ ನಾಗವೇಣಿ, ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ, ಕಟ್ಟೆಮನೆ ಉದಯಕುಮಾರ್ ಅಜಿಲ ಮೊದಲಾದವರು ಉಪಸ್ಥಿತರಿದ್ದರು. 

ಶಿಕ್ಷಕ ಉದಯಕುಮಾರ್ ಬಿ. ಹಾಗೂ  ದಂತ ವೈದ್ಯ ಡಾ.ಬಾಲಚಂದ್ರ ಶೆಟ್ಟಿ ಮೀಯಾರು ಸಮ್ಮಾನ ಪತ್ರ ವಾಚಿಸಿದರು. 

ಜೀರ್ಣೋದ್ಧಾರ ಸಮಿತಿಯ ಪ್ರಮುಖರಾದ ರಾಧಾಕೃಷ ರೈ ಕೊಟ್ಟುಂಜ ಸ್ವಾಗತಿಸಿ, ವಿಠಲ್ ಎಂ.ಆರುಮುಡಿ ವಂದಿಸಿದರು. ನಿತೇಶ್ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರ್ವಹಿಸಿದರು.

share
Next Story
X