ಹಿರಿಯಡ್ಕ: ಕ್ಷಯ ಮುಕ್ತ ಭಾರತ ಕಾರ್ಯಕ್ರಮ

ಉಡುಪಿ: ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಉಡುಪಿ, ಕ್ಷಯ ಘಟಕ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ ಹಾಗೂ ಬೊಮ್ಮರಬೆಟ್ಟು ಗ್ರಾಪಂಗಳ ಸಂಯುಕ್ತ ಆಶ್ರಯದಲ್ಲಿ ಕ್ಷಯ ಮುಕ್ತ ಭಾರತ ಕಾರ್ಯಕ್ರಮ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಬೊಮ್ಮರಬೆಟ್ಟು ಗ್ರಾಪಂ ಅಧ್ಯಕ್ಷ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ, ಸಮೀಕ್ಷಾ ಸ್ಟಿಕ್ಕರ್‌ಗಳನ್ನು ಬಿಡುಗಡೆ ಮಾಡಿದರು. ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸತ್ಯಶಂಕರ್ ಕ್ಷಯ ರೋಗದ ಕುರಿತು ಜನರಿಗೆ ಮಾಹಿತಿ ನೀಡಿದರು.
ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಪ್ರಶಾಂತ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಪಂಚಾಯತ್ ಸದಸ್ಯರು, ಗ್ರಾಪಂ ಪಿಡಿಓ ದಯಾನಂದ್ ಬೆನ್ನೂರು, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳಾದ ಶ್ಯಾಮಲಾ ಹಾಗೂ ಅರ್ಚನಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವಿಜಯಬಾಯಿ ಸ್ವಾಗತಿಸಿ, ವಂದಿಸಿದರು.
ಎನ್‌ಸಿಡಿ ಕಾರ್ಯಕ್ರಮದಡಿ ರಕ್ತದೊತ್ತಡ ಹಾಗೂ ಸಕ್ಕರೆಕಾಯಿಲೆ ತಪಾಸಣೆ ನಡೆಸಲಾಯಿತು.
ಈ ಕಾರ್ಯಕ್ರಮದಡಿ ಗ್ರಾಮದ ಎಲ್ಲಾ ಮನೆಗಳಲ್ಲಿ ಸಮೀಕ್ಷೆ ನಡೆಸಿ, ಕ್ಷಯ ರೋಗದ ಲಕ್ಷಣಗಳಿದ್ದಲ್ಲಿ ಅವರ ಕಫ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಿ, ಅಗತ್ಯಕ್ರಮ ಕೈಗೊಳ್ಳುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.