ಉಡುಪಿ: ಜ. 8ರಂದು ಉಪವಲಯ ಅರಣ್ಯಾಧಿಕಾರಿಗಳ ಸಂಘದ ಡೈರಿ ಬಿಡುಗಡೆ
ಉಡುಪಿ: ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಉಡುಪಿ ಜಿಲ್ಲೆ ಇವರ ವಾರ್ಷಿಕ ಸಮಾರಂಭ, ನೂತನ ವರ್ಷದ ಡೈರಿ ಬಿಡುಗಡೆ, ಸಾರ್ವಜನಿಕ ಸೇವೆ ಸಲ್ಲಿಸಿದವರಿಗೆ, ರಕ್ತದಾನಿಗಳಿಗೆ ಗೌರವ ಸಮರ್ಪಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಜನವರಿ 8ರಂದು ಬೆಳಗ್ಗೆ 10:00 ಗಂಟೆಗೆ ನಗರದ ಕಿದಿಯೂರು ಹೋಟೆಲ್‌ನ ರೂಫ್‌ಟಾಪ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ನಾಗೇಶ ಬಿಲ್ಲವ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ವೃತ್ತ ಮುಖ್ಯಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್ ನೆಟಾಲ್ಕರ್, ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ, ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಎಂ ನಾಯಕ್, ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಬಾಬಾ ರೈ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.