Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ...

ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್: ಮಂಗಳೂರು ವಿವಿಗೆ ಆರಂಭಿಕ ಪಂದ್ಯದಲ್ಲಿ ವಾಕ್‌ಓವರ್

ಚಾಂಪಿಯನ್ ಕಲ್ಲಿಕೋಟೆ, ರನ್ನರ್ ಕುರುಕ್ಷೇತ್ರಕ್ಕೆ ಭರ್ಜರಿ ಜಯ

4 Jan 2023 10:00 PM IST
share
ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್: ಮಂಗಳೂರು ವಿವಿಗೆ ಆರಂಭಿಕ ಪಂದ್ಯದಲ್ಲಿ ವಾಕ್‌ಓವರ್
ಚಾಂಪಿಯನ್ ಕಲ್ಲಿಕೋಟೆ, ರನ್ನರ್ ಕುರುಕ್ಷೇತ್ರಕ್ಕೆ ಭರ್ಜರಿ ಜಯ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಜಂಟಿ ಆಶ್ರಯದಲ್ಲಿ ಇಂದು ವಿದ್ಯುಕ್ತವಾಗಿ ಪ್ರಾರಂಭಗೊಂಡ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್ ಚಾಂಪಿಯನ್ ಶಿಪ್‌ನ ತಮ್ಮ ಆರಂಭಿಕ ಪಂದ್ಯಗಳಲ್ಲಿ ಹಾಲಿ ಚಾಂಪಿಯನ್ ಕೇರಳ ಕಲ್ಲಿಕೋಟೆಯ,  ಕಲ್ಲಿಕೋಟೆ ವಿವಿ ಹಾಗೂ ರನ್ನರ್‌ಅಪ್ ಹರಿಯಾಣದ ಕುರುಕ್ಷೇತ್ರ ವಿವಿ ತಂಡಗಳು ಭರ್ಜರಿ ಜಯ ದಾಖಲಿಸುವ ಮೂಲಕ ಶುಭಾರಂಭ ಮಾಡಿದವು.

ದಿನದ ಕೊನೆಯ ಪಂದ್ಯದಲ್ಲಿ ಆತಿಥೇಯ ಮಂಗಳೂರು ವಿವಿ ಸಿ ಗುಂಪಿನ ತನ್ನ ಎದುರಾಳಿ ಭುವನೇಶ್ವರದ ಕೆಐಐಟಿ ಡೀಮ್ಡ್ ವಿವಿ ತಂಡದಿಂದ ವಾಕ್‌ಓವರ್ ಪಡೆಯುವ ಮೂಲಕ ಆಟವಾಡದೇ ಪೂರ್ಣ ಅಂಕಗಳನ್ನು ಸಂಪಾದಿಸಿ ಮುನ್ನಡೆ ಸಾಧಿಸಿದೆ.

ಕಲ್ಲಿಕೋಟೆ ವಿವಿ ದಿನದ ಆರನೇ ಪಂದ್ಯದಲ್ಲಿ ಪಶ್ಚಿಮ ವಲಯದ ಡಾ.ಬಿಎಎಂ ವಿವಿ ತಂಡವನ್ನು 3-0 ಸೆಟ್‌ಗಳ ನೇರ ಅಂತರದಲ್ಲಿ ಹಿಮ್ಮೆಟ್ಟಿಸಿ  ಶುಭಾರಂಭ ಮಾಡಿತು. ಕಲ್ಲಿಕೋಟೆ ವಿವಿ ತನ್ನ ಪಂದ್ಯವನ್ನು 25-20, 25-15 ಹಾಗೂ 26-24ರ ಅಂತರದಿಂದ ಔರಂಗಬಾದ್ ತಂಡವನ್ನು ಸೋಲಿಸಿತು.

ದಿನದ ಮೊದಲ ಪಂದ್ಯದಲ್ಲಿ ಹಾಲಿ ರನ್ನರ್‌ಅಪ್ ಹರಿಯಾಣದ ಕುರುಕ್ಷೇತ್ರ ವಿವಿ ತಂಡ ಎ ಗುಂಪಿನ ಮೊದಲ ಪಂದ್ಯದಲ್ಲಿ ಕೊಲ್ಕೋತಾದ ಅದಮಾಸ್ ವಿವಿಯನ್ನು ಮೂರು ನೇರ ಸೆಟ್‌ಗಳಲ್ಲಿ ಹಿಮ್ಮೆಟ್ಟಿಸಿತು. ಮೊದಲ ಸೆಟ್‌ನ್ನು ಏಕಪಕ್ಷೀಯವಾಗಿ ಗೆದ್ದ ಕುರುಕ್ಷೇತ್ರ ವಿವಿ ಅಂತಿಮವಾಗಿ 25-11, 25-22, 25-23ರ ಅಂತರದ ಜಯ ದಾಖಲಿಸಿತು.

ಮೊದಲ ಸೆಟ್ ಹಿನ್ನಡೆಯ ಬಳಿಕ ಚೇತರಿಸಿಕೊಂಡ ಕೊಲ್ಕೋತಾ ತಂಡ ಮುಂದಿನೆರಡು ಸೆಟ್‌ ಗಳಲ್ಲಿ ತೀವ್ರ ಹೋರಾಟ ನೀಡಿತಾದರೂ ಬಲಿಷ್ಠ ಕುರುಕ್ಷೇತ್ರದ ವಿರುದ್ಧ ಸೋಲೊಪ್ಪಿಕೊಳ್ಳಲೇ ಬೇಕಾಯಿತು.

ದಿನದ ಎರಡನೇ ಪಂದ್ಯದಲ್ಲಿ ದಕ್ಷಿಣ ವಲಯದ ಮದ್ರಾಸ್ ವಿವಿ ಚೆನ್ನೈ ತಂಡ, ಎದುರಾಳಿ ಪಶ್ಚಿಮ ವಲಯವನ್ನು ಪ್ರತಿನಿಧಿಸುತ್ತಿರುವ ಜೈಪುರದ ರಾಜಸ್ಥಾನ ವಿವಿ ತಂಡವನ್ನು 3-1ಸೆಟ್‌ಗಳಿಂದ ಸೋಲಿಸಿತು. ಮದ್ರಾಸ್ ವಿವಿ ತನ್ನ ಆರಂಭಿಕ ಪಂದ್ಯದಲ್ಲಿ ಎದುರಾಳಿಯನ್ನು 21-25, 26-24 25-23, 25-19ರ ಅಂತರದಿಂದ ಪರಾಭವಗೊಳಿಸಿತು.
ಬಿ ಗುಂಪಿನ ಪಂದ್ಯದಲ್ಲಿ ಚೆನ್ನೈನ ಎಸ್‌ಆರ್‌ಎಂ ಇನ್‌ಸ್ಟಿಟ್ಯೂಟ್ ಆಫ್ ಸಾಯನ್ಸ್ ಎಂಡ್ ಟೆಕ್ನಾಲಜಿ ತಂಡ, ಪಶ್ಚಿಮ ವಲಯದ ಶ್ರೀಕುಶಾಲದಾಸ್ ವಿವಿ ಹನುಮಾನಘಡ್‌ವನ್ನು 3-0 (25-17, 25-19, 25-17) ಅಂತರದಿಂದ ಹಿಮ್ಮೆಟ್ಟಿಸಿ ಮೊದಲ ಗೆಲುವು ದಾಖಲಿಸಿತು.

ಅದೇ ಗುಂಪಿನಲ್ಲಿ ವಾರಣಸಿಯ ಮಹಾತ್ಮಗಾಂಧಿ ಕಾಶಿ ವಿದ್ಯಾಪೀಠ, ಅಮೃತಸರದ ಗುರುನಾನಕ್ ದೇವ್ ವಿವಿ ತಂಡವನ್ನು ಸಹ ನೇರ ಸೆಟ್‌ಗಳಲ್ಲಿ ಹಿಮ್ಮೆಟ್ಟಿಸಿತು. ಅದು ಅಂತಿಮವಾಗಿ ಪಂದ್ಯವನ್ನು 33-31, 25-22, 25-22ರ ಅಂತರದ ಅತ್ಯಂತ ಪ್ರಯಾಸಕರ ಗೆಲುವು ದಾಖಲಿಸಿತು. ಈ ಪಂದ್ಯದ ಮೊದಲ ಸೆಟ್ ಆಟ ಅತ್ಯಂತ ರೋಮಾಂಚಕಾರಿಯಾಗಿ ಸಾಗಿತು.

ಡಿ ಗುಂಪಿನಲ್ಲಿ ಭುವನೇಶ್ವರದ ಉತ್ಕಲ ವಿವಿ ತಂಡ, ಹಿಮಾಚಲ ಪ್ರದೇಶ ವಿವಿಯನ್ನು 3-2ರ ಅಂತರಿಂದ ರೋಚಕವಾಗಿ ಹಿಮ್ಮೆಟ್ಟಿಸಿ ಪೂರ್ಣ ಅಂಕ ಸಂಪಾದಿಸಿತು. ಜಿದ್ದಾಜಿದ್ದಿನ ಹೋರಾಟದಲ್ಲಿ ಉತ್ಕಲ ವಿವಿ ಅಂತಿಮವಾಗಿ ಪಂದ್ಯವನ್ನು 20-25, 25-19, 18-25, 25-20, 15-9ರಿಂದ ಗೆಲುವು ದಾಖಲಿಸಿತು.
ಮಂಗಳೂರು ವಿವಿ ಸ್ಥಾನ ಪಡೆದಿರುವ ಸಿ ಗುಂಪಿನ ಮತ್ತೊಂದು ಪಂದ್ಯದಲ್ಲಿ ಪುಣೆಯ ಭಾರತಿ ವಿವಿ, ಪಂಜಾಬ್ ವಿವಿಯನ್ನು 25-19, 25-22, 25-18ರ ಅಂತರದಿಂದ ಸೋಲಿಸಿತು. ನಾಳೆ ಪ್ರತಿಯೊಂದು ತಂಡಗಳು ಗುಂಪಿನ ಎರಡನೇ ಲೀಗ್ ಪಂದ್ಯಗಳನ್ನು ಆಡಲಿವೆ.

share
Next Story
X