Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಪುರುಷರು' ಎಂದು ಇರುವಲ್ಲಿ 'ಸಿಬ್ಬಂದಿ'...

'ಪುರುಷರು' ಎಂದು ಇರುವಲ್ಲಿ 'ಸಿಬ್ಬಂದಿ' ಎಂಬುದಾಗಿ ಬದಲಾಯಿಸಿ: ರಾಜ್ಯ, ಕೇಂದ್ರ ಸರಕಾರಕ್ಕೆ ಹೈಕೋರ್ಟ್ ಸೂಚನೆ

4 Jan 2023 10:17 PM IST
share
ಪುರುಷರು ಎಂದು ಇರುವಲ್ಲಿ ಸಿಬ್ಬಂದಿ ಎಂಬುದಾಗಿ ಬದಲಾಯಿಸಿ: ರಾಜ್ಯ, ಕೇಂದ್ರ ಸರಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು, ಜ.4: ಮಹಿಳೆಯರನ್ನು ತಾರತಮ್ಯದಿಂದ ಕಾಣುತ್ತಿರುವ ವ್ಯವಸ್ಥೆಯ ಕುರಿತಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಪ್ರಸ್ತುತದ ನಿಯಮಗಳಲ್ಲಿ ಪುರುಷರು ಎಂದು ಇರುವ ಕಡೆ ಸಿಬ್ಬಂದಿ ಎಂದು ಬದಲಾಯಿಸಬೇಕು ಎಂದು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ. 

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದವರ ಮಗಳಿಗೆ ಮಾಜಿ ಯೋಧರ ಅವಲಂಬಿತರ ಗುರುತಿನ ಚೀಟಿ ನೀಡಲು ನಿರಾಕರಿಸಿದ್ದ ಸೈನಿಕ ಕಲ್ಯಾಣ ಇಲಾಖೆಯ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಈ ಸೂಚನೆ ನೀಡಿದೆ.

ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಇಂದು ಅತ್ಯುನ್ನತ ಸ್ಥಾನಗಳನ್ನು ಗಳಿಸುತ್ತಿದ್ದಾರೆ. ಅಲ್ಲದೆ, ಶತಮಾನಗಳಷ್ಟು ಹಳತಾದ ಪುರುಷ ಪ್ರಧಾನ ವ್ಯವಸ್ಥೆಯಲ್ಲಿದ್ದ ಲಿಂಗ ತಾರತಮ್ಯ ಹೋಗಲಾಡಿಸಬೇಕು ಮತ್ತು ನೀತಿ ನಿರೂಪಕರು ಈ ಬಗ್ಗೆ ಚಿಂತನೆ ನಡೆಸಿ ನಿಯಮಗಳಿಗೆ ಸೂಕ್ತ ತಿದ್ದುಪಡಿ ಮಾಡಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ.

ಗುರುತಿನ ಚೀಟಿಯಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ತಾರತಮ್ಯ ಮಾಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ನ್ಯಾಯಪೀಠ, ಆ ಕುರಿತು ಅಗತ್ಯ ತಿದ್ದುಪಡಿ ಮಾಡುವಂತೆ ಸೂಚಿಸಿದೆ. ಜತೆಗೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ 2021ರ ಆ.26ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಅರ್ಜಿದಾರರನ್ನು ನಿವೃತ್ತ ಯೋಧರ ಕೋಟಾದಲ್ಲಿ ಪರಿಗಣಿಸಬೇಕು ಎಂದೂ ಸಹ ಆದೇಶಿಸಿದೆ.

ಮಾಜಿ ಯೋಧರ ಪುತ್ರ ಅಥವಾ ಪುತ್ರಿ ಯಾರಾದರೂ 25 ವರ್ಷದ ನಂತರ ಅವರಿಗೆ ಒಂದೇ ಮಾರ್ಗಸೂಚಿ ಇರುತ್ತದೆ. 25 ವರ್ಷದ ಕೆಳಗಿನ ಪುತ್ರಿ ಮದುವೆ ಆಗಿದ್ದಾರೆ ಎನ್ನುವ ಒಂದೆ ಒಂದು ಕಾರಣಕ್ಕೆ, ಅವರು ಐಡಿ ಕಾರ್ಡ್ ಪಡೆಯುವ ಹಕ್ಕಿನಿಂದ ವಂಚಿತರನ್ನಾಗಿ ಮಾಡುವುದು ಸರಿಯಲ್ಲ. ಇದು ಸಂವಿಧಾನದ ಕಲಂ 14 ಮತ್ತು 15ರ ಉಲ್ಲಂಘನೆಯಾಗುತ್ತದೆ. ಪುತ್ರ ಮದುವೆ ಆಗಲಿ ಅಥವಾ ಆಗದಿದ್ದರೂ ಪ್ರಯೋಜನ ಪಡೆಯುತ್ತಾರೆ, ಆದರೆ ಪುತ್ರಿ ಅವಿವಾಹಿತರಾಗಿ ಉಳಿದರೆ ಮಾತ್ರ ಪ್ರಯೋಜನ ಪಡೆಯುತ್ತಾರೆ ಎಂಬ ನಿಯಮ ಸರಿಯಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಈ ರೀತಿಯ ಪ್ರಕ್ರಿಯೆ ತಾರತಮ್ಯಕ್ಕೆ ಎಡೆ ಮಾಡಿಕೊಡುತ್ತದೆ. ಲಿಂಗದ ಆಧಾರದ ಮೇಲೆ ಪ್ರಯೋಜನ ನೀಡುವುದು ಸರಿಯಲ್ಲ, ಇದು ಅಸಮಾನತೆಯಾಗುತ್ತದೆ. ಪುತ್ರಿ ಮದುವೆಯಾಗಿದ್ದ ತಕ್ಷಣ ಆಕೆಯ ಹಕ್ಕು ಮೊಟಕುಗೊಳಿಸುವುದು ಸರಿಯಲ್ಲ. ಪುತ್ರ ಪುತ್ರನಾಗಿಯೇ ಇದ್ದಾಗ, ಪುತ್ರಿಯನ್ನೂ ಸಹ ಅದೇ ರೀತಿ ಪರಿಗಣಿಸಬೇಕಾಗುತ್ತದೆ. ಮದುವೆ ಆಗುವುದರಿಂದ ಪುತ್ರನ ಸ್ಥಿತಿಗತಿ ಬದಲಾಗಲಿಲ್ಲವೆಂದರೆ, ಪುತ್ರಿಯ ಸ್ಥಾನ ಏಕೆ ಬದಲಾಗಬೇಕು ಎಂದೂ ನ್ಯಾಯಪೀಠ ತನ್ನ ಆದೇಶದಲ್ಲಿ ಪ್ರಶ್ನಿಸಿದೆ.

ಪ್ರಕರಣವೇನು?: ಅರ್ಜಿದಾರರು ಕೆಇಎ ನಡೆಸುವ ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಮಾಜಿ ಯೋಧರ ಕೋಟಾದಲ್ಲಿ ಅರ್ಜಿ ಸಲ್ಲಿಸಿದ್ದರು. ಅದಕ್ಕಾಗಿ ತಮ್ಮ ತಂದೆ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರಿಂದ ಅವಲಂಬಿತರ ಗುರುತಿನ ಚೀಟಿಗೆ ಸೈನಿಕ ಇಲಾಖೆಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿದಾರರು ವಿವಾಹವಾಗಿರುವುದರಿಂದ ನಿಯಮದಂತೆ ಅವರಿಗೆ ಐಡಿ ಕಾರ್ಡ್ ನೀಡಲಾಗದು ಎಂದು ಇಲಾಖೆ ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ನಲ್ಲಿ ಅವರು ಅರ್ಜಿ ಸಲ್ಲಿಸಿದ್ದರು. 

share
Next Story
X