ಕಾರ್ಕಳ: ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು
ಕಾರ್ಕಳ: ಅಡಿಕೆ ಕೊಯ್ಯುವಾಗ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸಿದೆ ಮೃತಪಟ್ಟ ಘಟನೆ ಕಾರ್ಕಳದಿಂದ ವರದಿಯಾಗಿದೆ.
ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಕಂಬಳಗುತ್ತು ನಿವಾಸಿ ವಿಶ್ವನಾಥ (52) ಮೃತ ಕೃಷಿಕಾರ್ಮಿಕ. ಇವರು ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದು, ಜ.3ರಂದು ತಮ್ಮ ಪರಿಚಯದವರ ಅಡಿಕೆ ತೋಟದಲ್ಲಿ ಅಡಿಕೆ ಕೊಯ್ಯುವಾಗ ಅಕಸ್ಮಿಕವಾಗಿ ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದರು. ಇವರಿಗೆ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಜ.4ರ ಅಪರಾಹ್ನ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಈ ಸಂಬಂಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





