ಬೆಂಗಳೂರು | 2022ರಲ್ಲಿ ರಸ್ತೆ ಅಪಘಾತ ಪ್ರಕರಣಗಳ ಸಂಖ್ಯೆ ಇಳಿಮುಖ: ಸಂಚಾರ ವಿಭಾಗದ ವಿಶೇಷ ಆಯುಕ್ತ ಎಂ.ಎ.ಸಲೀಮ್
''ಸುಗಮ ಸಂಚಾರಕ್ಕೆ ಕ್ರಮ''

''ಸುಗಮ ಸಂಚಾರಕ್ಕೆ ಕ್ರಮ''
ಬೆಂಗಳೂರು, ಜ.4: ರಸ್ತೆ ಅಪಘಾತ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಸಂಚಾರ ವಿಭಾಗದ ವಿಶೇಷ ಆಯುಕ್ತ ಎಂ.ಎ.ಸಲೀಮ್ ಹೇಳಿದ್ದಾರೆ.
ಬುಧವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಾಹನಗಳ ಸುಗಮ ಸಂಚಾರಕ್ಕಾಗಿ ನಗರದಲ್ಲಿ ಸಂಚಾರ ದಟ್ಟಣೆ ಇರುವ ಪ್ರದೇಶಗಳನ್ನು ಗುರುತಿಸಿ ಸುಗಮ ಸಂಚಾರಕ್ಕೆ ಅಗತ್ಯಕ್ರಮ ಕೈಗೊಳ್ಳಲಾಗಿದೆ. ಇನ್ನೂ, ಕಳೆದ 5 ವರ್ಷಕ್ಕೆ ಹೋಲಿಸಿದರೆ 2022ರಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ ಎಂದರು.
ಕಳೆದ ಐದು ವರ್ಷಗಳಿಂದ ನಗರದಲ್ಲಿ ಸಂಭವಿಸುತ್ತಿರುವ ಒಟ್ಟು ಅಪಘಾತಗಳ ಸಂಖ್ಯೆಯು 2018ನೆ ಸಾಲಿಗೆ ಹೋಲಿಸಿದಾಗ ಶೇ.17ರಷ್ಟು ಇಳಿಕೆಯಾಗಿರುತ್ತದೆ. ಮುಂದಿನ ದಿನಗಳಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ದಾಖಲಾಗುವ ಸಂಪರ್ಕ ರಹಿತ ಪ್ರಕರಣಗಳನ್ನು ಶೇ.100ಕ್ಕೆ ತರುವ ಧ್ಯೇಯೋದ್ದೇಶವಿದೆ ಎಂದರು.
Next Story





