ಜ. 8 ರಂದು ಕಾಸರಗೋಡಿನ ಬೇಳದಲ್ಲಿ 17ನೇ 'ಕವಿತಾ ಫೆಸ್ತ್'
ಕಾಸರಗೋಡು: ಕವಿತಾ ಟ್ರಸ್ಟ್ ವತಿಯಿಂದ ವರ್ಷಂಪ್ರತಿ ನಡೆಯುವ 'ಕವಿತಾ ಫೆಸ್ತ್' ಈ ಭಾರಿ ಕಾಸರಗೋಡು ಜಿಲ್ಲೆಯ ಬೇಳದಲ್ಲಿ ಜ. 8 ರಂದು ನಡೆಯಲಿದೆ. ಕಾರ್ಯಕ್ರಮವನ್ನು ಕೊಂಕಣಿ ಬರಹಗಾರ ಹಾಗೂ ಪತ್ರಕರ್ತರಾದ ಆಸ್ಟಿನ್ ಡಿ ಸೋಜಾ ಪ್ರಭು ಉದ್ಘಾಟಿಸಲಿದ್ದಾರೆ. ಯುವ ಬರಹಗಾರರಾದ ಸ್ಟ್ಯಾನಿ ಬೇಳ ಹಾಗೂ ಕೆಬಿಎಂ, ಗೋವಾ ಅಧ್ಯಕ್ಷ ಅನ್ವೇಶ ಸಿಂಗ್ಭಾಳ್ ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಭಾಗವಾಗಿ ನೆಲ್ಸನ್ ಹಾಗೂ ಲವೀನಾ ರೋಡ್ರಿಕ್ಸ್ ಪ್ರಾಯೋಜಕತ್ವದ ಚಾಫ್ರಾ ದೆಕೋಸ್ತಾ ಸ್ಮಾರಕ ಅಖಿಲ ಭಾರತ ಕವನ ವಾಚನ ಸ್ಪರ್ಧೆ ನಡೆಯಲಿದೆ.
ಕಾಸರಗೋಡಿನಲ್ಲಿ ಕೊಂಕಣಿಗರು ಎಂಬ ವಿಷಯದ ಮೇಲೆ ಕೊಂಕಣಿ ಬರಹಗಾರ ಸಂತೋಶ್ ಪೆರ್ಲ ಅವರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ನಡೆಯಲಿದೆ. ವಿಲ್ಲಿಯಂ ಪಾಯ್ಸ್ ಸಂವಾದವನ್ನು ನಡೆಸಿಕೊಡಲಿದ್ದಾರೆ. ಇದೇ ಸಂದರ್ಭದಲ್ಲಿ ಕೊಂಕಣಿ ಕವಿ ಹಾಗೂ ಸಾಹಿತಿಗಳಾದ ವಿಲ್ಸನ್ ಕಟೀಲ್ ರಚನೆಯ 'ಚಿತುರ್ಲೆಚೆ ಅಚ್ಛೇ ದಿನ್' ಕವನ ಸಂಕಲನ ಬಿಡುಗಡೆಗೊಳ್ಳಲಿದೆ.
ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ನಿರಾಕರ್ ಎಜುಕೇಶನ್ ಸೊಸಾಯ್ಟಿ ಅಧ್ಯಕ್ಷರಾದ ಪ್ರಶಾಂತ್ ನಾಯ್ಕ್ ಮುಖ್ಯ ಅಥಿತಿಯಾಗಿ ಭಾಗವಹಿಸಲಿರುವರು.
ಗೀತಾರಚನೆಕಾರ ರತ್ನಮಾಲ ದಿವಾಕರ್ ಹಾಗೂ ಅನಿವಾಸಿ ಉಧ್ಯಮಿ ಗೋಕುಲ್ ನಾಥ್ ಪ್ರಭು ಉಪಸ್ಥಿತರಿರುವರು. ಹಿರಿಯ ಕೊಂಕಣಿ ಕವಯತ್ರಿ ಇಂದು ಅಶೋಕ್ ಗೇರುಸೊಪ್ಪೆಯವರಿಗೆ ಮಥಾಯಸ್ ಕುಟಾಮ್ ಕವಿತಾ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.







