ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ: ಸಿಎಂ ಬೊಮ್ಮಾಯಿ ಘೋಷಣೆ
ಬೆಳಗಾವಿ | ರಸ್ತೆ ಅಪಘಾತದಿಂದ 6 ಮಂದಿ ಸಾವು ಪ್ರಕರಣ
ಬೆಳಗಾವಿ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದಿಂದ ಜಿಲ್ಲೆಯ ಸವದತ್ತಿ ಯಲ್ಲಮ್ಮ ಜಾತ್ರೆಗೆ ತೆರಳುತ್ತಿದ್ದ ವಾಹನ ಅಪಘಾತದಿಂದ 6 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸವದತ್ತಿ ಯಲ್ಲಮ್ಮ ಜಾತ್ರೆಗೆ ತೆರಳುತ್ತಿದ್ದ ವಾಹನ ಅಪಘಾತಕ್ಕೀಡಾಗಿ 6 ಜನ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ, ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಎಂದರು.
ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ನೀಡಲಾಗುವದು ಹಾಗೂ ಗಾಯಗೊಂಡವರ ಚಿಕಿತ್ಸೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದಿಂದ ಜಿಲ್ಲೆಯ ಸವದತ್ತಿ ಯಲ್ಲಮ್ಮ ಜಾತ್ರೆಗೆ ತೆರಳುತ್ತಿದ್ದ ವಾಹನ ಅಪಘಾತಕ್ಕಿಡಾಗಿ 6 ಜನ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ, ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ.
— Basavaraj S Bommai (@BSBommai) January 5, 2023
1/2