Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ರಿಂಗ್‌ರೋಡ್ ನಿರ್ಮಾಣಕ್ಕೆ...

ಕುಂದಾಪುರ: ರಿಂಗ್‌ರೋಡ್ ನಿರ್ಮಾಣಕ್ಕೆ ಗುದ್ದಲಿ ಪೂಜೆ

5 Jan 2023 7:15 PM IST
share
ಕುಂದಾಪುರ: ರಿಂಗ್‌ರೋಡ್ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕುಂದಾಪುರ: ಕುಂದಾಪುರ ಪುರಸಭಾ ವ್ಯಾಪ್ತಿಯ ನಗರದ ಎಲ್ಲಾ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ರಿಂಗ್ ರೋಡ್ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಚಾಲನೆ ನೀಡಲಾಯಿತು. 

ಕಾಮಗಾರಿ ನಡೆಯಲಿರುವ ಪ್ರದೇಶದಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಕುಂದಾಪುರ ಪುರಸಭೆಯ ಅಧ್ಯಕ್ಷೆ ವೀಣಾ ಭಾಸ್ಕರ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಮನವಿಯಂತೆ ಮಂಜೂರಾದ 19.8 ಕೋ. ರೂ. ವೆಚ್ಚದಲ್ಲಿ ಕಾಮಗಾರಿಗೆ ಟೆಂಡರ್ ಆಗಿದೆ. ಕುಂದಾಪುರ ನಗರವನ್ನು ಸುತ್ತುವರಿದಿರುವ ಮಹತ್ವಾಕಾಂಕ್ಷೆಯ ರಿಂಗ್ ರೋಡ್ ನಾಗರಿಕರ ಹಲವು ವರ್ಷಗಳ ಬಯಕೆಯಾಗಿತ್ತು ಎಂದರು.

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ದೂರದೃಷ್ಟಿತ್ವದಲ್ಲಿ ಸಾಕಾರಗೊಂಡ ರಿಂಗ್ ರೋಡ್ ನಿರ್ಮಾಣವಾದರೆ ನಗರದ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ನಗರದೊಳಗೆ ಪ್ರವೇಶ ಪಡೆಯದೆ ಕೋಡಿ ಮೊದಲಾದ ಭಾಗಗಳಿಗೆ, ಪುರಸಭೆ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಹೆದ್ದಾರಿಯಿಂದ ರಿಂಗ್ ರೋಡ್ ಮೂಲಕ ಹೋಗಲು ಸಾಧ್ಯವಿದೆ. ಆದ್ದರಿಂದ ರಿಂಗ್ ರೋಡ್ ನಿರ್ಮಾಣದ ಅವಶ್ಯವನ್ನು ಶಾಸಕರು ಅಂದೇ ಮನಗಂಡಿದ್ದು, ಇಂದು ಅವರ ಕನಸು ಸಾಕಾರಗೊಂಡಿದೆ ಎಂದು ವೀಣಾ ಭಾಸ್ಕರ್ ನುಡಿದರು.

ಆರಂಭದಲ್ಲಿ ರಿಂಗ್ ರಸ್ತೆ ಕಾಮಗಾರಿ ಪ್ರಭಾಕರ ಸಾಮಿಲ್‌ವರೆಗೆ ನಡೆಯಲಿದ್ದು, ಅಲ್ಲಿಂದ ಮುಂದುವರಿದ ಕಾಮಗಾರಿಗೆ 20 ಕೋಟಿ  ಅಂದಾಜು ಪಟ್ಟಿ ಸಿದ್ದಪಡಿಸಿ ಕೊಡಲಾಗಿದೆ. ಅನುದಾನದ ನಂತರ ರಿಂಗ್ ರಸ್ತೆಯನ್ನು ಕೋಡಿ ಸೇತುವೆ ತನಕ ನಿರ್ಮಾಣ ಮಾಡಲಾಗುತ್ತದೆ. ರಿಂಗ್ ರಸ್ತೆ ಎಡಬದಿಯಲ್ಲಿ ಫುಟ್ಪಾತ್ ನಿರ್ಮಾಣ, ನದಿ ದಂಡೆ ಕಟ್ಟುವ ಜೊತೆ ಡಬ್ಬಲ್ ರಸ್ತೆಯಾಗಿ ನಿರ್ಮಾಣ ಮಾಡಲಾಗುತ್ತದೆ ಎಂದರು.

ಉಪಾಧ್ಯಕ್ಷ ಸಂದೀಪ್ ಖಾರ್ವಿ, ಮುಖ್ಯಾಧಿಕಾರಿ ಮಂಜುನಾಥ್ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ವಿಜಯ ಎಸ್.ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ದೇವಾಡಿಗ, ಮಾಜಿ ಅಧ್ಯಕ್ಷೆ ವಸಂತಿ ಸಾರಂಗ, ಪುರಸಭೆ ಸದಸ್ಯರಾದ ಮೋಹನದಾಸ ಶೆಣೈ, ವನಿತಾ,  ಪ್ರಭಾಕರ ವಿ., ಸಂತೋಷ ಕುಮಾರ ಶೆಟ್ಟಿ, ರೋಹಿಣಿ ಉದಯ ಕುಮಾರ, ಶ್ವೇತ ಸಂತೋಷ್, ಶೇಖರ ಪೂಜಾರಿ, ನಾಮನಿರ್ದೇಶಿತ ಸದಸ್ಯರಾದ ಪುಷ್ಪಾ ಶೇಟ್, ಪ್ರಕಾಶ್ ಖಾರ್ವಿ, ಕಾಂಗ್ರೆಸ್ ಸದಸ್ಯರಾದ ಚಂದ್ರಶೇಖರ ಖಾರ್ವಿ, ದೇವಕಿ ಪಿ.ಸಣ್ಣಯ್ಯ, ಪ್ರಭಾವತಿ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ ಅಂಕದಕಟ್ಟೆ, ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನ ಸಮಿತಿ ಅಧ್ಯಕ್ಷ ಜಯಾನಂದ ಖಾರ್ವಿ ಉಪಸ್ಥಿತರಿದ್ದರು.

share
Next Story
X