Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತುಮಕೂರು ಘಟನೆ ಪುನರಾವರ್ತನೆಯಾಗದಂತೆ...

ತುಮಕೂರು ಘಟನೆ ಪುನರಾವರ್ತನೆಯಾಗದಂತೆ ಎಚ್ಚರ ವಹಿಸಿ: ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಾಗಣ್ಣ ಗೌಡ ಸೂಚನೆ

5 Jan 2023 3:40 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತುಮಕೂರು ಘಟನೆ ಪುನರಾವರ್ತನೆಯಾಗದಂತೆ ಎಚ್ಚರ ವಹಿಸಿ: ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಾಗಣ್ಣ ಗೌಡ ಸೂಚನೆ

ಉಡುಪಿ: ತುಮಕೂರಿನಲ್ಲಿ ಇತ್ತೀಚೆಗೆ ಗರ್ಭಿಣಿಯೊಬ್ಬರ ಮರಣಕ್ಕೆ ಕಾರಣವಾದ ಘಟನೆ ಇನ್ನೆಲ್ಲೂ ಪುನರಾವರ್ತನೆಯಾಗದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಎಚ್ಚರ ವಹಿಸಬೇಕು. ಹೆರಿಗಾಗಿ ಆಸ್ಪತ್ರೆಗೆ ಬರುವ ಯಾವುದೇ ಮಹಿಳೆಯ ಬಳಿ ದಾಖಲೆಗಳಿಲ್ಲದಿದ್ದರೂ ಆಕೆಯನ್ನು ದಾಖಲಿಸಿ ಕೊಂಡು ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಆರ್‌ಟಿಇ-2009,ಬಾಲ ನ್ಯಾಯ ಮಂಡಳಿ(ಮಕ್ಕಳ ಪಾಲನೆ ಪೋಷಣೆ) ಕಾಯ್ದೆ-2015 ಹಾಗೂ ಪೋಕ್ಸೋ ಕಾಯ್ದೆ-2012 ಅನುಷ್ಠಾನ ಕುರಿತು ಭಾಗೀದಾರ ಇಲಾಖೆಗಳೊಂದಿಗಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. 

ಮಹಿಳೆಯೊಬ್ಬರು ಹೆರಿಗೆಗೆಂದು ಸರಕಾರಿ ಆಸ್ಪತ್ರೆಗೆ ಬಂದಾಗ ಆಕೆಯೊಂದಿಗೆ ಸೌಜನ್ಯದಿಂದ ಮಾತನಾಡಿ, ದಾಖಲು ಮಾಡಿ ಸಾಂತ್ವನ ಹೇಳಬೇಕು. ಅಸ್ಪತೆಗಳಿಗೆ ಚಿಕಿತ್ಸೆಗೆ ಬರುವ ಗರ್ಭಿಣಿಯರಿಗೆ ಆದ್ಯತೆಯ ಮೇಲೆ ಚಿಕಿತ್ಸೆ ನೀಡಬೇಕು ಮತ್ತು ಸಮಾಲೋಚಕರನ್ನು ನೇಮಿಸಿಕೊಂಡು ಅವರಿಗೆ ಸೂಕ್ತ ಸಲಹೆ-ಸೂಚನೆಗಳನ್ನು ನೀಡಬೇಕು ಎಂದರು.

ಆರ್ಥಿಕವಾಗಿ ಸಬಲರಾಗಿರುವವರು  ಪೌಷ್ಠಿಕ ಆಹಾರ  ಸೇವಿಸದೇ, ಬಡವರು ಪೌಷ್ಠಿಕ ಆಹಾರದ ಕೊರತೆಯಿಂದಾಗಿ ರಕ್ತ ಹೀನತೆಯಿಂದ  ಬಳಲುತ್ತಾರೆ. ಇಂಥ ಮಹಿಳೆಯರು ಗರ್ಭಿಣಿಯರಾದಾಗ  ಆರೋಗ್ಯವಂತ ಮಗುವಿಗೆ ಜನ್ಮ ನೀಡಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಹೆಣ್ಣುಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಅವಶ್ಯ ಎಂದವರು ಹೇಳಿದರು.

ಮಕ್ಕಳಿಗೆ ಉತ್ತಮ ವಾತಾವರಣ ಕಲ್ಪಿಸಿ: ಬಾಲ್ಯಾವಸ್ಥೆಯಲ್ಲಿಯೇ ಮಕ್ಕಳಿಗೆ  ಉತ್ತಮ ವಾತಾವರಣ ಕಲ್ಪಿಸಿ, ಶಿಕ್ಷಣ ನೀಡುವುದು ಸೇರಿದಂತೆ ತಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಅವಕಾಶ ಕಲ್ಪಿಸಿ. ಮಕ್ಕಳ ಹಕ್ಕುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ, ಅವರುಗಳನ್ನು ಭವಿಷ್ಯದ ಸತ್ಪ್ರಜೆಗಳನ್ನಾಗಿ ರೂಪಿಸಿ ಎಂದವರು ನುಡಿದರು.

ಸರಕಾರ ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸುವ ಉದ್ದೇಶದಿಂದ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ. ಇವುಗಳ ಅನುಷ್ಠಾನ ಸಮರ್ಪಕವಾಗಿ ಆದಲ್ಲಿ ಮಾತ್ರ ಮಕ್ಕಳ ವಿಕಾಸವಾಗುವುದರೊಂದಿಗೆ ಬಲಿಷ್ಠ ಭಾರತ ನಿರ್ಮಾಣ ಮಾಡಲು ಸಾಧ್ಯ ಎಂದರು.

ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯು ತ್ತಿರುವ ಬಗ್ಗೆ ದೂರು ಕೇಳಿ ಬರುತ್ತಿದೆ. ಇವುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗುವುದರ ಜೊತೆಗೆ ಶಿಕ್ಷಣ ಒದಗಿಸುವ ಬಗ್ಗೆ ವಿಶೇಷ ಒತ್ತು ನೀಡಬೇಕು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಜನರ ಸಹಭಾಗಿತ್ವ ಮಹತ್ವದಾಗಿದೆ ಎಂದರು.

ಕೋವಿಡ್ ಸಾಂಕ್ರಾಮಿಕ ರೋಗದ ದಿನಗಳಲ್ಲಿ ಮಕ್ಕಳಿಗೆ ಮೊಬೈಲ್‌ಗಳಲ್ಲಿ ಶಿಕ್ಷಣ ನೀಡುವುದು ಅನಿವಾರ್ಯವಾಗಿತ್ತು. ಆದರೆ ಮಕ್ಕಳು ನಂತರದ ದಿನಗಳಲ್ಲಿಯೂ ಅದಕ್ಕೆ ದಾಸರಾಗಿದ್ದಾರೆ. ಅವರನ್ನು ಇದರಿಂದ ಹೊರತರಲು ಮುಂದಾಗಬೇಕಾಗಿದೆ. ಮಕ್ಕಳಿಗೆ ದಂಡಿಸಿ ಸರಿದಾರಿಗೆ ತರುವ ಬದಲು ಮನಪರಿವರ್ತನೆ ಮಾಡುವ ಮೂಲಕ ಸರಿದಾರಿಗೆ ತರಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿ ನಿಲಯಗಳಲ್ಲಿದ್ದು,  ವ್ಯಾಸಂಗ ಮಾಡುತ್ತಿರುವ ಮಕ್ಕಳ ಜೊತೆಯಲ್ಲಿ ಅಲ್ಲಿನ ವಾರ್ಡನ್‌ಗಳು ಸ್ನೇಹಪರರಾಗಿ ವರ್ತಿಸುವ ಜೊತೆಗೆ ಮಕ್ಕಳ  ಚಟುವಟಿಕೆ ಹಾಗೂ ಶಿಕ್ಷಣದ ಬಗ್ಗೆ ನಿಗಾ ವಹಿಸಬೇಕು. ಸಮಾಜದ ಅನಿಷ್ಠ ಪದ್ದತಿಗಳಾದ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ಸೇರಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಆಧಿಕಾರಿಗಳು ಕ್ರಮವಹಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ತರಬೇತಿನಿರತ ಐಎಎಸ್ ಅಧಿಕಾರಿ ಯತೀಶ್,  ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಎಎಸ್ಪಿ ಸಿದ್ದಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪ ನಿರ್ದೇಶಕ ಶಿವಕುಮಾರಯ್ಯ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X