ವೈ.ಎಸ್.ವಿ ದತ್ತಾ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ದಿನಾಂಕ ನಿಗದಿ
''ನಾನು ಎಲ್ಲೇ ಇದ್ದರೂ ದೇವೇಗೌಡರ ಹಾರೈಕೆ ನನ್ನ ಮೇಲೆ ಇದ್ದೇ ಇರುತ್ತದೆ''
''ನಾನು ಎಲ್ಲೇ ಇದ್ದರೂ ದೇವೇಗೌಡರ ಹಾರೈಕೆ ನನ್ನ ಮೇಲೆ ಇದ್ದೇ ಇರುತ್ತದೆ''
ಚಿಕ್ಕಮಗಳೂರು, ಜ. 05: 'ಜನವರಿ 15ರ ಬಳಿಕ ಕಾಂಗ್ರೆಸ್ ಪಕ್ಷ ಸೇರುತ್ತೇನೆ' ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಘೋಷಿಸಿದ್ದಾರೆ.
ಕಡೂರು ತಾಲೂಕಿನ ಸ್ವಗ್ರಾಮ ಯುಗಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಕಳೆದ ಐವತ್ತು ವರ್ಷಗಳಿಂದ ಮಾಜಿ ಪ್ರಧಾನಿ ದೇವೇಗೌಡರು-ನನ್ನದು ತಂದೆ ಮಕ್ಕಳ ಸಂಬಂಧ ಆಗಿದೆ. ನಾನು ಎಲ್ಲೇ ಇದ್ದರೂ ಅವರ ಹಾರೈಕೆ ನನ್ನ ಮೇಲೆ ಇದ್ದೇ ಇರುತ್ತದೆ. ಹಾಗೆಯೇ ಅನಿವಾರ್ಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ಇದನ್ನು ದೇವೇಗೌಡರಿಗೆ ಹೇಳಲು ಮುಜುಗರ ನನ್ನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಾರೆ.'' ಎಂದರು.
''ನನ್ನನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದೇ ದೇವೇಗೌಡರು. ಅದು ನನ್ನ ರಾಜಕೀಯ ಜೀವನಕ್ಕೆ ಸಿಕ್ಕ ತಿರುವು. ಮಾಜಿ ಸಿಎಂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರುತ್ತೇನೆ'' ಎಂದು ಹೇಳಿದರು.
Next Story