ವಿಟ್ಲ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ವಿಟ್ಲ, ಜ.6: ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಸಾರಡ್ಕದಲ್ಲಿ ಶುಕ್ರವಾರ ನಡೆದಿದೆ.
ಬೆಳ್ತಗಂಡಿ ಮಚ್ಚಿನ ಭುಜಂಗಬೆಟ್ಟು ನಿವಾಸಿ ಕೇಶವ ನಾಯ್ಕ (56) ಮೃತಪಟ್ಟವರಾಗಿದ್ದಾರೆ.
ಇವರು ಕೇಪು ಗ್ರಾಮದ ಸಾರಡ್ಕದಲ್ಲಿ ಕೃಷಿಕರೊಬ್ಬರ ಮನೆಯಲ್ಲಿ ಉಳಿದುಕೊಂಡು ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಕೇಶವ ಹಲಸಿನ ಮರವನ್ನೇರಿ ಕಾಳುಮೆಣಸು ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದಿದ್ದರೆನ್ನಲಾಗಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಈ ಬಗ್ಗೆ ಮೃತರ ಸಹೋದರ ನೀಡಿದ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರು | ಪೊಲೀಸರ ವಶದಲ್ಲಿದ್ದ ದಲಿತ ಯುವಕ ಸಾವು:ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ
Next Story