Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ...

ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣ: 5 ವರ್ಷಗಳಲ್ಲಿ 14 ಸಾವಿರಕ್ಕೂ ಅಧಿಕ ಮಂದಿಯ ಬಂಧನ

ಜಿ.ಮಹಾಂತೇಶ್ಜಿ.ಮಹಾಂತೇಶ್6 Jan 2023 11:38 AM IST
share
ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣ: 5 ವರ್ಷಗಳಲ್ಲಿ 14 ಸಾವಿರಕ್ಕೂ ಅಧಿಕ ಮಂದಿಯ ಬಂಧನ

ಬೆಂಗಳೂರು: ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಕಳೆದ 5 ವರ್ಷಗಳಲ್ಲಿ 14,074 ಮಂದಿಯನ್ನು ಅತ್ಯಾಚಾರ ಪ್ರಕರಣಗಳಲ್ಲಿ ಬಂಧಿಸಲಾಗಿದೆ. ಈ ಪೈಕಿ ಬಿಜೆಪಿ ಸರಕಾರದ 2 ವರ್ಷದ ಅವಧಿಯಲ್ಲಿ 8,909 ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ.

ವಿಧಾನಪರಿಷತ್ ಸದಸ್ಯ ಪಿ.ಆರ್. ರಮೇಶ್ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ 2022ರ ಡಿಸೆಂಬರ್ 26ರಂದು ಉತ್ತರ ಒದಗಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತರ ಪೈಕಿ  ಒಟ್ಟು 73 ಮಂದಿ ಕಳೆದ 5 ವರ್ಷದಲ್ಲಿ ಸಾವಿಗೀಡಾಗಿದ್ದಾರೆ ಎಂಬ ಅಂಕಿ ಅಂಶಗಳನ್ನು ನೀಡಿದ್ದಾರೆ.

ಕೋವಿಡ್  ಲಾಕ್‌ಡೌನ್ ಸಂದರ್ಭದಲ್ಲಿ  6,125 ಆರೋಪಿಗಳನ್ನು ಬಂಧಿಸಿರುವುದು ಪಟ್ಟಿಯಿಂದ ತಿಳಿದು ಬಂದಿದೆ.

ಅತ್ಯಾಚಾರ ಪ್ರಕರಣಗಳಲ್ಲಿ ರಾಜ್ಯದಲ್ಲಿ ಪೊಕ್ಸೊ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗಿದೆ. ಪೊಕ್ಸೊ ಕಾಯ್ದೆಯ ಬಗ್ಗೆ ಹೆಚ್ಚಿನ ಅರಿವು ಸಾರ್ವಜನಿಕರಲ್ಲಿದೆ. ಅತ್ಯಾಚಾರ ಪ್ರಕರಣಗಳು, ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಿನ ಪ್ರಮಾಣದ ನೊಂದವರು ಮುಕ್ತವಾಗಿ, ಭಯ ಭೀತಿಯಿಲ್ಲದೇ ಪೊಲೀಸ್ ಠಾಣೆಗೆ ಬಂದು ದೂರುಗಳನ್ನು ದಾಖಲಿಸುತ್ತಿದ್ದಾರೆ. ಹೀಗಾಗಿ ಅತ್ಯಾಚಾರ/ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವು ಬೆಳಕಿಗೆ ಬರುವ ಮೂಲಕ ಪ್ರಕರಣಗಳು ದಾಖಲಾಗುತ್ತಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉತ್ತರದಲ್ಲಿ ವಿವರಣೆ ನೀಡಿದ್ದಾರೆ.

2018ರಲ್ಲಿ 16 ಮಂದಿ ಸಂತ್ರಸ್ತರು ಸಾವಿಗೀಡಾಗಿದ್ದರೆ 2,430 ಆರೋಪಿಗಳನ್ನು ಬಂಧಿಸಲಾಗಿದೆ.  2019ರಲ್ಲಿ 14 ಮಂದಿ ಸಂತ್ರಸ್ತರು ಸಾವಿಗೀಡಾಗಿದ್ದು, ಈ ಪ್ರಕರಣಗಳಲ್ಲಿ 2,735 ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ.  2020ರಲ್ಲಿ 13 ಮಂದಿ ಸಾವಿಗೀಡಾಗಿದ್ದರೆ 2,627 ಆರೋಪಿಗಳು ಬಂಧನದಲ್ಲಿದ್ದಾರೆ. 2021ರಲ್ಲಿ 20 ಮಂದಿ ಸಾವಿಗೀಡಾಗಿದ್ದರೆ 3,498 ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. 2022ರ ನವೆಂಬರ್ 30ರವರೆಗೆ ಒಟ್ಟು 10 ಮಂದಿ ಸಾವಿಗೀಡಾಗಿದ್ದು, ಈ ಪ್ರಕರಣಗಳಲ್ಲಿ ಒಟ್ಟು 2,784 ಮಂದಿ ಆರೋಪಿಗಳನ್ನು ಬಂಧಿಸಿರುವುದು ಸಚಿವ ಆರಗ ಜ್ಞಾನೇಂದ್ರ ಅವರು ಒದಗಿಸಿರುವ ಉತ್ತರದಿಂದ ತಿಳಿದು ಬಂದಿದೆ.

ಜಿಲ್ಲಾವಾರು ಪಟ್ಟಿ: ಬೆಂಗಳೂರು ನಗರ ಘಟಕವೊಂದರಲ್ಲೇ ಕಳೆದ 5 ವರ್ಷಗಳಲ್ಲಿ 2,214 ಆರೋಪಿಗಳನ್ನು ಅತ್ಯಾಚಾರ ಪ್ರಕರಣಗಳಲ್ಲಿ ಬಂಧಿಸಲಾಗಿದೆ. ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿ 714, ಶಿವಮೊಗ್ಗದಲ್ಲಿ 703, ಮಂಡ್ಯದಲ್ಲಿ 676 ಆರೋಪಿಗಳನ್ನು ಬಂಧಿಸಲಾಗಿದೆ. 2018ರಲ್ಲಿ ಬೆಂಗಳೂರು ನಗರದಲ್ಲಿ 461, ಮಂಡ್ಯದಲ್ಲಿ 138, ಬೆಳಗಾವಿ ಜಿಲ್ಲೆಯಲ್ಲಿ 135, ಶಿವಮೊಗ್ಗದಲ್ಲಿ 131, ಹಾಸನದಲ್ಲಿ 116 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

2019ರಲ್ಲಿ ಬೆಂಗಳೂರು ನಗರದಲ್ಲಿ 441, ಮಂಡ್ಯದಲ್ಲಿ 152, ಬೆಳಗಾವಿಯಲ್ಲಿ 142, ಶಿವಮೊಗ್ಗದಲ್ಲಿ 126, ಚಿಕ್ಕಬಳ್ಳಾಪುರದಲ್ಲಿ 119 ಆರೋಪಿಗಳನ್ನು ಬಂಧಿಸಲಾಗಿದೆ. 2020ರಲ್ಲಿ ಬೆಂಗಳೂರು ನಗರದಲ್ಲಿ 378, ಚಿಕ್ಕಬಳ್ಳಾಪುರದಲ್ಲಿ 160, ಮಂಡ್ಯದಲ್ಲಿ 140, ಹಾಸನದಲ್ಲಿ 126, ಶಿವಮೊಗ್ಗದಲ್ಲಿ 118 ಮಂದಿ ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ.

2021ರಲ್ಲಿ ಬೆಂಗಳೂರು ನಗರದಲ್ಲಿ 467, ಚಿಕ್ಕಬಳ್ಳಾಪುರದಲ್ಲಿ 195, ಚಿಕ್ಕಮಗಳೂರು ಜಿಲ್ಲೆಯಲ್ಲಿ 189, ಹಾಸನದಲ್ಲಿ 185, ದಾವಣಗೆರೆಯಲ್ಲಿ 155, ಶಿವಮೊಗ್ಗದಲ್ಲಿ 149, ತುಮಕೂರು ಜಿಲ್ಲೆಯಲ್ಲಿ 146, ಮಂಡ್ಯದಲ್ಲಿ 145 ಆರೋಪಿಗಳನ್ನು ಬಂಧಿಸಲಾಗಿದೆ. 2022ರಲ್ಲಿ ಬೆಂಗಳೂರು ನಗರದಲ್ಲಿ 467, ಶಿವಮೊಗ್ಗದಲ್ಲಿ 179, ಬೆಳಗಾವಿಯಲ್ಲಿ 147, ಹಾಸನದಲ್ಲಿ 136, ಚಿಕ್ಕಬಳ್ಳಾಪುರದಲ್ಲಿ 123 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X