Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಜನವರಿ ೮ರ ಜನಸಾಹಿತ್ಯ ಸಮ್ಮೇಳನಕ್ಕೆ...

ಜನವರಿ ೮ರ ಜನಸಾಹಿತ್ಯ ಸಮ್ಮೇಳನಕ್ಕೆ ಬೆಂಬಲ ಯಾಕೆಂದರೆ...

ಬಹಿರಂಗ ಪತ್ರ

6 Jan 2023 12:04 PM IST
share
ಬಹಿರಂಗ ಪತ್ರ

ಹಾವೇರಿ ಸಾಹಿತ್ಯ ಸಮ್ಮೇಳನದ ನ್ಯೂನತೆಗಳನ್ನು ಪ್ರಶ್ನಿಸಿ ಅನೇಕ ಬರಹಗಾರರು, ಚಿಂತಕರು, ಈ ಸಮ್ಮೇಳನದ ರೂಪುರೇಷೆ ಹಾಗೂ ಅಧ್ಯಕ್ಷರ ನಿಲುವು ನಡೆಗಳ ಬಗ್ಗೆ ತಮ್ಮ ವಿರೋಧವನ್ನು ವ್ಯಕ್ತ ಪಡಿಸಿದ್ದಾರೆ. ಈ ಯಾವುದೇ ಆಕ್ಷೇಪಣೆಗಳು ಮತ್ತು ವಿರೋಧ ಯಾವುದೇ ವೈಯಕ್ತಿಕ ನೆಲೆಯಿಂದ ಅಥವಾ ಪಕ್ಷ ಸಿದ್ಧಾಂತದ ನೆಲೆಯಿಂದ ಬಂದವುಗಳಲ್ಲ. ಬರಹಗಾರರಾಗಿ, ಕನ್ನಡದ ಚಿಂತಕರಾಗಿ ಹಾಗೂ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಸಾಹಿತ್ಯಗಳ ಬಗ್ಗೆ ಗಂಭೀರ ಕಾಳಜಿ ಉಳ್ಳವರಾಗಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೇ ದಿನಾಂಕ ೮ ಜನವರಿಯಂದು ಬೆಂಗಳೂರಿನಲ್ಲಿ ಜನಪರ ನಿಲುವಿನ ಜನ ಸಾಹಿತ್ಯ ಸಮ್ಮೇಳನವನ್ನೂ ನಡೆಸುತ್ತಿದ್ದಾರೆ. ನಾವು ಅವರ ನಿಲುವುಗಳನ್ನು ಬೆಂಬಲಿಸಲು ಕಾರಣವೇನೆಂದರೆ ಇಂದಿನ ಸಂದರ್ಭದಲ್ಲಿ ಪ್ರಜಾಪ್ರಭುತ್ವವಾದಿ ಸಂಸ್ಥೆಗಳನ್ನು ನಿಷ್ಕ್ರಿಯಗೊಳಿಸುವ ಪ್ರಯತ್ನಗಳು ಸತತವಾಗಿ ನಡೆಯುತ್ತಿವೆ. ಇದಕ್ಕೆ ಸಮಾನಾಂತರವಾಗಿ ಸಾಂಸ್ಕೃತಿಕ ಸಂಸ್ಥೆಗಳ ಮೇಲೆ ಕರ್ನಾಟಕದಲ್ಲಿ ಬೆಂಬಲಿತವಾದ ಆಕ್ರಮಣಗಳು ನಡೆದಿವೆ. ಮುಖ್ಯವಾಗಿ ಶಿಕ್ಷಣ, ಸಾಹಿತ್ಯ ಹಾಗೂ ಸಾಂಸ್ಕೃತಿಕ ವಲಯಗಳ ಮೇಲೆ ಇವು ನಡೆದಿವೆ. ಹಾವೇರಿ ಸಮ್ಮೇಳನವನ್ನು ಇಂಥದ್ದೇ ದುರುದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎನ್ನುವುದರ ಬಗ್ಗೆ ನಮಗೆ ಸಂದೇಹವಿಲ್ಲ. ನಮ್ಮ ದೃಷ್ಟಿಯಲ್ಲಿ ಸಾಹಿತ್ಯವು ಯಾವಾಗಲೂ ಜನಪರವಾದ, ಪ್ರಜಾಪ್ರಭುತ್ವವಾದಿಯಾದ ಮೌಲ್ಯಗಳನ್ನು ಪ್ರತಿನಿಧಿಸುತ್ತದೆ. ಈ ಮೌಲ್ಯಗಳ ಜೀವನಾಡಿಯಾದ ಸಂವಿಧಾನವನ್ನು ಬೆಂಬಲಿಸುತ್ತದೆ.

ಹಾವೇರಿ ಸಮ್ಮೇಳನವು ಅಲ್ಪಸಂಖ್ಯಾತರ ದ್ವೇಷ, ಕನ್ನಡ ಪರಂಪರೆಗಳ ಅವಗಣನೆಯ ಉದ್ದೇಶ ಹೊಂದಿದೆ. ಬರಹಗಾರರ ಆಕ್ಷೇಪಣೆಗಳಿಂದಾಗಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಆತ್ಮಾವಲೋಕನ ಮಾಡಿಕೊಳ್ಳುತ್ತಾರೆ ಎಂದು ಯಾರೂ ನಿರೀಕ್ಷಿಸಿರಲೂ ಇಲ್ಲ. ನಿರೀಕ್ಷೆಯಂತೆ ಅವರು ಉಡಾಫೆ, ಸ್ವಸಮರ್ಥನೆ, ಸುಳ್ಳುಗಳಿಂದ ಕೂಡಿದ ಹೇಳಿಕೆಗಳನ್ನು ನೀಡಿದ್ದಾರೆ. ಪ್ರಗತಿಪರರನ್ನು ಹೀಯಾಳಿಸಿದ್ದಾರೆ. ಬಲಪಂಥೀಯ ಧೋರಣೆಗೆ ಅನುಗುಣವಾಗಿ ತಮ್ಮ ನಾಲಗೆ ಹರಿಬಿಟ್ಟಿದ್ದಾರೆ. ತಾವೇ ಕನ್ನಡದ ಏಕೈಕ ಪ್ರತಿನಿಧಿ ಎನ್ನುವ ಮಾನಸಿಕ ವಿಕಲ್ಪವನ್ನು ತೋರಿಸಿದ್ದಾರೆ. ತಮ್ಮ ಕುತ್ಸಿತ ಹಾಗೂ ಅಲ್ಪಮತೀಯ ಆರ್ಭಟದ ಮಾತುಗಳಿಂದ ಬರಹಗಾರರು ಹೆದರಿ ಹಿಂದೆ ಸರಿಯುತ್ತಾರೆ ಎನ್ನುವ ಭ್ರಮೆಯಲ್ಲಿದ್ದಾರೆ.

ಜನವರಿ ೮ರ ಪ್ರತಿರೋಧ ಸಮಾವೇಶ ಕೇವಲ ಶುರುವಾತು ಅಷ್ಟೆ. ಕರ್ನಾಟಕದ ಜನ ಸಾಮಾನ್ಯರು ಕಟ್ಟಿದ ಸಾಹಿತ್ಯ ಪರಿಷತ್ತನ್ನು ಮನುಷ್ಯ ವಿರೋಧಿ ಸಿದ್ಧಾಂತ ಹಾಗೂ ಕ್ರಿಯೆಗಳಿಂದ ಶುದ್ಧಗೊಳಿಸಿ ಅದು ಕನ್ನಡ ಪರಂಪರೆಯ ಬಹುತ್ವ, ಜಾತ್ಯತೀತ, ಧರ್ಮಾತೀತ, ಮಾನವೀಯ ಕಾಳಜಿಗಳನ್ನು ಹೊಂದಿದ ಸಂಸ್ಥೆಯಾಗಿ ಮುಂದುವರಿಯುವಂತೆ ಕಾಪಾಡಲು ಬರಹಗಾರರು ಸನ್ನದ್ಧರಾಗಿದ್ದಾರೆ. ಅಧ್ಯಕ್ಷರ ಹೇಳಿಕೆಗಳನ್ನು ಅತ್ಯಂತ ಮರುಕ ಹಾಗೂ ಕರುಣೆಯಿಂದ ನಾವು ಗಮನಿಸಿದ್ದೇವೆ. ಆದರೆ ಸದ್ಯದ ಸಂದರ್ಭದಲ್ಲಿ ಅವುಗಳನ್ನು ತೀವ್ರವಾಗಿ ಖಂಡಿಸುವುದು ನಮ್ಮ ನೈತಿಕ ಜವಾಬ್ದಾರಿಯೆಂದು ತಿಳಿದು ಈ ಹೇಳಿಕೆಯನ್ನು ಬಿಡುಗಡೆ ಮಾಡುತ್ತಿದ್ದೇವೆ.

ಇದೇ ವೇಳೆಗೆ ರಾಜ್ಯದ ಇತರ ಜಿಲ್ಲೆಗಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಮತ್ತು ಸದಸ್ಯರು ಕನ್ನಡ ಸಾಹಿತ್ಯ ಪರಿಷತ್ತಿನ ಇಂದಿನ ಅಧ್ಯಕ್ಷರ ಈ ಕನ್ನಡದ ಕೂಡು ಬಾಳ್ವಿಕೆಯ ಪರಂಪರೆಗೆ ವಿರೋಧವಾದ ನಡೆಯನ್ನು ವಿರೋಧಿಸಿ ಜಾತ್ಯತೀತ, ಮತ ನಿರಪೇಕ್ಷ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್ತನ್ನು ಉಳಿಸಿ ಬೆಳೆಸಲು ಮುಂದಾಗಬೇಕೆಂದು ವಿನಂತಿಸುತ್ತೇವೆ.

-ಪ್ರೊ.ಕೆ.ಮರುಳಸಿದ್ದಪ್ಪ, ಡಾ.ಎಸ್.ಜಿ.ಸಿದ್ದರಾಮಯ್ಯ, ಪ್ರೊ.ರಾಜೇಂದ್ರ ಚೆನ್ನಿ, ಡಾ.ವಿಜಯಾ, ಡಾ.ಬಂಜಗೆರೆ ಜಯಪ್ರಕಾಶ್, ವಿಮಲಾ.ಕೆ.ಎಸ್, ಬಿ.ಶ್ರೀಪಾದ ಭಟ್, ಎನ್.ಆರ್.ವಿಶುಕುಮಾರ್, ಟಿ.ಸುರೇಂದ್ರ ರಾವ್, ಕೆ.ನೀಲಾ, ಡಾ.ಮೀನಾಕ್ಷಿ ಬಾಳಿ, ಬಿ.ಎನ್.ಯೋಗಾನಂದ

share
Next Story
X